ಮಾಹಿತಿ
ಬಿಜೆಪಿ ಪಕ್ಷದ ಎಸ್ಸಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷರಿಂದ ಕುಸುಮ ವಾಣಿ ಬಿಡುಗಡೆ
ಮಾಹಿತಿ
ಹೊಯ್ಸಳ ಪ್ರಶಸ್ತಿಗೆ ಸರಕಾರಿ ಪ್ರೌಢಶಾಲೆ ಬಳಗಾನೂರು ವಿದ್ಯಾರ್ಥಿ ರಮೇಶಯಲುಪಯ್ಯ ಆಯ್ಕೆ
ಮಸ್ಕಿ :- 2020 -21 ನೇ ಸಾಲಿನ ಮಹಿಳಾ ಮತ್ತು ಮಕ್ಕಳಅಭಿವೃದ್ಧಿಇಲಾಖೆ ವತಿಯಿಂದ ಕೊಡುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿಯಲ್ಲಿ ಬಳಗಾನೂರು ಪಟ್ಟಣದ ಸರಕಾರಿ ಪ್ರೌಢಶಾಲೆ ಬಳಗಾನೂರಿನ 9ನೇ ತರಗತಿ ವಿದ್ಯಾರ್ಥಿ ರಮೇಶ ಯಲುಪಯ್ಯ ಸ್ಕೌಟ್ ವಿದ್ಯಾರ್ಥಿಯಾದ ಇವರು ಕ್ರೀಡಾ (ಖೋಖೋ) ಕ್ಷೇತ್ರದಿಂದ ಹೊಯ್ಸಳ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ರಮೇಶ ಯಲುಪಯ್ಯ ಜಿಲ್ಲಾಮಟ್ಟದ ಹೊಯ್ಸಳ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವಮ್ಮ , ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರಹಾಗೂ ಬೋಧಕ ಸಿಬ್ಬಂದಿ ವರ್ಗ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಊರಿನ ನಾಗರಿಕರು ಅಭಿನಂದಿಸಿದ್ದಾರೆ.
ವರದಿ : ದುರ್ಗೇಶ್ ಬೋವಿ ಮಸ್ಕಿ
ಮಾಹಿತಿ
ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ
ನಾಳೆಯಿಂದ ದೇಶದ ಪರ್ಯಾಯ ದೀಪದ ಹಲವು ಭಾಗಗಳಲ್ಲಿ ಹಾಗೂ ಕೇಂದ್ರ ಭಾರತದ ಹಲವು ಪ್ರದೇಶಗಳಲ್ಲಿ ಗುಡುಗುಸಹಿತ ಮಳೆಯಾಗಲಿದೆ.
ಒಡಿಸ್ಸಾ, ಪಶ್ಚಿಮ ಬಂಗಾಳ, ಸಿಕ್ಕಿಂ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಹಾಸನ, ಧಾರವಾಡ, ಬೀದರ್, ಹಾವೇರಿ ,ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾಹಿತಿ
ಬಿಳ್ಳೂರಿನಲ್ಲಿ ಕುಷ್ಟರೋಗ ನಿರ್ಮೂಲನಾ ಅರಿವು ಕಾರ್ಯಕ್ರಮ
ಬಾಗೇಪಲ್ಲಿ: ತಾಲ್ಲೂಕಿನ ಬಿಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಪ್ರೌಢಶಾಲಾ ಸಂಯುಕ್ತಾಶ್ರಯದಲ್ಲಿ
ಶನಿವಾರ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನಾ ಅರಿವು ಕಾರ್ಯಕ್ರಮ ನಡೆಯಿತು.
ವೈದ್ಯಾಧಿಕಾರಿ ಡಾ.ಶಿರೀಷ್ ಕಾಶ್ಯಪ್ ಮಾತನಾಡಿ, ಕುಷ್ಟ ಒಂದು ಸಾಂಕ್ರಾಮಿಕ ರೋಗ. ಇದು ಮೈಕ್ರೋ ಬ್ಯಾಕ್ಟೀರಿಯ ಲೆಪ್ರೆ ಎಂಬ ಬ್ಯಾಕ್ಟೀರಿಯದಿಂದ ಹರಡುತ್ತದೆ. ಇದು ಚರ್ಮ ಮತ್ತು ನರಗಳಿಗೆ ಬರುವ ಕಾಯಿಲೆ, ವಂಶಪಾರಂಪರ್ಯದಿಂದ ಅನುವಂಶಿಕವಾಗಿ ಬರುವುದಿಲ್ಲ ಎಂದರು.
ದೇಹದ ಯಾವುದೇ ಭಾಗದಲ್ಲಿ ತಿಳಿ ಬಿಳಿ, ತಾಮ್ರ ಬಣ್ಣದ ಕೆಂಪು ಮಿಶ್ರಿತ ಮಚ್ಚೆ ಕಂಡು ಬಂದರೇ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳಿಂದ ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಮಚ್ಚೆಯಲ್ಲಿ ಸ್ಪರ್ಶಜ್ಞಾನ, ನೋವು, ನವೆ ಇರುವುದಿಲ್ಲ. ಕೈ ಕಾಲುಗಳಲ್ಲಿ ಜೋಮು ಹಿಡಿಯುವುದು ಹಾಗೂ ಸ್ಪರ್ಶಜ್ಞಾನ ಕಳೆದುಕೊಳ್ಳುವುದು. ಚರ್ಮದ ಮೇಲೆ ಎಣ್ಣೆ ಸವರಿದಂತೆ ಕಾಣಿಸುವುದು. ಮುಖ ಮತ್ತು ಕಿವಿಯ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುವುದು ರೋಗದ ಲಕ್ಷ ಣಗಳು ಇತಂಹ ತೊಂದರೆಗಳು ಕಂಡುಬರದೇ ಕೂಡಲೇ ಸ್ಥಳೀಯ ವೈದ್ಯಾಧಿಕಾರಿಗಳಿಂದ ಚಿಕಿತ್ಸೆ ಪಡೆದುಕೊಂಡು ರೋಗದಿಂದ ಮುಕ್ತಿಗೊಳ್ಳಬಹುದು. ಈ ನಿಟ್ಟಿನಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ರೋಗದಿಂದ ಉಂಟಾಗುವ ತೊಂದರೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಪ್ರಾಢಶಾಲಾ ಮುಖ್ಯ ಶಿಕ್ಷಕ ವಿ.ಮಲ್ಲಪ್ಪ ಮಾತನಾಡಿ
ಕುಷ್ಠ ರೋಗದ ಬಗ್ಗೆ ಜನರಲ್ಲಿ ಹಲವಾರು ಅಪನಂಬಿಕೆಗಳು ಇವೆ. ಅವುಗಳೆಂದರೆ ಈ ರೋಗವು ಹಿಂದಿನ ಜನ್ಮದ ಪಾಪದಿಂದ ಮತ್ತು ಬೇರೆಯವರ ಶಾಪದಿಂದ ಬರುತ್ತದೆ ಎಂಬ ಮೂಢನಂಬಿಕೆ ಜನರಲ್ಲಿ ದಟ್ಟವಾಗಿದೆ. ಈ ರೋಗಕ್ಕೆ ಮದ್ದು ಇಲ್ಲ ಎಂಬ ಕಲ್ಪನೆ ಹಲವರಲ್ಲಿ ಇದೆ. ಯಾವುದೇ ಕಾರಣಕ್ಕೂ ವಂಶಪಾರಂಪರ್ಯದಿಂದಲೂ ಬರುವುದಿಲ್ಲ. ಕುಷ್ಠ ರೋಗ ಚಿಕಿತ್ಸೆ ಇಲ್ಲ ಮತ್ತು ಗುಣಮುಖವಾಗುವುದಿಲ್ಲ ಎಂಬ ಅಪನಂಬಿಕೆ ಇದೆ ಎಂದರು.
ಈ ರೋಗ ಶಾಪಗ್ರಸ್ತವೂ ಅಲ್ಲ. ಪಾಪದ ಫಲವೂ ಅಲ್ಲ. ಕುಷ್ಟ ರೋಗಿಗಳನ್ನು ಕೀಳಾಗಿ ಕಾಣದೇ ಮತ್ತು ತಾರತಮ್ಯ ಮಾಡದೇ ಅವರು ನಮ್ಮಂತೆ ಮನುಜರು ಎಂದು ಜನರು ಅರಿತುಕೂಳ್ಳಬೇಕು. ಅವರನ್ನು ಮಾನವೀಯ ಕಳಕಳಿಯಿಂದ ಕಾಣಬೇಕು ಮತ್ತು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕು. ಆಗ ಮಾತ್ರ `ಕುಷ್ಟ ರೋಗ ನಿರ್ಮೂಲನಾ ದಿನಾಚರಣೆ’ ಕಾರ್ಯಕ್ರಮಕ್ಕೆ ಅರ್ಥಪೂರ್ಣವಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಶಿಕ್ಷಕರಾದ ಎನ್.ಆರ್.ಕುಮಾರ್,ಕೆ.ಎಂ.ಕೃಷ್ಣಪ್ಪ,ಹೆಚ್.ಕೆ.ಕೃಷ್ಣಮೂರ್ತಿ,ಚಿಕ್ಕಣ್ಣ,ಸಂಗಮೇಶ್ ಮತ್ತು ಶಿಕ್ಷಕಿ ವೇಣಿಬಾಯಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ,ಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು.