ರಾಜ್ಯ
ಕುಲಪತಿ ಕುಲಸಚಿವ ನಡುವೆ ಕಲಹ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರ ನಡುವೆ ಮುಸುಕಿನ ಗುದ್ದಾಟ ಕಂಡುಬಂದಿದೆ.
ಕುಲಪತಿ ಪ್ರೊ ಕೆ ಆರ್ ವೇಣುಗೋಪಾಲ್ ವಿರುದ್ಧ ದೂರು ನೀಡಿರುವ ಕುಲಸಚಿವರಾದ ಕೆ ಜ್ಯೋತಿ ರವರು, ಕುಲಸಚಿವರ ಹುದ್ದೆಯಲ್ಲಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಕುಲಪತಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ದೂರು ನೀಡಿದ್ದಾರೆ.
ವಿಶ್ವವಿದ್ಯಾಲಯಗಳ ಅಧಿನಿಯಮದ ಪ್ರಕಾರ ಕರ್ತವ್ಯ ನಿರ್ವಹಿಸಲು ನನಗೆ ಅಡ್ಡಿಪಡಿಸದಂತೆ ಕುಲಪತಿಗಳಿಗೆ ಸೂಚನೆ ನೀಡಬೇಕು ಮತ್ತು ಒಂದು ವೇಳೆ ಪರೋಕ್ಷವಾಗಿ ನನಗೆ ಬೆದರಿಕೆ ಒಡ್ಡುವಂತಹ ಸನ್ನಿವೇಶಗಳು ನಿರ್ಮಾಣವಾದರೆ ಸ್ವಯಂ ರಕ್ಷಣೆಗಾಗಿ ಕುಲಪತಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಅನುಮತಿ ನೀಡಬೇಕು ಎಂದು ಜ್ಯೋತಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯ
ಜನವರಿ ಒಂದರಿಂದ ಶಾಲೆ ಆರಂಭ : ವೇಳಾಪಟ್ಟಿ ಪ್ರಕಟ
ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ ಮಾಡಲಾಗುತ್ತದೆ. ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಲಾಗುವುದು.
ರಾಜ್ಯ
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”
ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.
ರಾಜ್ಯ
ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ
ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
-
ಸುದ್ದಿ2 weeks ago
ಡಿಜಿಟಲ್ ಸ್ಮಾಟ್೯ ಕ್ಲಾಸ್ ನಲ್ಲಿ ಸಾವಿತ್ರಿ ಭಾಯಿ ಫುಲೆಯವರ ಜನ್ಮ ದಿನ ಆಚರಣೆ
-
ಮನರಂಜನೆ2 weeks ago
ಅಪ್ಪಿಕೊಂಡು ಪಪ್ಪಿಕೊಟ್ಟು ಮುದ್ದಾಡುವಾಗ ಸಿಕ್ಕಿ ಬಿದ್ದ ಅನುಶ್ರೀ
-
ಸುದ್ದಿ3 days ago
ಶ್ರೀಶ್ರೀಶ್ರೀ ಗುರು ಆದಿ ಜಾಂಬವಂತ ಸ್ವಾಮಿ ಜಯಂತಿ ಆಚರಣೆ
-
Politics7 days ago
ಶಾಸಕರ ಸ್ವಗ್ರಾಮದಲ್ಲಿ ಸರ್ಕಾರಿ ಸೌಲಭ್ಯಕ್ಕೂ ದ್ವೇಷದ ರಾಜಕಾರಣವೇ?