ರಾಜ್ಯ
ರಸ್ತೆ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಬೈಕ್; ದ್ವಿಚಕ್ರವಾಹನ ಸವಾರನಿಗೆ ಗಂಭೀರ ಗಾಯ
ವರದಿ: ನರಸಿಂಹಮೂರ್ತಿ ಎಂ.ಎಲ್. ಮಾಡಪ್ಪಲ್ಲಿ.
ಬಾಗೇಪಲ್ಲಿ: ರಸ್ತೆ ಅಪಘಾತದಲ್ಲಿ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪಾತಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗಟ್ಲಮಲ್ಲಮ್ಮ ಕಣಿವೆ ಸಮೀಪದ ಸರ್ಕಾರಿ ಅರಣ್ಯ ಇಲಾಖೆಯ ನರ್ಸರಿ ಬಳಿ ಭಾನುವಾರ ಬೆಳಗ್ಗೆ 8 ಗಂಟೆಗೆ ನಡೆದಿರುವ ಬಗ್ಗೆ ವರದಿಯಾಗಿದೆ. ಗಂಭೀರ ಗಾಯಗೊಂಡ ಯುವಕ ನಂದೀಶ್ (18) ಬಾಗೇಪಲ್ಲಿ ಕಸಬಾ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮಾಕಲಪಲ್ಲಿ ಗ್ರಾಮದವನು ಎಂದು ತಿಳಿದು ಬಂದಿದೆ.
ನಂದೀಶ ಎಂದಿನಂತೆ ತನ್ನ ಹೋಂಡಾ ಬೈಕ್ ನಲ್ಲಿ ಪಾತಪಾಳ್ಯದಲ್ಲಿರುವ ತಮ್ಮ ಮಟನ್ ಅಂಗಡಿಗೆ ಹೋಗಿ ವಾಪಸ್ಸು ಹೋಗುತ್ತಿದ್ದಾಗ ಗಟ್ಟಮಲ್ಲಮ್ಮ ಕಣಿವೆ ಸಮೀಪದ ಸರ್ಕಾರಿ ಅರಣ್ಯ ಇಲಾಖೆಯ ನರ್ಸರಿ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಮುಖಕ್ಕೆ ಗಂಭೀರಗಾಯಗಳಾಗಿದ್ದು,ತಕ್ಷಣ ಅಲ್ಲಿದ್ದ ಸಾರ್ವಜನಿಕರು ಆಂಬ್ಯೂಲೆನ್ಸ್ ಗೆ ಕರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಈ ಸಂಬಂಧ ಪಾತಪಾಳ್ಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯ
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”
ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯ
ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ
ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ರಾಜ್ಯ
ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿಗೆ ಅಧಿಸೂಚನೆ
ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿ ಅಧಿಸೂಚನೆ ಪ್ರಕಟಿಸುವಂತೆ ಏಕಸದಸ್ಯ ಪೀಠ ನ್ಯಾಯಮೂರ್ತಿ ದೇವದಾಸ ಅವರು ಆದೇಶ ನೀಡಿದ್ದಾರೆ.
ಬೆಂಗಳೂರು: ಇತ್ತೀಚೆಗೆ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗೆ ಮೀಸಲಾತಿ ಪ್ರಕಟಗೊಂಡು ಹಲವಡೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಆಯ್ಕೆಯಾಗಿದ್ದಾರೆ. ಆದರೆ ಇದೀಗ ಹೈಕೋರ್ಟ್ ಈ ಮೀಸಲಾತಿ ರದ್ದುಗೊಳಿಸಿ ಹೊಸ ಮೀಸಲಾತಿ ಅಧಿಸೂಚನೆ ಪ್ರಕಟಿಸುವಂತೆ ಏಕಸದಸ್ಯ ಪೀಠ ನ್ಯಾಯಮೂರ್ತಿ ದೇವದಾಸ ಅವರು ಆದೇಶ ಮಾಡಿದ್ದಾರೆ.
ಮೀಸಲಾತಿ ಕುರಿತು ಹೈಕೋರ್ಟ್ ನಲ್ಲಿ ದೂರು ಸಲ್ಲಿಕೆಯಾಗಿತ್ತು ಎನ್ನಲಾಗಿದ್ದು, ನ್ಯಾಯಧೀಶರು ಸಮರ್ಪಕ ಪರಾಮರ್ಶಿಸಿ ಮೀಸಲಾತಿ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ 4 ವಾರಗಳಲ್ಲಿ ಹೊಸ ಮೀಸಲಾತಿ ಪ್ರಕಟಿಸಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ಕುರಿತು ಈಗಾಗಲೇ ನೂತನ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದವರ ನೇಮಕಾತಿ ಅಸಿಂಧು ಆಗಲಿದೆ. ನ್ಯಾಯಾಲಯದ ಆದೇಶದಂತೆ ಹಳೇ ಮೀಸಲಾತಿ ರದ್ದುಗೊಳಿಸಿ ಇದೀಗ ಪ್ರಸಕ್ತ ಹೊಸ ಮೀಸಲಾತಿ ಜಾರಿಗೊಳಿಸುವಂತೆ ಆದೇಶ ನೀಡಿದನ್ವಯ ಮತ್ತೊಮ್ಮೆ ಹೊಸ ಮೀಸಲಾತಿ ಅನ್ವಯ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಅವಕಾಶ ನೀಡಿದೆ. ರಾಜ್ಯದ 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಹಲವಾರು ಕಡೆ ಚುನಾವಣೆಗಳು ನಡೆದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯೂ ನಡೆದಿದೆ. ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಬಹುಮತ ಪಡೆದಿದ್ದರೂ ಮೀಸಲಾತಿ ಪ್ರಕಾರ ಅಧ್ಯಕ್ಷ ಹುದ್ದೆ ಬಿಜೆಪಿ ಪಾಲಾಗಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಆರಂಭಿಸಲಾಗಿತ್ತು.