ಮನರಂಜನೆ
ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ: ಚಿತ್ರಮಂದಿರ ತೆರೆಯಲು ಮಾಲೀಕರ ನಕಾರ
ಬಾಗೇಪಲ್ಲಿ: ಕೋವಿಡ್-19 ಕಾರಣಕ್ಕೆ ಆರೂವರೆ ತಿಂಗಳಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದರೂ ತಾಲ್ಲೂಕಿನಲ್ಲಿ ವೆಂಕಟೇಶ್ವರ ಚಿತ್ರಮಂದಿರ ಹಾಗೂ ರಾಘವೇಂದ್ರ ಚಿತ್ರಮಂದಿರ ಎರಡು ಚಿತ್ರಮಂದಿರಗಳು ಚಿತ್ರಮಂದಿರದ ಮಾಲೀಕರು ಗುರುವಾರ ಚಿತ್ರ ಪ್ರದರ್ಶನ ಪುನರಾರಂಭಿಸುವ ಮನಸ್ಸು ಮಾಡಲಿಲ್ಲ.
ರಾಜ್ಯ ಸರ್ಕಾರ ಲಾಕ್‌ಡೌನ್‌ನ ಭಾಗವಾಗಿ ರಾಜ್ಯದೆಲ್ಲೆಡೆ ಚಿತ್ರಮಂದಿರಗಳನ್ನು ಬಂದ್ ಮಾಡುವಂತೆ ಆದೇಶಿಸಿತ್ತು. ಈ ಆದೇಶದನ್ವಯ ತಾಲ್ಲೂಕಿನಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿತ್ತು. ನಂತರ ಲಾಕ್‌ಡೌನ್ ಆದೇಶ ಹಿಂಪಡೆದ ಸರ್ಕಾರ ಚಿತ್ರಮಂದಿರಗಳ ಪುನರಾರಂಭಕ್ಕೆ ಹಸಿರು ನಿಶಾನೆ ತೋರಿರಲಿಲ್ಲ.
ಇದೀಗ ಗುರುವಾರದಿಂದ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಆರಂಭಕ್ಕೆ ಸರ್ಕಾರ ಸಮ್ಮತಿಸಿತ್ತು. ಆದರೆ, ಕೋವಿಡ್ ಮಾರ್ಗಸೂಚಿ ಪಾಲನೆಯು ಕಷ್ಟವೆಂಬ ಕಾರಣಕ್ಕೆ ಬಹುತೇಕ ಚಿತ್ರಮಂದಿರಗಳ ಮಾಲೀಕರು ಚಿತ್ರ ಪ್ರದರ್ಶನ ಆರಂಭಿಸಿಲ್ಲ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಚಿತ್ರಮಂದಿರಗಳಲ್ಲಿ ಡಿಜಿಟಲ್ ಟಿಕೆಟ್ ವ್ಯವಸ್ಥೆ ಮಾಡಿಕೊಳ್ಳಬೇಕಿದೆ. ಮಾಸ್ಕ್ ಧರಿಸಿದ ಪ್ರೇಕ್ಷಕರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಬೇಕು. ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಪಡಿಸಬೇಕು. ಪ್ರದರ್ಶನ ಮುಗಿದ ಬಳಿಕ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಜತೆಗೆ ಆಸನಗಳ ನಡುವೆ ಅಂತರ ಕಾಯ್ದುಕೊಳ್ಳಬೇಕು.
ಮಾಲೀಕರಿಗೆ ಆರ್ಥಿಕ ಹೊರೆ :-
‘ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಲು ಹೊರಟರೆ ಆರ್ಥಿಕ ಹೊರೆ ಹೆಚ್ಚುತ್ತದೆ. ಆಸನಗಳ ನಡುವೆ ಅಂತರ ಕಾಯ್ದುಕೊಂಡರೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತದೆ. ಇದರಿಂದ ಆದಾಯ ಕುಸಿಯುತ್ತದೆ’ ಎಂದು ಚಿತ್ರಮಂದಿರಗಳ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲಿ ಸಾಗಿದ್ದು, ಮತ್ತೊಂದೆಡೆ ಪ್ರತಿನಿತ್ಯ ಸೋಂಕಿತರ ಸಾವು ಸಂಭವಿಸುತ್ತಿವೆ. ಕೋವಿಡ್ ಭಯದ ಕಾರಣಕ್ಕೆ ಮಾರುಕಟ್ಟೆಗೆ ಬರಲು ಹಿಂಜರಿಯುತ್ತಿರುವ ಜನರು ಚಿತ್ರಮಂದಿರಕ್ಕೆ ಬರುತ್ತಾರೆಯೇ ಎಂಬ ಅನುಮಾನ ಚಿತ್ರಮಂದಿರ ಮಾಲೀಕರಲ್ಲಿದೆ. ಸಿನಿಮಾ ಪ್ರದರ್ಶನಕ್ಕೆ ಹಾಕುವ ಬಂಡವಾಳ ಸಹ ಮರಳುವ ಭರವಸೆ ಇಲ್ಲವಾಗಿದೆ.
ತೆಲುಗು ಭಾಷೆಯ ಪ್ರಭಾವ ಹೆಚ್ಚಿರುವ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಸಿನಿಮಾಗಳು ಯಶಸ್ವಿ ಪ್ರದರ್ಶನ ಕಾಣುವುದಿಲ್ಲ. ತೆಲುಗು ಚಿತ್ರಗಳನ್ನು ಪ್ರದರ್ಶಿಸಿದರೆ ಮಾತ್ರ ಚಿತ್ರಮಂದಿರಗಳು ಭರ್ತಿಯಾಗುತ್ತವೆ. ಕೆಲವೇ ಸಿನಿಮಾಗಳನ್ನು ನಂಬಿಕೊಂಡು ಚಿತ್ರಮಂದಿರ ತೆರೆಯುವುದು ಹೊರೆಯಾಗುತ್ತದೆ ಎಂದು ಚಿತ್ರಮಂದಿರ ಮಾಲೀಕರು ಅಭಿಪ್ರಾಯ ವ್ಯಕ್ತಪಡಿಸಿದರು.
ಸುಪ್ರಸಿದ್ಧ ತಾರೆಯರ ದೊಡ್ಡ ಬಜೆಟ್ ಸಿನಿಮಾಗಳೇ ಚಿತ್ರಮಂದಿರಗಳ ಜೀವಾಳ. ಇಂತಹ ಸಿನಿಮಾಗಳು ಬಿಡುಗಡೆಯಾದಾಗ ಹಲವು ದಿನಗಳವರೆಗೆ ಪ್ರೇಕ್ಷಕರು ಕಿಕ್ಕಿರಿದು ಸೇರುತ್ತಾರೆ. ಆದರೆ, ಈಗ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಇರುವುದರಿಂದ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವುದಿಲ್ಲ.
ಹೀಗಾಗಿ ಚಿತ್ರಮಂದಿರದ ಬಾಗಿಲು ತೆಗೆಯಲು ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಪ್ರೇಕ್ಷಕರು ಕೊರೊನಾ ಸೋಂಕಿನ ಭಯದಿಂದ ಸಂಪೂರ್ಣವಾಗಿ ಹೊರ ಬರುವವರೆಗೂ ಕಾದು ನೋಡುವ ನಿರ್ಧಾರಕ್ಕೆ ಬಂದಿದ್ದಾರೆ.
ಮನರಂಜನೆ
ಪ್ರಭಾಸ್ & ಟೀಂಗೆ ಶುಭಹಾರೈಸಿದ KGF ಕಿಂಗ್ ಯಶ್
ಹೈದ್ರಾಬಾದ್ನಲ್ಲಿ ಸೆಟ್ಟೇರುತ್ತಿದೆ ಪ್ರಭಾಸ್ರ ಸಲಾರ್ ಸಿನಿಮಾ. ಬಾಹುಬಲಿ ಖ್ಯಾತಿಯ ಪ್ರಭಾಸ್ ಸಿನಿಮಾಗೆ ಡೈರೆಕ್ಷನ್ ಮಾಡಲಿದ್ದಾರೆ ಕೆಜಿಎಫ್ ಪ್ರಶಾಂತ್ ನೀಲ್. ಕೆಜಿಎಫ್ ಮೇಕರ್ ವಿಜಯ್ ಕಿರಗಂದೂರು ನಿರ್ಮಾಣದ ಬಹುಕೋಟಿ ಸಿನಿಮಾ ಇದಾಗಿದೆ. ಪ್ರಶಾಂತ್ ನೀಲ್-ಪ್ರಭಾಸ್ ಕಾಂಬೋನ ‘ಸಲಾರ್’ಗೆ ಇಂದು ಅದ್ಧೂರಿ ಮುಹೂರ್ತ..
ಮುಹೂರ್ತಕ್ಕೆ ಹಾಜಾರಾಗಿ ಪ್ರಭಾಸ್ & ಟೀಂಗೆ KGF ಕಿಂಗ್ ಯಶ್ ಶುಭ ಹಾರೈಸಿದ್ದಾರೆ
ಮನರಂಜನೆ
ಸಾಯಿ ಪಲ್ಲವಿ ನಟಿಸಿರುವ ‘ಲವ್‌ಸ್ಟೋರಿ’ ಸಿನಿಮಾದ ಟೀಸರ್ ಬಿಡುಗಡೆ
ನಟಿ ಸಾಯಿ ಪಲ್ಲವಿಗೆ ತಮ್ಮದೇ ಆದ ದೊಡ್ಡ ಅಭಿಮಾನಿ ವರ್ಗವಿದೆ. ಆಕೆಯ ಸಿನಿಮಾಗಳಿಗಾಗಿ ಜನ ಕಾಯುತ್ತಾರೆ. ಸಾಯಿ ಪಲ್ಲವಿ ನಟಿಸಿರುವ ‘ಲವ್‌ಸ್ಟೋರಿ’ ಸಿನಿಮಾದ ಟೀಸರ್ ಪ್ರಸ್ತುತ ಬಿಡುಗಡೆ ಆಗಿದ್ದು, ಸಖತ್ ಸದ್ದು ಮಾಡುತ್ತಿದೆ.
ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ನಟಿಸಿರುವ ‘ಲವ್ ಸ್ಟೋರಿ’ ಸಿನಿಮಾವನ್ನು ಖ್ಯಾತ ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶಿಸಿದ್ದಾರೆ. ಸುಂದರ-ಸರಳ ಪ್ರೇಮಕತೆಯಾದ ‘ಲವ್ ಸ್ಟೋರಿ’ ಸಿನಿಮಾದ ಟೀಸರ್ ಸಹ ಅಷ್ಟೇ ಸುಂದರ ಹಾಗೂ ಸರಳವಾಗಿದೆ.
ಮನರಂಜನೆ
ಕೆಜಿಎಫ್-2 ಟೀಸರ್ : ಆರೋಗ್ಯ ಇಲಾಖೆಯಿಂದ ನೋಟಿಸ್
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಬರ್ತಡೇಗೆ ಕೆಜಿಎಫ್ ಚಾಪ್ಟರ್-2 ಟೀಸರ್ ರಿಲೀಸ್ ಆಗಿದ್ದು, ಎಲ್ಲಾ ದಾಖಲೆಗಳನ್ನು ಮುರಿದು ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸ್ತಿದೆ. ಎಲ್ಲಾ ಕಡೆಯಿಂದಲೂ ಟೀಸರ್‌ಗೆ ಪ್ರಶಂಸೆ ಸಿಕ್ಕಿದೆ. ಆದರೆ ಈಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಶ್‌ಗೆ ನೋಟಿಸ್ ಕೊಟ್ಟಿದೆ.
ಟೀಸರ್‌ನಲ್ಲಿ ಯಶ್ ಸಿಗರೇಟ್ ಹಚ್ಚುವ ದೃಶ್ಯವಿದ್ದು, ಇದಕ್ಕೆ ‘ಧೂಮಪಾನ ಆರೋಗ್ಯಕ್ಕೆ ಹಾನಿಕರ’ ಅನ್ನೋ ಸೂಚನೆ ಹಾಕಿರಲಿಲ್ಲ. ಇದು ಧೂಮಪಾನವನ್ನು ಪ್ರಚೋದಿಸುತ್ತದೆ ಹಾಗೂ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ-2003 ಸೆಕ್ಷನ್ 5ರ ಉಲ್ಲಂಘನೆಯಾಗಿದೆ. ಹೀಗಾಗಿ, ಸಿಗರೇಟ್ ಸೇದುವ ದೃಶ್ಯವನ್ನು ತೆಗೆದು ಹಾಕುವಂತೆ ಆರೋಗ್ಯ ಇಲಾಖೆ ನಟ ಯಶ್‌ಗೆ ನೋಟಿಸ್ ಕೊಟ್ಟಿದೆ.
-
ಸುದ್ದಿ2 weeks ago
ಡಿಜಿಟಲ್ ಸ್ಮಾಟ್೯ ಕ್ಲಾಸ್ ನಲ್ಲಿ ಸಾವಿತ್ರಿ ಭಾಯಿ ಫುಲೆಯವರ ಜನ್ಮ ದಿನ ಆಚರಣೆ
-
ಮನರಂಜನೆ2 weeks ago
ಅಪ್ಪಿಕೊಂಡು ಪಪ್ಪಿಕೊಟ್ಟು ಮುದ್ದಾಡುವಾಗ ಸಿಕ್ಕಿ ಬಿದ್ದ ಅನುಶ್ರೀ
-
ಸುದ್ದಿ3 days ago
ಶ್ರೀಶ್ರೀಶ್ರೀ ಗುರು ಆದಿ ಜಾಂಬವಂತ ಸ್ವಾಮಿ ಜಯಂತಿ ಆಚರಣೆ
-
Politics1 week ago
ಶಾಸಕರ ಸ್ವಗ್ರಾಮದಲ್ಲಿ ಸರ್ಕಾರಿ ಸೌಲಭ್ಯಕ್ಕೂ ದ್ವೇಷದ ರಾಜಕಾರಣವೇ?