ದೇಶ
ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಯೋಗಿ ಆದಿತ್ಯನಾಥ ಸರ್ಕಾರವನ್ನು ವಜಾಗೊಳಿಸಿ
ಚನ್ನಪಟ್ಟಣ : ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಯೋಗಿ ಆದಿತ್ಯನಾಥ ಸರ್ಕಾರವನ್ನು ವಜಾಗೊಳಿಸಿ ಎಂದು ತಾಲೂಕಿನ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.
ಉತ್ತರಪ್ರದೇಶದ ಅತ್ರಾಸ್ ನಲ್ಲಿ ನಡೆದಿರುವ ಯುವತಿಯ ಮೇಲಿನ ಅತ್ಯಾಚಾರವನ್ನು ಖಂಡಿಸಿ ಕೃತಿಯ ಸಾಗಿರುವುದನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕನ್ನಡ ಪರ ಹೋರಾಟ ದಲಿತ ಪರ ಸಂಘಟನೆಗಳು ರೈತ ಪರ ಸಂಘಟನೆ ಎಸ್ ಟಿ ಪಿ ಐ ಸಂಘಟನೆಗಳು ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ಡಾಕ್ಟರ್ ರವಿಕುಮಾರ್ ಮಾತನಾಡಿ ಯುಪಿಎ ಸರ್ಕಾರ ದಲಿತರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿವೆ. ಇಂತಹ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು. ರೈತ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ ರಾಮು ನರೇಂದ್ರ ಮೋದಿ ಸರ್ಕಾರ ರಾಮ ರಾಜ್ಯವೆಂದರೆ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘರ್ಷ ಸಮಿತಿಯ ಲಾಯರ್ ಕುಮಾರ್ ಮಾತನಾಡಿ ಯೋಗಿ ಆದಿತ್ಯನಾಥ ಸರ್ಕಾರ ದಲಿತ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಸಾಗರ್ ಅತ್ಯಾಚಾರಗಳನ್ನು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿರುವ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಹಿಳಾ ಪರ ಹೋರಾಟಗಾರರು ಸುಕನ್ಯಾ ರವರು ಮಾತನಾಡಿದರು. ಎಸ್ ಡಿಡಿಪಿಐ ಜಿಲ್ಲಾಧ್ಯಕ್ಷ ಸೈಯದ್ ನೂರುದ್ದೀನ್ ಜೆಡಿಎಸ್ ಮುಖಂಡರಾದ ಜಯಕಾಂತ್ ಮತ್ತಿಕೆರೆ ಹನುಮಂತಯ್ಯ ಎಸ್ಸಿಶೇಖರ್ ಶ್ರೀನಿವಾಸ್ ಕದಂಬ ಸೇನೆ ಜಿಲ್ಲಾಧ್ಯಕ್ಷರು ಶಿವಕುಮಾರ್ ಪ್ರದೀಪ್ ಮಂಜು ರಘುರಾಮ್ ರೇಣುಕಾ ಅನೇಕ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.
ವರದಿ : ಸಿದ್ದರಾಮ ನೀಲಸಂದ್ರ
ದೇಶ
ಚಾಲಕನೇ ಅಪರಾಧಿ ಎಂದು ನ್ಯಾಯಾಧೀಶರು ಷರಾ
ಚಾಲಕನೇ ಅಪರಾಧಿ ಎಂದು ನ್ಯಾಯಾಧೀಶರು ಷರಾ : ಹನ್ನೆರಡು ವರ್ಷಗಳ ಹಿಂದಿನ ಅಪಘಾತ ಪ್ರಕರಣಕ್ಕೆ ಹೈ ಕೋರ್ಟ್ ಟ್ವಿಸ್ಟ್
ಬೆಂಗಳೂರು: ಚಾಲಕನೇ ಅಪರಾಧಿ ಎಂದು ನ್ಯಾಯಾಧೀಶರು ಷರಾ ಬರೆದಿದ್ದ ಹನ್ನೆರಡು ವರ್ಷಗಳ ಹಿಂದಿನ ಅಪಘಾತ ಪ್ರಕರಣಕ್ಕೆ ಹೈ ಕೋರ್ಟ್ ಟ್ವಿಸ್ಟ್ ನೀಡಿದೆ.ತನ್ನ ಕೆಳಗಿನ ಎರಡು ನ್ಯಾಯಾಲಯಗಳು ನೀಡಿದ್ದ ತೀರ್ಪನ್ನು ಪಕ್ಕಕ್ಕಿಟ್ಟಿರುವ ಕೋರ್ಟ್, ಈ ಅಪಘಾತಕ್ಕೆ ರಸ್ತೆ ಗುಂಡಿಯೇ ಕಾರಣ ಎಂಬ ಮಹತ್ವದ ತೀರ್ಪು ಕೊಟ್ಟಿದೆ.
2006ರಲ್ಲಿ ಗುಡಿಬಂಡೆ-ಬಾಗೇಪಲ್ಲಿ ಮುಖ್ಯರಸ್ತೆಯಲ್ಲಿ ಮ್ಯಾಕ್ಸಿ ಕ್ಯಾಬ್ ಟಯರ್ ಸ್ಫೋಟಗೊಂಡು ಪಲ್ಟಿಹೊಡೆದಿತ್ತು. ಘಟನೆಯಲ್ಲಿ ಕಾರಿನಲ್ಲಿದ್ದ ಅಶ್ವತ್ಥಮ್ಮ ಎಂಬುವವರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ವಾಹನ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
2009ರಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ಸಿ ಕೋರ್ಟ್, ಐಪಿಸಿ ಕಾಯ್ದೆ 279,337,338,304-ಎ ಅಡಿ ಚಾಲಕ ಅತಾವುಲ್ಲಾಗೆ ಒಂದೂವರೆ ವರ್ಷ ಜೈಲು ಹಾಗೂ 2.5 ಸಾವಿರ ದಂಡ ವಿಧಿಸಿತ್ತು.ಜೆಎಂಎಫ್ಸಿ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸೆಷನ್ ಕೋರ್ಟ್ ಮೊರೆ ಹೋದ ಡ್ರೈವರ್ಗೆ ಅಲ್ಲಿಯೂ ನ್ಯಾಯ ಸಿಗಲಿಲ್ಲ. ಇದೀಗ ಹೈಕೋರ್ಟ್ ಈ ಅಪಘಾತ ಪ್ರಕರಣ ಸಂಬಂಧ ಮಹತ್ವದ ತೀರ್ಪು ಪ್ರಕಟಿಸಿದ್ದು, ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂದು ಗರಂ ಆಗಿದೆ.ಸಾಲು ಸಾಲು ರಸ್ತೆಗುಂಡಿಗಳೇ ಅಶ್ವತ್ಥಮ್ಮಳ ಸಾವಿಗೆ ಕಾರಣ. ಪ್ರಕರಣದಲ್ಲಿ ಪೊಲೀಸರು ಸರಿಯಾದ ತನಿಖೆ ನಡೆಸಿಲ್ಲ. ಚಾಲಕನ ನಿರ್ಲಕ್ಷ್ಯವನ್ನ ಸಾಬೀತು ಮಾಡುವಲ್ಲಿ ಪೊಲೀಸರು ವಿಫಲ ವಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.
ದೇಶ
ಗಾಂಧೀಜಿ ಮೊಮ್ಮಗ ಕೊರೊನಾಗೆ ಬಲಿ
ದಕ್ಷಿಣ ಆಫ್ರಿಕಾ : ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ಸತೀಶ್ ಧುಪೆಲಿಯಾ ಅವರು ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಂಡ ಮೂರು ದಿನಗಳ ನಂತರ ಕೋವಿಡ್-19ನಿಂದಾಗಿ ಭಾನುವಾರ ಜೋಹಾನ್ಸ್‌ಬರ್ಗ್‌ನಲ್ಲಿ ಮೃತಪಟ್ಟಿರುವುದಾಗಿ ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ.
ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರು ಒಂದು ತಿಂಗಳ ಕಾಲ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್-19 ಸೋಂಕು ತಗುಲಿದ್ದರಿಂದಾಗಿ ಮೃತಪಟ್ಟಿರುವುದಾಗಿ ಧುಪೆಲಿಯಾ ಅವರ ಸಹೋದರಿ ಉಮಾ ಧುಪೆಲಿಯಾ-ಮೆಸ್ಟ್ರಿ ದೃಢಪಡಿಸಿದರು.
‘ನ್ಯುಮೋನಿಯಾದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಸಹೋದರ ಒಂದು ತಿಂಗಳ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮತ್ತು ಆ ವೇಳೆ ಕೊರೊನಾ ವೈರಸ್ ಸೋಂಕು ತಗುಲಿ ಮೃತಪಟ್ಟಿದ್ದಾರೆ. ಅವರಿಗೆ ಇಂದು (ಭಾನುವಾರ) ಸಂಜೆ ತೀವ್ರ ಹೃದಯಾಘಾತವಾಗಿತ್ತು’ ಎಂದು ಎಂಎಸ್ ಉಮಾ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
ತಮ್ಮ ಬಹುಪಾಲು ಜೀವನವನ್ನು ಮಾಧ್ಯಮಗಳಲ್ಲಿ, ವಿಶೇಷವಾಗಿ ವಿಡಿಯೊಗ್ರಾಫರ್ ಮತ್ತು ಫೊಟೊಗ್ರಾಫರ್ ಆಗಿ ಕಳೆದ ಧುಪೆಲಿಯಾ, ಮಹಾತ್ಮ ಗಾಂಧಿ ಪ್ರಾರಂಭಿಸಿದ ಕೆಲಸವನ್ನು ಮುಂದುವರಿಸಲು ಡರ್ಬನ್ ಬಳಿಯ ಫೀನಿಕ್ಸ್ ಸೆಟಲ್‌ಮೆಂಟ್‌ನಲ್ಲಿ ಸ್ಥಾಪಿತವಾದ ಗಾಂಧಿ ಅಭಿವೃದ್ಧಿ ಟ್ರಸ್ಟ್‌ಗೆ ಸಹಾಯ ಮಾಡುವಲ್ಲಿ ಬಹಳ ಸಕ್ರಿಯರಾಗಿದ್ದರು. ಅಲ್ಲದೆ ಎಲ್ಲಾ ಸಮುದಾಯಗಳ ಅಗತ್ಯವಿರುವವರಿಗೆ ಸಹಾಯ ಮಾಡುವುದರಲ್ಲಿ ಹೆಸರುವಾಸಿಯಾಗಿದ್ದರು ಮತ್ತು ಹಲವಾರು ಸಾಮಾಜಿಕ ಕಲ್ಯಾಣ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಅವರ ಸ್ನೇಹಿತರು ಮತ್ತು ಆತ್ಮೀಯರು ಮೃತರಿಗೆ ಗೌರವ ಸಲ್ಲಿಸಿದ್ದಾರೆ.
ಧುಪೆಲಿಯಾ ಅವರು 1860ರ ಹೆರಿಟೇಜ್ ಫೌಂಡೇಶನ್ ಮಂಡಳಿಯ ಸದಸ್ಯರೂ ಆಗಿದ್ದರು.
ದೇಶ
ದೆಹಲಿಯಲ್ಲಿ 6.9 ಡಿಗ್ರಿ ಸೆಲ್ಸಿಯಸ್ ತಾಪಮಾನ
ನವದೆಹಲಿ : 2003ರ ನಂತರ ನವಂಬರ್ ನಲ್ಲಿ ದಾಖಲಾದ ಅತ್ಯಂತ ಕಡಿಮೆ ಉಷ್ಣಾಂಶ ವಾಗಿರುವ ಇದು, ರಾಷ್ಟ್ರ ರಾಜಧಾನಿಯಲ್ಲಿ ಚಳಿ ಆರ್ಭಟ ಮುಂದುವರೆದಿದ್ದು ಭಾನುವಾರ ಕನಿಷ್ಠ ತಾಪಮಾನ 6.9 ಡಿಗ್ರಿಗೆ ಇಳಿದಿದೆ. ನಗರದ ಅನೇಕ ಭಾಗಗಳಲ್ಲಿ ಶೀತ ಮಾರುತ ಬೀಸುತ್ತಿದ್ದು ಜನರು ಮನೆಯಿಂದ ಹೊರಬರಲಾರದ ಸ್ಥಿತಿ ನಿರ್ಮಾಣವಾಗಿದೆ.
-
ಸುದ್ದಿ2 weeks ago
ಡಿಜಿಟಲ್ ಸ್ಮಾಟ್೯ ಕ್ಲಾಸ್ ನಲ್ಲಿ ಸಾವಿತ್ರಿ ಭಾಯಿ ಫುಲೆಯವರ ಜನ್ಮ ದಿನ ಆಚರಣೆ
-
ಮನರಂಜನೆ2 weeks ago
ಅಪ್ಪಿಕೊಂಡು ಪಪ್ಪಿಕೊಟ್ಟು ಮುದ್ದಾಡುವಾಗ ಸಿಕ್ಕಿ ಬಿದ್ದ ಅನುಶ್ರೀ
-
ಸುದ್ದಿ3 days ago
ಶ್ರೀಶ್ರೀಶ್ರೀ ಗುರು ಆದಿ ಜಾಂಬವಂತ ಸ್ವಾಮಿ ಜಯಂತಿ ಆಚರಣೆ
-
Politics7 days ago
ಶಾಸಕರ ಸ್ವಗ್ರಾಮದಲ್ಲಿ ಸರ್ಕಾರಿ ಸೌಲಭ್ಯಕ್ಕೂ ದ್ವೇಷದ ರಾಜಕಾರಣವೇ?