ಮನರಂಜನೆ
ಇಪ್ಪತ್ತೊಂದು ವರ್ಷಗಳ ನಂತರ ಪವರ್ ಸ್ಟಾರ್ ಜೊತೆ ಅನುಪ್ರಭಾಕರ್
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಈ ಚಿತ್ರದಲ್ಲಿ 21 ವರ್ಷಗಳ ನಂತರ ನಟಿ ಅನುಪ್ರಭಾಕರ್ ಕೂಡ ನಟಿಸಲಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅನು, ನನ್ನ ಪಾಲಿನ ದೇವರುಗಳಾದ ನಿಮ್ಮ ತಂದೆ-ತಾಯಿ, ನನ್ನನ್ನು ಕನ್ನಡಿಗರಿಗೆ, ನಿಮ್ಮ ಅಣ್ಣ ಶಿವರಾಜ್ ಕುಮಾರ್ ಅವರ ಜೋಡಿಯಾಗಿ ಪರಿಚಯಿಸಿದರು. 21 ವರ್ಷಗಳ ನಂತರ ಈಗ ನಿಮ್ಮ ಜೊತೆ ಅಭಿನಯಿಸುವ ಅವಕಾಶ ದೊರೆತಿದೆ ಎಂದು ಬರೆದುಕೊಂಡು ಪುನೀತ್ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ಅಲ್ಲದೆ ನಾನು ರೋಮಾಂಚನಗೊಂಡಿದ್ದು, ಎದುರು ನೋಡುತ್ತಿದ್ದೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.
ಚಿತ್ರದಲ್ಲಿ ಅನುಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. 55ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನು ಪ್ರಭಾಕರ್ ಇದೀಗ ಮೊದಲ ಬಾರಿಗೆ ಪುನೀತ್ ರಾಜ್‍ಕುಮಾರ್ ಜೊತೆ ಬಣ್ಣ ಹಚ್ಚುತ್ತಿದ್ದಾರೆ. ಅನು ಪ್ರಭಾಕರ್ ಚಿತ್ರ ತಂಡ ಸೇರಿರುವುದು ಅಭಿಮಾನಿಗಳಲ್ಲಿ ಇನ್ನೂ ಕುತೂಹಲ ಹೆಚ್ಚಿಸಿದ್ದು, ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕಾತರದಿಂದ ಕಾಯುತ್ತಿದ್ದಾರೆ.
ಯುವರತ್ನ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮೊನ್ನೆಯಷ್ಟೇ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಪ್ಪು ಜೇಮ್ಸ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಲಾಕ್‍ಡೌನ್ ವೇಳೆ ಫುಲ್ ರೆಸ್ಟ್ ಮೂಡ್‍ನಲ್ಲಿದ್ದ ಅಪ್ಪು ಇದೀಗ ಸಖತ್ ಬ್ಯುಸಿಯಾಗಿದ್ದಾರೆ. ಯುವರತ್ನ ಚಿತ್ರೀಕರಣ ಪೂರ್ಣಗೊಳಿಸಿ ಸದ್ಯ ಜೇಮ್ಸ್ ಶೂಟಿಂಗ್ ಶುರು ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಜೇಮ್ಸ್ ಸಿನಿಮಾ ಸದ್ದು ಮಾಡುತ್ತಿದ್ದು, ಇದೀಗ ಚಿತ್ರೀಕರಣ ಆರಂಭವಾಗಿದೆ. ಭರ್ಜರಿ ಚೇತನ್ ಕುಮಾರ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾ ಯಾವ ರೀತಿ ಮೂಡಿ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಚಿತ್ರೀಕರಣ ಆರಂಭವಾಗುತ್ತಿದ್ದಂತೆ ಚಿತ್ರದ ಕುರಿತು ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ತಾರಾಗಣದ ಬಗ್ಗೆ ಸಹ ಪ್ರಶ್ನಿಸುತ್ತಿದ್ದಾರೆ. ಪ್ರಮುಖವಾಗಿ ಪುನೀತ್ ಜೊತೆ ಯಾರು ರೊಮಾನ್ಸ್ ಮಾಡಲಿದ್ದಾರೆ, ನಾಯಕಿ ಯಾರಾಗಬಹುದು ಎಂಬ ಚರ್ಚೆ ನಡೆಯುತ್ತಿತ್ತು. ಇದಕ್ಕೆ ಇದೀಗ ತೆರೆ ಬಿದ್ದಿದ್ದು, ಹಿರೋಯಿನ್ ಹೆಸರು ಬಹಿರಂಗವಾಗಿದೆ. ಜೇಮ್ಸ್ ಚಿತ್ರದಲ್ಲಿ ಅಪ್ಪು ಜೊತೆ ತಮಿಳು ನಟಿ ಪ್ರಿಯಾ ಆನಂದ್ ರೊಮ್ಯಾನ್ಸ್ ಮಾಡಲಿದ್ದಾರೆ.
ಮನರಂಜನೆ
ಪ್ರಭಾಸ್ & ಟೀಂಗೆ ಶುಭಹಾರೈಸಿದ KGF ಕಿಂಗ್ ಯಶ್
ಹೈದ್ರಾಬಾದ್ನಲ್ಲಿ ಸೆಟ್ಟೇರುತ್ತಿದೆ ಪ್ರಭಾಸ್ರ ಸಲಾರ್ ಸಿನಿಮಾ. ಬಾಹುಬಲಿ ಖ್ಯಾತಿಯ ಪ್ರಭಾಸ್ ಸಿನಿಮಾಗೆ ಡೈರೆಕ್ಷನ್ ಮಾಡಲಿದ್ದಾರೆ ಕೆಜಿಎಫ್ ಪ್ರಶಾಂತ್ ನೀಲ್. ಕೆಜಿಎಫ್ ಮೇಕರ್ ವಿಜಯ್ ಕಿರಗಂದೂರು ನಿರ್ಮಾಣದ ಬಹುಕೋಟಿ ಸಿನಿಮಾ ಇದಾಗಿದೆ. ಪ್ರಶಾಂತ್ ನೀಲ್-ಪ್ರಭಾಸ್ ಕಾಂಬೋನ ‘ಸಲಾರ್’ಗೆ ಇಂದು ಅದ್ಧೂರಿ ಮುಹೂರ್ತ..
ಮುಹೂರ್ತಕ್ಕೆ ಹಾಜಾರಾಗಿ ಪ್ರಭಾಸ್ & ಟೀಂಗೆ KGF ಕಿಂಗ್ ಯಶ್ ಶುಭ ಹಾರೈಸಿದ್ದಾರೆ
ಮನರಂಜನೆ
ಸಾಯಿ ಪಲ್ಲವಿ ನಟಿಸಿರುವ ‘ಲವ್‌ಸ್ಟೋರಿ’ ಸಿನಿಮಾದ ಟೀಸರ್ ಬಿಡುಗಡೆ
ನಟಿ ಸಾಯಿ ಪಲ್ಲವಿಗೆ ತಮ್ಮದೇ ಆದ ದೊಡ್ಡ ಅಭಿಮಾನಿ ವರ್ಗವಿದೆ. ಆಕೆಯ ಸಿನಿಮಾಗಳಿಗಾಗಿ ಜನ ಕಾಯುತ್ತಾರೆ. ಸಾಯಿ ಪಲ್ಲವಿ ನಟಿಸಿರುವ ‘ಲವ್‌ಸ್ಟೋರಿ’ ಸಿನಿಮಾದ ಟೀಸರ್ ಪ್ರಸ್ತುತ ಬಿಡುಗಡೆ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ.
ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ನಟಿಸಿರುವ ‘ಲವ್ ಸ್ಟೋರಿ’ ಸಿನಿಮಾವನ್ನು ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಸುಂದರ-ಸರಳ ಪ್ರೇಮಕತೆಯಾದ ‘ಲವ್ ಸ್ಟೋರಿ’ ಸಿನಿಮಾದ ಟೀಸರ್ ಸಹ ಅಷ್ಟೇ ಸುಂದರ ಹಾಗೂ ಸರಳವಾಗಿದೆ.
ಮನರಂಜನೆ
ಕೆಜಿಎಫ್-2 ಟೀಸರ್ : ಆರೋಗ್ಯ ಇಲಾಖೆಯಿಂದ ನೋಟಿಸ್
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಬರ್ತಡೇಗೆ ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್ ಆಗಿದ್ದು, ಎಲ್ಲಾ ದಾಖಲೆಗಳನ್ನು ಮುರಿದು ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸ್ತಿದೆ. ಎಲ್ಲಾ ಕಡೆಯಿಂದಲೂ ಟೀಸರ್‌ಗೆ ಪ್ರಶಂಸೆ ಸಿಕ್ಕಿದೆ. ಆದರೆ ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಶ್‌ಗೆ ನೋಟಿಸ್ ಕೊಟ್ಟಿದೆ.
ಟೀಸರ್‌ನಲ್ಲಿ ಯಶ್ ಸಿಗರೇಟ್ ಹಚ್ಚುವ ದೃಶ್ಯವಿದ್ದು, ಇದಕ್ಕೆ ‘ಧೂಮಪಾನ ಆರೋಗ್ಯಕ್ಕೆ ಹಾನಿಕರ’ ಅನ್ನೋ ಸೂಚನೆ ಹಾಕಿರಲಿಲ್ಲ. ಇದು ಧೂಮಪಾನವನ್ನು ಪ್ರಚೋದಿಸುತ್ತದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹೀಗಾಗಿ, ಸಿಗರೇಟ್ ಸೇದುವ ದೃಶ್ಯವನ್ನು ತೆಗೆದು ಹಾಕುವಂತೆ ಆರೋಗ್ಯ ಇಲಾಖೆ ನಟ ಯಶ್‌ಗೆ ನೋಟಿಸ್ ಕೊಟ್ಟಿದೆ.
-
ಸುದ್ದಿ2 weeks ago
ಡಿಜಿಟಲ್ ಸ್ಮಾಟ್೯ ಕ್ಲಾಸ್ ನಲ್ಲಿ ಸಾವಿತ್ರಿ ಭಾಯಿ ಫುಲೆಯವರ ಜನ್ಮ ದಿನ ಆಚರಣೆ
-
ಮನರಂಜನೆ2 weeks ago
ಅಪ್ಪಿಕೊಂಡು ಪಪ್ಪಿಕೊಟ್ಟು ಮುದ್ದಾಡುವಾಗ ಸಿಕ್ಕಿ ಬಿದ್ದ ಅನುಶ್ರೀ
-
ಸುದ್ದಿ3 days ago
ಶ್ರೀಶ್ರೀಶ್ರೀ ಗುರು ಆದಿ ಜಾಂಬವಂತ ಸ್ವಾಮಿ ಜಯಂತಿ ಆಚರಣೆ
-
Politics1 week ago
ಶಾಸಕರ ಸ್ವಗ್ರಾಮದಲ್ಲಿ ಸರ್ಕಾರಿ ಸೌಲಭ್ಯಕ್ಕೂ ದ್ವೇಷದ ರಾಜಕಾರಣವೇ?