Politics
ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ
ಬಾಗೇಪಲ್ಲಿ:- ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿದ್ದು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ’ ಎಂದು ಬಾಗೇಪಲ್ಲಿ ತಾಲ್ಲೂಕು ಜನಪ್ರಿಯ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ದ್ವಾರಕಾ ಪಾರ್ಟಿ ಹಾಲ್ ನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ಮತ ಪ್ರಚಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ರಾಜ್ಯದೆಲ್ಲೆಡೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಎಲ್ಲಾ ವರ್ಗದವರಿಗೆ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ಭವಿಷ್ಯದಲ್ಲಿ ಬೇರೆ ಯಾರೋ ಸಿದ್ದರಾಮಯ್ಯ ಅವರಂತೆ ಆಡಳಿತ ನೀಡಲು ಸಾಧ್ಯವಿಲ್ಲ.
ರಾಜ್ಯದ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ರೈತರನ್ನು ಸರ್ವನಾಶ ಮಾಡುವಲ್ಲಿ ರೈತವಿರೋಧಿ ಕಾಯಿದೆಗಳನ್ನು
ತರುತ್ತಿವೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಪ್ರಧಾನಿ ಇಂದಿರಾಗಾಂಧಿ “ಉಳುವವನೆ ಭೂಮಿಯ ಒಡೆಯ” ಎಂದರೆ ಇಂದಿನ ಬಿಜೆಪಿ ನಾಯಕರು ” ಆ ಕಾಯಿದೆಯನ್ನು ತೆಗೆದುಹಾಕಿ, ಬಂಡವಾಳ ಶಾಹಿಗಳಿಗೆ , ಕಾರ್ಪೊರೇಟ್ ದಲ್ಲಾಳಿಗಳಿಗೆ ರೈತರ ಜಮೀನು ಪರಬಾರೆ ಮಾಡಿ, ತನ್ನದೇ ಜಮೀನಿನಲ್ಲಿ, ರೈತನು ಗುಲಾಮನಾಗಿ ದುಡಿಯುವ ದುಸ್ಥಿತಿಗೆ” ಹೆಜ್ಜೆ ಹಾಕುತ್ತಿದ್ದಾರೆ.
ಇವೆಲ್ಲಾ ಕಾನೂನುಗಳಿಗೆ ಅಂಕಿತ ದೊರೆಯಲು, ವಿಧಾನ ಪರಿಷತ್ ಸದಸ್ಯರ ಸಂಖ್ಯೆ ಬಿಜೆಪಿಗೆ ಕಡಿಮೆ ಇದೆ. ಅದಕ್ಕೋಸ್ಕರ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ರವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ, ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಸಹಕರಿಸಿ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯದ ಜನ ಬಿಜೆಪಿಗೆ ಅಧಿಕಾರ ನೀಡಿ ಬೇಸತ್ತಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ನೀಡಿದ್ದ ಭರವಸೆಗಳೆಲ್ಲಾ ಹುಸಿಯಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಿಸೆಂಬರ್ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಶಿಕ್ಷಕರು, ಪದವೀಧರರು,ಕಾಂಗ್ರೆಸ್ ಕಾರ್ಯಕರ್ತರು ಹಿತೈಷಿಗಳು ಸಂಘಟಿತರಾಗಿ ಇದೇ ತಿಂಗಳ 28 ರಂದು ನಡೆಯುವ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಮೇಶ್ ಬಾಬು ರವರನ್ನು ಮೊದಲನೆಯ ಪ್ರಾಶಸ್ತ್ಯ ಮತವನ್ನು ಕೊಟ್ಟು ಅಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ “ನಾನು ಹಿಂದೆ ವಿಧಾನ ಪರಿಷತ್ ಸದಸ್ಯನಾಗಿದ್ದ ಸಂದರ್ಭದಿಂದಲೂ ಆಗ್ನೇಯ ಪದವೀಧರರ ಕ್ಷೇತ್ರದ ಎಲ್ಲಾ ಜಿಲ್ಲೆಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಪದವೀಧರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಹಾಗೂ
ಈ ಬಾರಿ ಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಗಳಲ್ಲೂ ಸಕಾರಾತ್ಮಕ ಬೆಂಬಲ ವ್ಯಕ್ತವಾಗಿದ್ದು, ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತೇನೆ’ ಎಂದು ರಮೇಶ್‌ಬಾಬು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಹೆಚ್.ಎಸ್. ನರೇಂದ್ರ, ಶ್ರೀನಿವಾಸ್ ರೆಡ್ಡಿ, ಪುರಸಭೆ ಸದಸ್ಯ ನಂಜುಂಡಪ್ಪ, ಗಡ್ಡಂ ರಮೇಶ್ ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಿ.ವಿ.ವೆಂಕಟರವಣ, ತಾಲ್ಲೂಕು ನೌಕರರ ಸಂಘದ ಗೌರವಾಧ್ಯಕ್ಷರಾದ ಆರ್.ಹನುಮಂತ ರೆಡ್ಡಿ ,ಪದವೀಧರರು ಶಿಕ್ಷಕರು, ವಕೀಲರು ಹಾಗೂ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.
Politics
ಸರ್ಕಾರಿ ಹೊಸ ನೇಮಕಾತಿ ವಿಚಾರದಲ್ಲಿ ಆರ್ಥಿಕ ಇಲಾಖೆ ಕೊಂಚ ಸಡಿಲಿಕೆ ನೀಡಿದೆ
ಬೆಂಗಳೂರು : ಸರ್ಕಾರಿ ಹೊಸ ನೇಮಕಾತಿ ವಿಚಾರದಲ್ಲಿ ಆರ್ಥಿಕ ಇಲಾಖೆ ತನ್ನ ಬಿಗಿ ನಿಲುವನ್ನು ಕೊಂಚ ನಡೆಸಿದೆ. ಈಗಾಗಲೇ ಸಂಪೂರ್ಣವಾಗಿ ಪ್ರಕ್ರಿಯೆ ನಡೆದಿರುವ ನೇಮಕಗಳನ್ನು ಪೂರ್ಣಗೊಳಿಸಲು ಇಲಾಖೆಗೆ ಹಸಿರು ನಿಶಾನೆ ನೀಡಿದೆ.
ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಇನ್ನಿತರೆ ಆಯ್ಕೆ ಮಂಡಳಿಗಳಿಂದ ಒಂದೇ ಅಧಿಸೂಚನೆ ಮೂಲಕ ಆಯ್ಕೆಗೊಂಡು, ಆಯ್ಕೆ ಪಟ್ಟಿಯಲ್ಲಿ ಕೆಲ ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ, ಇನ್ನು ಕೆಲವು ಅಭ್ಯರ್ಥಿಗಳು ಆದೇಶ ಪಡೆದಿರುವ ಪ್ರಕರಣದಲ್ಲಿ ಆರ್ಥಿಕ ಇಲಾಖೆಯ ರಿಯಾಯಿತಿ ನೀಡಿದೆ.
Politics
ನಾಳೆ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಗ್ಗೆ ಅಕ್ಟೋಬರ್ 23 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಈ ಸಿಎಂ ಅಧ್ಯಕ್ಷತೆಯ ಸಭೆಯಲ್ಲಿ ಕನ್ನಡ ಸಂಸ್ಕೃತಿ ಸಚಿವ ಸಿ.ಟಿ ರವಿ ವಿಷಯ ಪ್ರಸ್ತಾಪಿಸಲಿದೆ ಕನ್ನಡ ರಾಜ್ಯೋತ್ಸವ ಬಗ್ಗೆಯೂ ಚರ್ಚೆ ನಡೆಯಲಿದೆ.
Politics
ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ
ಬೆಂಗಳೂರು : ಸಿಎಂ ಯಡಿಯೂರಪ್ಪನವರ ಬಗ್ಗೆ ಹೇಳಿಕೆ ನೀಡಿ ಅನಗತ್ಯ ಗೊಂದಲ ಸೃಷ್ಟಿಸಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಯತ್ನಾಳ್ ತಮ್ಮ ಹಿರಿತನವನ್ನು ಮರೆತು ಹುಚ್ಚುಚ್ಚಾಗಿ ಮಾತನಾಡಿದರೆ ಜನ ಒಪ್ಪುವುದಿಲ್ಲ, ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.