ಮಾಹಿತಿ
ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯಧನ : ಅರ್ಜಿ ಆಹ್ವಾನ
ಚಿತ್ರದುರ್ಗ, ಜು.14: ಹೊಳಲ್ಕೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನ.
ಪ್ರಸಕ್ತ ಸಾಲಿನ ಡೇ ನಲ್ಮ್ ಯೋಜನೆಯಡಿ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯಡಿ ಹೊಳಲ್ಕೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುತಿನ ಚೀಟಿ ಪಡೆದಿರುವ ಬೀದಿ ಬದಿ ವ್ಯಾಪಾರಿಗಳಿಗೆ 10000 ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿ ನಮೂನೆ-2 ನೊಂದಿಗೆ ಭಾವಚಿತ್ರ, ಮಾರಾಟ ಪ್ರಮಾಣ ಪತ್ರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಮನೆಯಲ್ಲಿನ 18 ವರ್ಷ ಮೇಲ್ಪಟ್ಟ ಸದಸ್ಯರುಗಳ ಆಧಾರ್ ಕಾರ್ಡ್ ಲಗತ್ತಿಸಿ ಜು. 23 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಹೊಳಲ್ಕೆರೆ ಪಟ್ಟಣ ಪಂಚಾಯತಿ ಕಚೇರಿಯ ಡೇ-ನಲ್ಮ್ ಶಾಖೆಯಿಂದ ಪಡೆಯಬಹುದಾಗಿದೆ ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮುರಳಿಧರ ಟಿ
ಮಾಹಿತಿ
ಮೇ ಎರಡನೇ ವಾರದಿಂದ ಪಿಯು ಪರೀಕ್ಷೆ
ಬೆಂಗಳೂರು : ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 1 ರಿಂದ 9ನೇ ತರಗತಿಗಳಿಗೆ ಸಂಬಂಧಿಸಿದಂತೆ ಪಟ್ಟಿಯ ಕಡಿತ ಎನ್ನುವ ಪ್ರಸ್ತಾಪ ಇಲಾಖೆ ಮಾಡಿಲ್ಲ. ಶಾಲಾ ಹಂತದಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು
ಮಾಹಿತಿ
ಇನ್ನೆರಡು ದಿನಗಳಲ್ಲಿ ಇನ್ನೂ ಹೆಚ್ಚಲಿದೆ ಭಾರಿ ಚಳಿ!
ಬೆಂಗಳೂರು : ಈಗಾಗಲೇ ರಾಜ್ಯದಲ್ಲೆಡೆ ಚಳಿಯ ಅಬ್ಬರ ಹೆಚ್ಚಾಗಿದ್ದು, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಉತ್ತರ ಭಾರತದಿಂದ ದಕ್ಷಿಣ ಭಾರತದ ಕಡೆಗೆ ಶೀತಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಕಡಿಮೆಯಾಗಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ವಾಡಿಕೆಗಿಂತ 2ರಿಂದ 3 ಡಿಗ್ರಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟಕದ ರಾಯಚೂರು, ವಿಜಯಪುರ, ಕೊಪ್ಪಳ, ಬೀದರ್ ಮೊದಲಾದ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದರು.
ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗಿರುವುದರಿಂದ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಇದೀಗ ಆ ಭಾಗಗಳಿಂದ ದಕ್ಷಿಣದ ಕಡೆಗೆ ಬೀಸುತ್ತಿರುವ ಗಾಳಿ ಶೀತದಿಂದ ಕೂಡಿರುವುದರಿಂದ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು, ಶೀತಗಾಳಿ ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಂತೆ ಮುಂದಿನ ನಾಲ್ಕೈದು ದಿನ ಉಷ್ಣಾಂಶ ಸರಾಸರಿಗಿಂತ ಕಡಿಮೆ ಮುಂದುವರಿದರೆ ಶೀತಗಾಳಿ ಎಂದು ಘೋಷಿಸಲಾಗುತ್ತದೆ. ಚಳಿ ಹೆಚ್ಚಾಗಲು ಪ್ರಮುಖವಾಗಿ ಶೀತಗಾಳಿ ಹಾಗೂ ಶುಭ್ರ ವಾತಾವರಣ ಕಾರಣ ಎಂದು ಅವರು ಹೇಳಿದರು.
ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 7.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಮಾಹಿತಿ
ಜನವರಿ 10ರ ನಂತರ ರೇಷನ್ ಕಾರ್ಡ್ ಗೆ ಅರ್ಜಿ
ಬೆಂಗಳೂರು : ರಾಜ್ಯದಾದ್ಯಂತ ಕರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಜನವರಿ ಹತ್ತರ ನಂತರ ಆರಂಭಿಸುವ ಸಾಧ್ಯತೆ ಇದೆ ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ಅರ್ಜಿಸಲ್ಲಿಸಲು ಬೇಕಾದ ದಾಖಲೆಗಳು : ಆಧಾರ್ ಕಾರ್ಡ್, ವಾರ್ಷಿಕ ಆದಾಯ ಮತ್ತು ವಾಸಸ್ಥಳ ದೃಢೀಕರಣ ಪತ್ರ