ಸುದ್ದಿ
ನಗರದಲ್ಲಿನ ವಿವಿಧ ಮಹನೀಯರ ಪ್ರತಿಮೆಗಳಿಗೆ ಪುಷ್ಪಾರ್ಚನೆ : ಕರ್ನಾಟಕ ಕ್ಷತ್ರಿಯ ಒಕ್ಕೂಟ
ಪೀಣ್ಯ ದಾಸರಹಳ್ಳಿ: ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ನಗರದ ವಿವಿಧ ಕಡೆಗಳಲ್ಲಿ ಇರುವ ಮಹಾನೀಯರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಲಾಯಿತು.
ಸಮಾಜದಲ್ಲಿ ಸಾಮರಸ್ಯ ಕಾಪಾಡುವ ದೃಷ್ಟಿಯಿಂದ ದೇಶ, ಧರ್ಮ, ಹಾಗೂ ಸಂಸ್ಕೃತಿ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹಾನೀಯರಾದ ಸ್ಯಾಂಕಿ ಟ್ಯಾಂಕಿ ಬಳಿಯಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯಿಂದ ಪ್ರಾರಂಭಗೊಂಡು ಸದಾಶಿವನಗರದಲ್ಲಿರುವ ಕೆಂಪೇಗೌಡ ಪ್ರತಿಮೆ, ಡಾ|| ರಾಜಕುಮಾರ್ ಅವರ ಪ್ರತಿಮೆ, ಚಾಲುಕ್ಯ ಸರ್ಕಲ್ ನಲ್ಲಿರುವ ಬಸವೇಶ್ವರ ಪ್ರತಿಮೆ, ವಿಧಾನಸೌಧದ ಎದುರು ಇರುವ ವಾಲ್ಮೀಕಿ ತಪೋವನದ ವಾಲ್ಮೀಕಿ ಮಹರ್ಷಿ, ಹಾಗೂ ಕನಕದಾಸರ ಪ್ರತಿಮೆ, ರೇಸ್ ಕೋರ್ಸ್ ರಸ್ತೆಯ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಪ್ರತಿಮೆ, ಅಂಬೇಡ್ಕರ್ ಪ್ರತಿಮೆ, ಮೆಜೆಸ್ಟಿಕ್ ನಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಮಹಾತ್ಮ ಗಾಂಧೀಜಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್, ನೆ.ಲ. ನರೇಂದ್ರಬಾಬು, ಒಕ್ಕೂಟದ ರಾಜ್ಯಾಧ್ಯಕ್ಷ ಉದಯ ಸಿಂಗ್, ರಾಜುಕಟಬ್, ಹೆಚ್.ಎಂ.ರವಿಕುಮಾರ್, ಪ್ರದೀಪ್ ತಾರಾಸಿಂಗ್, ರೋಹಿತ್, ಕ್ಷತ್ರಿಯ ವಾಸು, ರಾಜೇಶ್ ಮುಂತಾದವರಿದ್ದರು.
ಸುದ್ದಿ
ಮಲ್ಲಸಂದ್ರದಲ್ಲಿ ಸರ್ಕಾರಿ ವೈದ್ಯೆಗೆ ಮೊದಲ ಲಸಿಕೆ
ಪೀಣ್ಯ ದಾಸರಹಳ್ಳಿ : ರಾಷ್ಟ್ರವ್ಯಾಪಿ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರಮೋದಿ ಚಾಲನೆ ನೀಡುತ್ತಿದ್ದಂತೆ ಕ್ಷೇತ್ರದ ಮಲ್ಲಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಮುಂಜಾಗ್ರತಾ ಕ್ರಮಗಳೊಂದಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಸರ್ಕಾರಿ ವೈದ್ಯೆ ಡಾ.ಕೋಮಲ ಅವರು ಮೊದಲ ಲಸಿಕೆ ಪಡೆದರು.
ಈ ವೇಳೆ ಪ್ರತಿಕ್ರಿಯಿಸಿದ ಡಾ. ಕೋಮಲ
ಮಹಾಮಾರಿ ಕೊರೊನಾದಿಂದ ಮುಕ್ತಿ ಪಡೆಯಲು ಲಸಿಕೆ ಅತ್ಯಗತ್ಯವಾಗಿರುವುದನ್ನು ಮನಗಂಡು ಯಾವುದೇ ಆತಂಕವಿಲ್ಲದೆ ಲಸಿಕೆ ಪಡೆದು ಕ್ಷೇಮವಾಗಿದ್ದೇನೆ. ನಾಗರಿಕರು ಭಯಪಡದೆ ಲಸಿಕೆ ಪಡೆಯಲು ಮುಂದಾಗಿ ಎಂದರು.
ಮಲ್ಲಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದಯಾನಂದ್ ಮಾತನಾಡಿ ಆರೋಗ್ಯ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ಒಳಗೊಂಡ ಸುಮಾರು ಐವತ್ತು ಜನ ಕೊರೊನಾ ವಾರಿಯರ್ಸ್ ಗೆ
ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರಲ್ಲಿ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕಂಡು ಬಂದಿಲ್ಲ ಆರಾಮವಾಗಿದ್ದೇವೆ. ಸರ್ಕಾರ ಹಾಗೂ ಬಿಬಿಎಂಪಿ ಲಸಿಕೆ ನೀಡುವ ಕಾರ್ಯಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಿತ್ತು ಮುಂದಿನ ಹಂತಗಳಲ್ಲಿ ಲಸಿಕೆ ಜನಸಾಮಾನ್ಯರಿಗೂ ಲಭ್ಯವಾಗಲಿದ್ದು ನಿರಾಂತಕವಾಗಿ ಪಡೆಯಬಹುದು ಎಂದರು
ದಾಸರಹಳ್ಳಿ ವಲಯದ ಆರೋಗ್ಯಾಧಿಕಾರಿ ಡಾ.ಲೋಕೇಶ್, ಜಂಟಿ ಆಯುಕ್ತ ನರಸಿಂಹಮೂರ್ತಿ ಶಾಸಕ ಆರ್. ಮಂಜುನಾಥ್ ಮೊದಲಾದವರಿದ್ದರು.
Politics
ರಾಜ್ಯದಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯದಲ್ಲಿ ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ಸಂಸದ ಪಿ.ಸಿ.ಮೋಹನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳು ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ರಾಜ್ಯದಲ್ಲಿ ಚಾಲನೆ ನೀಡಿದ ನಂತರ ಈ ಕುರಿತ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದರು.
ಸುದ್ದಿ
ಜಿಲ್ಲೆಯಲ್ಲಿ ಇಂದು ಕೊರೊನಾ ಲಸಿಕೆ ವಿತರಣೆ
ಚಿಕ್ಕಬಳ್ಳಾಪುರ: ಇಂದು ಜಿಲ್ಲಾಧಿಕಾರಿ ಶ್ರೀಮತಿ ಆರ್.ಲತಾರವರು ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಮೊದಲ ಲಸಿಕೆಯನ್ನು ಆರೋಗ್ಯ ಇಲಾಖೆಯ ನೌಕರರಿಗೆ ನೀಡುವ ಮೂಲಕ ಚಾಲನೆಯನ್ನು ನೀಡಿದರು. ಹಾಗೂ ಜಿಲ್ಲೆಯಾದ್ಯಂತ ಲಸಿಕೆ ವಿತರಣೆ ಆರಂಭವಾಗಿದ್ದು ಜಿಲ್ಲೆಯ ವಿವಿಧ ಲಸಿಕಾ ವಿತರಣಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶ್ರೀಮತಿ ಇಂದಿರಾ ಕಬಾಡೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರು ಉಪಸ್ಥಿತರಿದ್ದರು.