ರಾಜ್ಯ
ಜು. 17 ರಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಮೂರು ತಾಲ್ಲೂಕುಗಳ ವಿಚಾರಣೆ ಇಲ್ಲ
ಚಿತ್ರದುರ್ಗ, ಜು.14: ಚಿತ್ರದುರ್ಗ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಜು. 17 ರಿಂದ ಮುಂದಿನ ಆದೇಶದವರೆಗೆ ಮೊಳಕಾಲ್ಮೂರು, ಹೊಸದುರ್ಗ, ಹೊಳಲ್ಕೆರೆ ತಾಲ್ಲೂಕಿಗೆ ಸಂಬಂಧಿಸಿದ ಪಿ.ಟಿ.ಸಿ.ಎಲ್., ಆರ್.ಎ., ಮತ್ತು ಯು.ಎಲ್.ಎನ್.ಡಿ. ಪ್ರಕರಣಗಳ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಉಪವಿಭಾಗಾಧಿಕಾರಿ ಪ್ರಸನ್ನ ಅವರು ಸೂಚನೆ ನೀಡಿದ್ದಾರೆ.
ಆದರೂ, ವಾದಿ ಮತ್ತು ಪ್ರತಿವಾದಿಗಳು ಒಪ್ಪಿ ಬಂದಲ್ಲಿ ಅಂತಹ ಪ್ರಕರಣಗಳನ್ನು ವಿಚಾರಣೆ ಮಾಡಲಾಗುವುದು. ಈಗಾಗಲೇ ವಿಚಾರಣೆ ನಡೆದು, ಆದೇಶಕ್ಕೋಸ್ಕರ ಕಾಯ್ದಿರಿಸಿದ ಪ್ರಕರಣಗಳನ್ನು ಪರಿಗಣಿಸಲಾಗುವುದು ಎಂದು ಚಿತ್ರದುರ್ಗ ಉಪ ವಿಭಾಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಮುರಳಿಧರ ಟಿ
ರಾಜ್ಯ
ಜನವರಿ ಒಂದರಿಂದ ಶಾಲೆ ಆರಂಭ : ವೇಳಾಪಟ್ಟಿ ಪ್ರಕಟ
ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ ಮಾಡಲಾಗುತ್ತದೆ. ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಲಾಗುವುದು.
ರಾಜ್ಯ
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”
ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯ
ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ
ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.