Connect with us
Ad Widget

ಸುದ್ದಿ

ಔಷಧಿ ಘಟಕ ನಿರ್ಮಾಣದ ಬದಲಾಗಿ ಹತ್ತಿ ಸಂಸ್ಕರಣ ಘಟಕ ಸ್ಥಾಪನೆಗೆ ಪಿ ಅನಿಲ ಕುಮಾರ್ ಒತ್ತಾಯ

Published

on

ಮಾನ್ವಿ : ರಾಜ್ಯ ಸರ್ಕಾರವು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಅತಿಯಾಗಿ ಬೆಳೆಯುವ ಉತ್ಪನ್ನಗಳ ಸಂರಕ್ಷಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ಉತ್ಪನ ಸಂರಕ್ಷಣಾ ಘಟಕಗಳು ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದ್ದು ಅದರಂತೆ ರಾಯಚೂರು ಜಿಲ್ಲೆಯಲ್ಲಿ ಔಷಧಿ ಸಂರಕ್ಷಣೆ ಘಟನೆವನ್ನು ಸ್ಥಾಪನೆ ಮಾಡುವ ಉದ್ದೇಶವನ್ನು ಹಿಂಪಡೆದು ನಮ್ಮಲ್ಲಿ ಅತಿಯಾಗಿ ಬೆಳೆದು ಏಷ್ಯಾ ಖಂಡದಲ್ಲೇ ಅತ್ಯುತ್ತಮ ಮಾರುಕಟ್ಟೆಯಾಗಿರುವ ಹತ್ತಿ ಸಂಸ್ಕಾರಕ ಘಟಕವನ್ನು ನಿರ್ಮಾಣ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ರೈತ ಸಂಘಟನೆಯ ಮುಖಂಡ ಪಿ ಅನಿಲ ಕುಮಾರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

ಪಟ್ಟಣದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ಕರೆದು ಮಾತಾನಾಡಿದ ಅವರು ನಮ್ಮ ಜಿಲ್ಲೆಯ ಏಳಿಗೆಗಾಗಿ ಹಗಲಿರುಳು ದುಡಿಯುತ್ತಿರುವ ದೇವದುರ್ಗ ಬಿ ಜೆ ಪಿ ಶಾಸಕ ಶಿವನಗೌಡ ನಾಯಕ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ರಾಯಚೂರು ಜಿಲ್ಲೆಗೆ ಔಷಧಿ ಸಂಸ್ಕಾರಕ ಘಟಕ ನಿರ್ಮಾಣದ ಬದಲಾಗಿ ಹತ್ತಿ ಸಂಸ್ಕಾರಕ ಘಟಕವನ್ನು ನಿರ್ಮಾಣ ಮಾಡಿ ಹತ್ತಿ ಫ್ಯಾಕ್ಟರಿಗಳ ಸ್ಥಾಪನೆಯ ಮೂಲಕ ಬಡಜನರಿಗಾಗಿ ಗಾರ್ಮೇಟ್ಸ್ ಮೂಲಕ ಉದ್ಯೋಗ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಹಾಗೂ ಸರ್ಕಾರಕ್ಕೆ ಒತ್ತಾಯಿಸಬೇಕು ಎಂದರು.

ನಂತರ ಮಾತಾನಾಡಿದ ಅವರು ನಮ್ಮ ಕೆಳ ಭಾಗದ ರೈತರಿಗೆ ಸಮರ್ಪಕವಾದ ಕಾಲುವೆ ನೀರು ದೊರಕುತ್ತಿಲ್ಲ ಇದಕ್ಕೆ ಪ್ರಮುಖ ಕಾರಣ ಏನೆಂದರೆ ನಮ್ಮ ಜಿಲ್ಲೆಯ ಹಾಗೂ ತಾಲೂಕಿನ ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಹುದ್ದೆಗಳು ಸಂಪೂರ್ಣವಾಗಿ ಖಾಲಿ ಇವೆ ಇವುಗಳನ್ನು ಭರ್ತಿ ಮಾಡಿ ಬಡ ರೈತರ ಸಹಾಯವಾಗುವಂತ ಕೆಲಸ ಮಾಡಬೇಕು ಎಂದು ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಸುದ್ದಿ

‘ತನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿ ಬರಬೇಕು’, ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ

Published

on

ಬೆಂಗಳೂರು: ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಆಟೋ ಚಾಲಕ ಜಯರಾಮು ಮೃತದೇಹದ ಅಂತಿಮ ದರ್ಶನವನ್ನು ಕುಮಾರಸ್ವಾಮಿಯವರು ಪಡೆದರು. ರಾಮನಗರ ಜಿಲ್ಲೆಯ ಬೊಮ್ಮಚ್ಚನ ಹಳ್ಳಿಗೆ ಇಂದು ಮಧ್ಯಾಹ್ನ ಭೇಟಿ ನೀಡಿದ ಮಾಜಿ‌ ಸಿಎಂ ಹೆಚ್.ಡಿ.ಕೆ. ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಧ್ಯಾಕ್ಷ ನಿಖಿಲ್ ಕುಮಾರಸ್ವಾಮಿ.ಆಟೋ ಚಾಲಕ ಜಯರಾಮು ಮೃತದೇಹದ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.

ನಿನ್ನೆ ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ಚಾಲಕ ಜಯರಾಮು ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಸಾವಿಗೂ ಮುನ್ನವೇ ತನ್ನ ಅಂಗಿಯಲ್ಲಿ ಡೆತ್ ನೋಟ್ ಬರೆದಿಟ್ಟುಕೊಂಡಿದ್ದ ಜಯರಾಮು. ನನ್ನ ಅಂತ್ಯಕ್ರಿಯೆಯಲ್ಲಿ‌ ಮಾಜಿ ಸಿಎಂ ಹೆಚ್.ಡಿ.ಕೆ ಭಾಗಿಯಾಗಬೇಕು ಎಂದು ಬರೆದುಕೊಂಡಿದ್ದರು.

ನನಗೆ ಬುದ್ಧಿಮಾಂದ್ಯ ಮಗನಿದ್ದಾನೆ. ನನ್ನ ಮಗನಿಗೆ ಕುಮಾರಸ್ವಾಮಿ ಧನ ಸಹಾಯ ಮಾಡಬೇಕು. ನಿಮ್ಮ ಋಣವನ್ನು ಮುಂದಿನ ಜನ್ಮದಲ್ಲಿ ತೀರಿಸುತ್ತೇನೆ.ನನ್ನ ಮಗನಿಗೆ ಒಂದು ದಾರಿ ಮಾಡಿಕೊಡಿ ಕುಮಾರಣ್ಣ ಅಂತಾ ಭಾವನಾತ್ಮಕವಾಗಿ ಡೆತ್ ನೋಟ್ ಬರೆದಿಟ್ಟಿದ್ದ ಜಯರಾಮು. ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಹೆಚ್.ಡಿ.ಕೆ ಹಾಗೂ ನಿಖಿಲ್ ಅವರು, ಕುಟುಂಬಸ್ಥರಿಗೆ ಪರಿಹಾರದ ಹಣ ನೀಡಿದರು.

ದಾರಿ ಮಧ್ಯದಲ್ಲಿ ಹೂ ಮಾರುತ್ತಿದ್ದಂತ ಬಾಲಕಿಯನ್ನು ಸಿಎಂ ಆಗಿದ್ದಂತಹ ಕುಮಾರಸ್ವಾಮಿ ಮಾತನಾಡಿಸಿ, ಕಷ್ಟ ಕೇಳಿ, ಆಕೆಗೆ ಮನೆ ಇಲ್ಲದೇ ಇರೋದನ್ನು ಗಮನಿಸಿ ಮನೆ ಕಟ್ಟಿಸಿಕೊಟ್ಟ ಘಟನೆಯಿಂದ ಗಮನ ಸೆಳೆದಿದ್ದರು. ಇದೀಗ ನನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿ ಆಗಮಿಸಬೇಕು. ಇದೇ ನನ್ನ ಕೊನೆಯ ಆಸೆ ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದಂತ ಆಟೋ ಚಾಲಕನ ಆಸೆಯನ್ನು ಈಡೇರಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಷ್ಟ ಆಗೋದು ಎಂಬುದನ್ನು ಸಾಬೀತುಪಡಿಸಿದ್ದಾರೆ.

Continue Reading

ಸುದ್ದಿ

ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ : ದಾಳಿ ನಡೆಸಿದ ಅಬಕಾರಿ ಇಲಾಖೆ ಸಿಬ್ಬಂದಿ

Published

on

ಶಿಡ್ಲಘಟ್ಟ : ತಾಲ್ಲೂಕಿನ ತಾದೂರು ಗ್ರಾಮದ ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಸಿಬ್ಬಂದಿ ಸುಮಾರು 10 ಲಕ್ಷ ಬೆಲೆ ಬಾಳುವ ನಕಲಿ ಮದ್ಯ, ಮಧ್ಯಸಾರ ಹಾಗು ಬಾಟಲಿ, ಮುಚ್ಚಳಗಳನ್ನು ವಶಪಡಿಸಿಕೊಂಡಿರುವ ಜೊತೆಗೆ ಆರೋಪಿ ಟಿ.ಎಂ.ಮಂಜುನಾಥ್ ನನ್ನು ಬಂಧಿಸಿದ್ದಾರೆ.

ಅಬಕಾರಿ ಉಪ ಆಯುಕ್ತ ಜಿ.ಪಿ.ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆ ಸಿಬ್ಬಂದಿ ಭಾನುವಾರ ಮುಂಜಾನೆ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ೧೨೯೦ ಲೀ ಸ್ಪಿರಿಟ್ ಸೇರಿದಂತೆ ೬೨ ಲೀ ಬ್ಲೆಂಡ್, ೩೨ ಕೆಜಿ ಯಷ್ಟು ಕ್ಯಾಪ್, ಲೇಬಲ್ ಹಾಗು ತಯಾರಿಸಿಟ್ಟಿದ್ದ ೩೭.೮೦೦ ಲೀ ನಷ್ಟು ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇನ್ಸ್‌ಪೆಕ್ಟರ್ ವಿಶ್ವನಾಥಬಾಬು, ಫಿರೋಜ್‌ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳ, ಸಿಬ್ಬಂದಿಗಳಾದ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಮುಂತಾದವರು ಹಾಜರಿದ್ದರು.

ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ

Continue Reading

ಸುದ್ದಿ

ಬೆಂಕಿ ಅವಘಡದಿಂದ ಭತ್ತದ ಹುಲ್ಲು ಮತ್ತು ಜಾನುವಾರಗಳು ಸುಟ್ಟು ಭಸ್ಮ: ಶಾಸಕರಿಂದ ಸಾಂತ್ವಾನ

Published

on

ಮಸ್ಕಿ: ಮಸ್ಕಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಅಗ್ನಿ ಅವಗಢ ಸಂಭವಿಸಿದ್ದು ರೈಮಾನ್ ಸಾಬ್ ಪಂಚರ್ ಶಾಪ್ ಅವರ ಬಣವೆ ಜಾನುವಾರುಗಳು ಸುಟ್ಟುಹೋಗಿದ್ದು. ಮಸ್ಕಿಯ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲರು ಭೇಟಿ ನೀಡಿ ವೈಯಕ್ತಿಕವಾಗಿ ರೂ.20,000 ಧನಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಹಂಚಿನಾಳ ಗ್ರಾಮದ ತಾಲೂಕ ಪಂಚಾಯತಿ ಸದಸ್ಯರಾದ ಶರಣಬಸವ ಆಶಾಳ್ , ಗ್ರಾಮದ ಹಿರಿಯರು ಸೋಮನಗೌಡ ಪಾಟೀಲ್ ದುರುಗನ್ ಗೌಡ ಪೊಲೀಸ್ ಪಾಟೀಲ್ ಚಿನ್ನ ನ ಗೌಡ ಗೋನಾಳ್ ನಾಗಪ್ಪ ಕೊಳಗಲ್ ಊರಿನ ಹಿರಿಯ ನಾಗರಿಕರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್