ರಾಜ್ಯ
ಗ್ರಾಮೀಣ ಭಾಗದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ತಾಕೀತು
ಬಾಗೇಪಲ್ಲಿ: ಗ್ರಾಮೀಣ ಜನತೆಯ ಸಂಕಷ್ಟಕ್ಕೆ ಸ್ಪಂದಿಸಲು ಅಧಿಕಾರಿಗಳು ಮುಂದಾಗಬೇಕು. ಆಯಾ ಸಂಬಂಧಪಟ್ಟ ಇಲಾಖೆಯವರು ಖುದ್ದು ಗ್ರಾಮಗಳಿಗೆ ತೆರಲಿ ಅಲ್ಲಿನ ಸಮಸ್ಯೆಗಳನ್ನು ಅರಿತು ಪರಿಹರಿಸಲು ಕ್ರಮ ಕೈಗೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯತಿ ಅದ್ಯಕ್ಷ ಕೆ.ಆರ್.ನರೇಂದ್ರ ಬಾಬು ಅವರು ಸೂಚಿಸಿದರು.
ಇಂದು ನಡೆದ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಾದ್ಯಂತ ಗ್ರಾಮಗಳಿಗೆ ಬೇಟಿ ನೀಡಿ ಅಲ್ಲಿನ ಕುಡಿಯುವ ನೀರು, ರೈತರಿಗೆ ಅಗತ್ಯವಿರುವ ಬಿತ್ತನೆಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಪರಿಕರಗಳಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕಿದೆ.
ರಾಸುಗಳ ಆರೋಗ್ಯಕ್ಕೆ ಕಾಲಕಾಲಕ್ಕೆ ಅಗತ್ಯವಿರುವ ಲಸಿಕೆ ಇನ್ನಿತರ ಔಷಧೋಪಚಾರಗಳಿಗೆ ಮುಂದಾಗಬೇಕು ಎಂದರು.
ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದ ಕುರಿ,ದನಗಳ ಕೊಟ್ಟಿಗೆ ನಿರ್ಮಾಣ, ಬದು ನಿರ್ಮಾಣ, ಕೃಷಿಹೊಂಡ, ನೀರಿನ ಕಾಲುವೆ ನಿರ್ಮಾಣದ ಕೆಲಸ ಕೈಗೊಳ್ಳುವಂತೆ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕೆರೆ ಕಾಮಗಾರಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಾಮಗಾರಿಗಳನ್ನು ಪ್ರಾರಂಭಿಸಿ, ಅಡಚಣೆಗಳಾಗದಂತೆ ಜನತೆಗೆ ಸ್ಪಂದಿಸಬೇಕು ‘ ಎಂದು ತಿಳಿಸಿದರು.
ಎಸ್. ಎಸ್.ಎಲ್.ಸಿ ಪರೀಕ್ಷೆಯ ಬಗ್ಗೆ
ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ ಕೂಡ ಮಾಡಲಾಗುವುದು. ಅದಕ್ಕಾಗಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯಿಂದ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆಯ ಜಯರಾಂ ರವರು ತಿಳಿಸಿದರು.
ಈ ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಸರಸ್ವತಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ರಾಜ್ಯ
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”
ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯ
ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ
ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ರಾಜ್ಯ
ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿಗೆ ಅಧಿಸೂಚನೆ
ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿ ಅಧಿಸೂಚನೆ ಪ್ರಕಟಿಸುವಂತೆ ಏಕಸದಸ್ಯ ಪೀಠ ನ್ಯಾಯಮೂರ್ತಿ ದೇವದಾಸ ಅವರು ಆದೇಶ ನೀಡಿದ್ದಾರೆ.
ಬೆಂಗಳೂರು: ಇತ್ತೀಚೆಗೆ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗೆ ಮೀಸಲಾತಿ ಪ್ರಕಟಗೊಂಡು ಹಲವಡೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಆಯ್ಕೆಯಾಗಿದ್ದಾರೆ. ಆದರೆ ಇದೀಗ ಹೈಕೋರ್ಟ್ ಈ ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿ ಅಧಿಸೂಚನೆ ಪ್ರಕಟಿಸುವಂತೆ ಏಕಸದಸ್ಯ ಪೀಠ ನ್ಯಾಯಮೂರ್ತಿ ದೇವದಾಸ ಅವರು ಆದೇಶ ಮಾಡಿದ್ದಾರೆ.
ಮೀಸಲಾತಿ ಕುರಿತು ಹೈಕೋರ್ಟ್ ನಲ್ಲಿ ದೂರು ಸಲ್ಲಿಕೆಯಾಗಿತ್ತು ಎನ್ನಲಾಗಿದ್ದು, ನ್ಯಾಯಧೀಶರು ಸಮರ್ಪಕ ಪರಾಮರ್ಶಿಸಿ ಮೀಸಲಾತಿ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ 4 ವಾರಗಳಲ್ಲಿ ಹೊಸ ಮೀಸಲಾತಿ ಪ್ರಕಟಿಸಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಕುರಿತು ಈಗಾಗಲೇ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರ ನೇಮಕಾತಿ ಅಸಿಂಧು ಆಗಲಿದೆ. ನ್ಯಾಯಾಲಯದ ಆದೇಶದಂತೆ ಹಳೇ ಮೀಸಲಾತಿ ರದ್ದುಗೊಳಿಸಿ ಇದೀಗ ಪ್ರಸಕ್ತ ಹೊಸ ಮೀಸಲಾತಿ ಜಾರಿಗೊಳಿಸುವಂತೆ ಆದೇಶ ನೀಡಿದನ್ವಯ ಮತ್ತೊಮ್ಮೆ ಹೊಸ ಮೀಸಲಾತಿ ಅನ್ವಯ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಅವಕಾಶ ನೀಡಿದೆ. ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಹಲವಾರು ಕಡೆ ಚುನಾವಣೆಗಳು ನಡೆದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆದಿದೆ. ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಬಹುಮತ ಪಡೆದಿದ್ದರೂ ಮೀಸಲಾತಿ ಪ್ರಕಾರ ಅಧ್ಯಕ್ಷ ಹುದ್ದೆ ಬಿಜೆಪಿ ಪಾಲಾಗಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭಿಸಲಾಗಿತ್ತು.