Politics
ಹಾಲಿ ಶಾಸಕರ ಮತ್ತು ಮಾಜಿ ಶಾಸಕರ ನಡುವೆ ಜಟಾಪಟಿ; ಕಾಮಗಾರಿಯಲ್ಲಿ ಅವ್ಯವಹಾರ ಆರೋಪ
ಮಾಜಿ ಶಾಸಕ ದೊಡ್ಡನಗೌಡ ವಿರುದ್ಧ ಶಾಸಕ ಅಮರೇಗೌಡ ಬಯ್ಯಾಪುರ ಅವರು ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆರೆ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳುತ್ತಿದ್ದಾರೆ. ಇದನ್ನ ರಾಜಕೀಯ ಕಾರಣಕ್ಕೆ ಬಳಸಿಕೊಂಡು ಸುಖಾಸುಮ್ಮನೆ ಅವ್ಯವಹಾರದ ಆರೋಪ ಮಾಡುತ್ತಿದ್ದಾರೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಕಿಡಿಕಾರಿದ್ದಾರೆ.
ಕುಷ್ಟಗಿಯಲ್ಲಿ ಮಾತನಾಡಿದ ಶಾಸಕ ಬಯ್ಯಾಪುರ ಕೆರೆ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ, ಶಾಸಕ ಅಮರೇಗೌಡರು ಇದರಲ್ಲಿ ಶಾಮೀಲಾಗಿದ್ದಾರೆ ಎನ್ನುವ ಮಾಜಿ ಶಾಸಕ ದೊಡ್ಡನಗೌಡ ಪಾಟೀಲರ ಆರೋಪ ಶುದ್ಧ ಸುಳ್ಳು. ಈಗ ರಾಜ್ಯದಲ್ಲಿ ಅವರದೇ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಬೇಕಾದರೆ ತನಿಖೆ ನಡೆಸಲಿ ಎಂದು ಸವಾಲು ಎಸೆದರು.
ಅಧಿಕಾರಿಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎನ್ನುವ ಕಾರಣಕ್ಕಾಗಿ ಇಲ್ಲಸಲ್ಲದ ಆರೋಪ ಮಾಡಿ, ಅವರ ಕೆಲಸಕ್ಕೆ ತಡೆಯೊಡ್ಡುವ ಕಾರ್ಯ ಮಾಡಬಾರದು. ನಿತ್ಯ ಕೆರೆ ಪಕ್ಕದಲ್ಲೇ ತಮ್ಮೂರಿಗೆ ತೆರಳುವ ದೊಡ್ಡನಗೌಡರು ಅವ್ಯವಹಾರ, ಕಳಪೆ ಕಾಮಗಾರಿ ನಡೆದಿದ್ದರೆ ಕೆಲಸ ನಡೆಯುವ ವೇಳೆಯೇ ಪ್ರಶ್ನಿಸಬಹುದಿತ್ತು ಎಂದು ಕಿಡಿ ಕಾರಿದರು.
ಮೊದಲು ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಕೆರೆ ಕೆಲಸ ನಡೆಯುತ್ತಿತ್ತು. ಸರಕಾರದೊಂದಿಗೆ ಚರ್ಚಿಸಿ ಕೆರೆ ಅಭಿವೃದ್ಧಿಗಾಗಿ 3 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದೇನೆ. ಅದರಲ್ಲಿ ಈಗಾಗಲೇ 1 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಮುಗಿದಿದ್ದು, 2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಕೊರೊನಾ ಕಾರಣದಿಂದ ಯಾವ ಕಾಮಗಾರಿಯನ್ನೂ ನಡೆಸದಂತೆ ಸರಕಾರ ಸೂಚಿಸಿದ್ದರಿಂದ ಸ್ಥಗಿತಗೊಂಡಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ವಿವರಿಸಿದರು.
ವರದಿ: ನಾಗರಾಜ ಭೋವಿ ಕುಷ್ಟಗಿ.
Politics
ಬಿಜೆಪಿ ರೈತ ಮೋರ್ಚಾ ಬೆಂಗಳೂರು ದಕ್ಷಿಣ ಜಿಲ್ಲೆ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದ ಶಾಸಕ ಆರ್ ಅಶೋಕ್
ಬೆಂಗಳೂರು : ಬಿಜೆಪಿ ರೈತ ಮೋರ್ಚಾ ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಇಂದು ಕಾರ್ಯಕಾರಿಣಿ ಸಭೆಯನ್ನು ಶಾಸಕ ಆರ್ ಅಶೋಕ್ ಅವರು ಉದ್ಘಾಟಿಸಿದರು.
ಕೃಷಿ ಮಸೂದೆಯಿಂದ ರೈತರಿಗೆ ಯಾವ ರೀತಿ ಉಪಯೋಗವಾಗುತ್ತದೆ ಹಾಗೂ ಆ ಮಸೂದೆಯಿಂದ ರೈತರಿಗೆ ಯಾವ ರೀತಿ ಪ್ರಯೋಜನವಾಗುತ್ತದೆ ಎಂದು ಸಭೆಯಲ್ಲಿ ರೈತರಿಗೆ ಸತ್ಯವನ್ನು ತಿಳಿಸಲಾಯಿತು.
ಈ ವೇಳೆ ನನ್ನೊಂದಿಗೆ ರಾಜ್ಯ ಮೋರ್ಚಾದ ಅಧ್ಯಕ್ಷರು ಹಾಗೂ ರಾಜ್ಯ ಸಭಾ ಸಂಸದರಾದ ಶ್ರೀ ಈರಣ್ಣ ಕಡಾಡಗಿ ಹಾಗೂ ರೈತ ಮುಖಂಡರು ಭಾಗಿಯಾಗಿದ್ದರು.
Politics
ಕೆ.ಪಿ.ಸಿ.ಸಿ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆ
ಬೆಂಗಳೂರು : ಕೆ.ಪಿ.ಸಿ.ಸಿ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರದ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಪಾಲಿಕೆಯ ಸದಸ್ಯರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಸಭೆಯಲ್ಲಿ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿದ್ದರು. ಈ ಸಭೆಯಲ್ಲಿ ಬೆಂಗಳೂರು ಮಹಾನಗರದಲ್ಲಿ ಬಿ.ಜೆ.ಪಿಯ ಆಡಳಿತದ ವೈಪಲ್ಯಗಳ ಬಗ್ಗೆ ಪ್ರತಿಭಟನೆ ಮತ್ತು ಹೋರಾಟ ನಡೆಸುವ ಕಾರ್ಯ ತಂತ್ರಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕರಾದ ರಾಮಲಿಂಗಾರೆಡ್ಡಿರವರು ಸೇರಿದಂತೆ ಹಲವರು ಭಾಗವಹಿಸಿದ್ದರು.
Politics
ಸಿದ್ದರಾಮಯ್ಯ ಯುವ ಬ್ರಿಗೇಡ್ ರಾಯಚೂರು ಜಿಲ್ಲಾಧ್ಯಕ್ಷರಾಗಿ ಅಯ್ಯಪ್ಪ ಗಬ್ಬೂರು ನೇಮಕ
ರಾಯಚೂರು : ಅಖಿಲ ಕರ್ನಾಟಕ ಸಿದ್ದರಾಮಯ್ಯ ಯುವ ಬ್ರಿಗೇಡ್ ರಾಜ್ಯಧ್ಯಕ್ಷರಾದ ಮಹೇಶ ಡಿ.ಗೌಡ ರವರು ಆದೇಶದ ಮೇರೆಗೆ ರಾಯಚೂರು ಜಿಲ್ಲಾಧ್ಯಕ್ಷರಾಗಿ ಅಯ್ಯಪ್ಪ ಗಬ್ಬೂರು ರವರು ಕುರಿ ಮೇಕೆಗಳ ಪರಿಹಾರ ಸಲುವಾಗಿ ನಿರಂತರ ಹೋರಾಟ, ರೈತಪರ, ರಸ್ತೆ ಸುಧಾರಣೆ, ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಪರ ಯುವ ಕುರುಬರ ಸಂಘ ಹಾಗೂ ಸಂಘಟನೆ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು,ಸಚಿವರು, ಶಾಸಕರು, ತನ್ನ ಸ್ವಂತ ಖರ್ಚಿನಲ್ಲಿ ಬೆಂಗಳೂರಿಗೆ ಹೋಗಿ ಹಲವಾರು ಬಾರಿ ಬೇಟಿ ನೀಡಿ ಮನವಿ ಪತ್ರ ಕೊಟ್ಟು ಜನ ಸೇವೆ ಮಾಡುವಲ್ಲಿ ನಿರಂತರ ಹೋರಾಟದ ಮನೋಭಾವ ವಿರುವ ಅವರ ನಿರಂತರ ಹೋರಾಟದ ಸೇವೆ ಗುರುತಿಸಿ ಸಿದ್ದರಾಮಯ್ಯ ಯುವ ಬ್ರಿಗೇಡ್ ರಾಯಚೂರು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ.
ವರದಿ: ದುರ್ಗೇಶ್ ಬೋವಿ ಮಸ್ಕಿ