ರಾಜ್ಯ
ಗೌರಿಬಿದನೂರು ನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಮಾನವ ಸರಪಳಿ ನಿರ್ಮಿಸಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ
ಗೌರಿಬಿದನೂರು ನಗರದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಗೌರಿಬಿದನೂರು ತಾಲೂಕಿನ ಆಶಾ ಕಾರ್ಯಕರ್ತೆಯರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಾಂಕೇತಿಕ ಪ್ರತಿಭಟನೆಯನ್ನು ನಡೆಸಿದರು ಕೇಂದ್ರ ಸರ್ಕಾರ 2000, ರಾಜ್ಯ ಸರ್ಕಾರ 4000 ಮಾಸಿಕ ವೇತನ ಕೊಟ್ಟು ಗುತ್ತಿಗೆ ರೀತಿ ನಮ್ಮಿಂದ ದುಡಿಸಿಕೊಂಡು ಉದ್ಯೋಗಖಾತ್ರಿ ಇಲ್ಲದ ಹಾಗೆ ಕೋವಿಡ್ 19 ರ ನಿಯಂತ್ರಣ ಕೆಲಸದಲ್ಲಿ 24 ಗಂಟೆ ಕೆಲಸ ಕೊಡುತ್ತಿದ್ದು, ನಮಗೆ ಸಹಿಸಲು ಕಷ್ಟವಾದರೂ ಕೆಲಸ ಮಾಡುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡೂ ನಿರ್ಧಾರ ಮಾಡಿ ನಮಗೆ ತಿಂಗಳಿಗೆ 12000 ಕೊಡಬೇಕೆಂದು ಈ ಮೂಲಕ ಸರ್ಕಾರವನ್ನು ಆಗ್ರಹಿಸಿದರು. ಆಶಾ ಕಾರ್ಯಕರ್ತೆಯರ ಸಂಘಟನೆಯ ಅಧ್ಯಕ್ಷರಾದ ಸರಸ್ವತಮ್ಮ ಮಾತನಾಡಿ ಕೋವಿಡ್ 19 ರ ನಿಯಂತ್ರಣದಲ್ಲಿ ನಾವು ಇಷ್ಟು ಕಷ್ಟಪಡುತ್ತಿದ್ದರು ಸಹ ಹಲವಾರು ತಿಂಗಳುಗಳ ವೇತನ ಬಾಕಿ ಇದ್ದು ಕೂಡಲೇ ಅದನ್ನು ಬಿಡುಗಡೆ ಮಾಡಿ ಆಶಾ ಕಾರ್ಯಕರ್ತರನ್ನು ಸಹ ಖಾಯಂ ನೌಕರರು ಎಂದು ಘೋಷಣೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಉಪಾಧ್ಯಕ್ಷರಾದ ಶೈಲಜಾ ಭಾರತಿ ಸಾವಿತ್ರಮ್ಮ ರಾಧಾ ಮತ್ತು ಲಕ್ಷ್ಮೀನರಸಮ್ಮ ಮುಂತಾದ ಮುಖಂಡರು ಭಾಗವಹಿಸಿದ್ದರು.
ವರದಿ: ಉದಯ್ ಕುಮಾರ್
ರಾಜ್ಯ
ಜನವರಿ ಒಂದರಿಂದ ಶಾಲೆ ಆರಂಭ : ವೇಳಾಪಟ್ಟಿ ಪ್ರಕಟ
ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ ಮಾಡಲಾಗುತ್ತದೆ. ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಲಾಗುವುದು.
ರಾಜ್ಯ
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”
ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯ
ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ
ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.