ಮಾಹಿತಿ
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಂದ ಕುಸುಮ ವಾಣಿ ಬಿಡುಗಡೆ
ಮಾಹಿತಿ
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಪ್ರವೇಶ ಅವಧಿ ವಿಸ್ತರಣೆ
ಬೆಂಗಳೂರು : ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2020 ನೇ ಸಾಲಿನ ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಮತ್ತಿತರ ಕೋರ್ಸ್ ಗಳಿಗೆ ನೀಡಿದ್ದ ಪ್ರವೇಶ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ.
www.ignouac.in ಈ ವೆಬ್ಸೈಟ್ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳನ್ನು ಮತ್ತು ಶುಲ್ಕ ಸಹಿತ ಅಂಚೆ ಮೂಲಕ ಕಳುಹಿಸಿಕೊಡಬಹುದು ಅಥವಾ ಖುದ್ದಾಗಿ ನೀಡಬಹುದು.
ಮಾಹಿತಿ
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ
ಬೆಂಗಳೂರು : ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲಸಗಳಲ್ಲಿ ಎರಡು ದಿನ ಸಾಧಾರಣ ಮಳೆಯಾಗಲಿದೆ.
ನವಂಬರ್ ಒಂದರಿಂದ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮಾಹಿತಿ
ಸಿಡಿಲಿಗೆ 8 ಮಂದಿ ಬಲಿ : 23ರವರೆಗೆ ಧಾರಾಕಾರ ಮಳೆ
ಬೆಂಗಳೂರು : ರಾಜ್ಯದ ವಿವಿಧೆಡೆ ಅಕ್ಟೋಬರ್ 23 ರವರೆಗೆ ಸಾಧಾರಣದಿಂದ ಭಾರಿ ಮಳೆ ಬೀಳುವ ನಿರೀಕ್ಷೆಯಿದೆ. ಬೀದರ್ , ಕಲ್ಬುರ್ಗಿ, ರಾಯಚೂರು, ಯಾದಗಿರಿ, ತುಮಕೂರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಮಂಗಳವಾರದಂದು ರಾಜ್ಯದಲ್ಲಿ ವರುಣನ ಆರ್ಭಟದಿಂದ 8 ಮಂದಿ ಮೃತಪಟ್ಟಿದ್ದಾರೆ.