ಸುದ್ದಿ
ಪ್ರಗತಿಪರ ಹೋರಾಟಗಾರ ಮಾರುತಿ ಮಾನ್ಪಡೆಯವರು ನಿಧನ
ಚಿಕ್ಕಬಳ್ಳಾಪುರ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ರಾಜ್ಯ ನಾಯಕರು, ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಕಾಮ್ರೇಡ್ ಮಾರುತಿರವರು ನಿಧನರಾಗಿದ್ದು ಜಿಲ್ಲಾ ಸಿಪಿಐಎಂ ಪಕ್ಷವು ಸಂತಾಪ ವ್ಯಕ್ತಪಡಿಸಿದೆ. ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕಿಗೊಳಗಾಗಿದ್ದ ಮಾನ್ಪಡೆ ಅವರನ್ನು ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ದುಡಿಯುವ ವರ್ಗದ ಜನಾಂದೋಲನಕ್ಕೆ ಸದಾ ಸಿದ್ದರೆನಿಸಿಕೊಂಡಿದ್ದರು. ರೈತ ಚಳುವಳಿ ಮತ್ತು ಗ್ರಾಮ ಪಂಚಾಯತಿ ನೌಕರರ ಚಳುವಳಿಗಳಲ್ಲಿ ತೊಡಗಿಸಿಕೊಂಡಿದ್ದರು. ಜೊತೆಗೆ ಅಂಗನವಾಡಿ ಚಳುವಳಿಯನ್ನು,ಗ್ರಾಮ ಪಂಚಾಯತಿ ನೌಕರರ ಚಳುವಳಿಗಳು ಸೇರಿದಂತೆ ಹಲವಾರು ಸಂಘಟನೆಗಳನ್ನು ರಾಜ್ಯದಲ್ಲಿ ಕಟ್ಟಿದವರಲ್ಲಿ ಪ್ರಮುಖರು ಕಾಮ್ರೇಡ್ ಮಾರುತಿ ಮಾನ್ಪಡೆಯವರು.
ಸರ್ಕಾರಿ ಸೇವೆ ತೊರೆದು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸಿಐಟಿಯು ಮತ್ತು ಸಿಪಿಐಎಂ ನ ನೇತಾರರಾಗಿ ಅವಿರತವಾಗಿ ಶ್ರಮಿಸಿದವರು. ರೈತ ಕಾರ್ಮಿಕ ನಾಯಕರಾದ ಇವರು ಹಿಡಿದ ಕೆಲಸ ಬೆನ್ಹತ್ತಿ ಮಾಡಿಸುವವರಾಗಿದ್ದರು.
ಬಾಗೇಪಲ್ಲಿ ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವಿಭಜಿತ ಕೋಲಾರ ಜಿಲ್ಲೆಯ ಹಲವಾರು ಜನ ಚಳುವಳಿಗಳಲ್ಲಿ ಭಾಗವಹಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯ ಹಲವಾರು ಚಳುವಳಿಗಳಿಗೆ ಹಾಗೂ ಮಾರುತಿ ಮಾನ್ಪಡೆಯವರಿಗೂ ಅವಿನಾಭಾವ ಸಂಬಂಧವಿತ್ತು.
ಅವರ ನಿಧನವು ನೋವನ್ನುಂಟು ಮಾಡಿದೆ, ಅವರ ಸೇವೆ ಹಲವು ಸಂಘಟನೆಗಳಲ್ಲಿ ಎಂದಿಗೂ ಮರೆಯಲಾಗದ್ದು, ಅವರ ಹೋರಾಟದ ಹಾದಿ ಈಗಿನ ಯುವ ಪೀಳಿಗೆಗೆ ಮಾರ್ಗದರ್ಶಿ ಎಂದು ಸಿಪಿಐಎಂ ಮುಖಂಡ ಎಂ.ಪಿ ಮುನಿವೆಂಕಟಪ್ಪ ತಿಳಿಸಿದರು.
ಸುದ್ದಿ
ಚಾಲಕರ ವೇತನದಿಂದ ದಂಡದ ಮೊತ್ತ ವಸೂಲಿ
ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸುವ ಬಸ್ ಚಾಲಕರ ವೇತನದಿಂದ ದಂಡದ ಮೊತ್ತವನ್ನು ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬಿಎಂಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ವಿಭಾಗಿಯ ಸಂಚಾರ ಅಧಿಕಾರಿಗಳ ಸಭೆಯಲ್ಲಿ ದಂಡದ ಮೊತ್ತ ಪಾವತಿ ಕುರಿತು ಚರ್ಚೆ ಮಾಡಲಾಯಿತು.
ಸುದ್ದಿ
ಅತ್ಕೂರು ಗ್ರಾ.ಪಂ: ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಸ್ಥಾನ ಮುಂದುವರೆಸಲು ಮನವಿ
ಅತ್ಕೂರು ಗ್ರಾ.ಪಂ: ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಸ್ಥಾನ ಮುಂದುವರೆಸಲು- ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಮನವಿ.
ರಾಯಚೂರು.ಅ.23: ಅತ್ಕೂರು ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಎರಡು ಸ್ಥಾನಗಳನ್ನು ಮುಂದುವರೆಸಲು ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಅತ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಕೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಎರಡು ಮೀಸಲು ಸ್ಥಾನಗಳು ನಿಗದಿಗೊಳಿಸಲಾಗಿತ್ತು. ಆದರೆ ಒಂದು ಸ್ಥಾನವನ್ನು ಸರ್ಜಾಪುರು ಗ್ರಾಮಕ್ಕೆ ನಿಗದಿಗೊಳಿಸಲಾಗಿದೆ. ಸರ್ಜಾಪುರು ಗ್ರಾಮದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದವರು 100 ಜನರಿಗಿಂತ ಕಡಿಮೆ. ಆದರೆ ಅತ್ಕೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದವರು 1400 ಕಿಂತ ಜಾಸ್ತಿ. ಆದಕಾರಣ ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಎರಡು ಸ್ಥಾನಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಅಬ್ರಹಾಂ ಕಮಲಾಪೂರು, ಆಂಜನೇಯ, ನರಸಿಂಹಲು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ದುರ್ಗೇಶ್ ಬೋವಿ ಮಸ್ಕಿ
ಸುದ್ದಿ
ಕಲ್ಲು ಚಪ್ಪಡಿ ಬಿದ್ದು ತಂದೆ, ಮಗ ಸಾವು
ಕಲ್ಲು ಚಪ್ಪಡಿಯ ಮನೆಯೊಂದು ಕುಸಿದುಬಿದ್ದು ನಾಲ್ವರ ಪೈಕಿ ತಂದೆ ಮಗ ಸಾವನ್ನಪ್ಪಿದ್ದು, ತಾಯಿ ಮಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಚಿಂತಾಮಣಿ: ಬೆಂಗಳೂರು ರಸ್ತೆಯಲ್ಲಿರು ವೈಜಕೂರು ಗ್ರಾಮದಲ್ಲಿ ಕಲ್ಲು ಚಪ್ಪಡಿಯ ಮನೆಯೊಂದು ಕುಸಿದುಬಿದ್ದು ಮನೆಯಲ್ಲಿದ್ದ ನಾಲ್ವರ ಪೈಕಿ ತಂದೆ ಮಗ ಸಾವನ್ನಪ್ಪಿದ್ದು ಇನ್ನಿಬ್ಬರು ತಾಯಿ ಮಗಳು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗಿನ ಜಾವ ಸುಮಾರು ೬-೩೦ ಗಂಟೆ ಸಮಯದಲ್ಲಿ ನಡೆದಿದೆ.
ಕಲ್ಲುಚಪ್ಪಡಿ ಕೆಳೆಗೆ ಸಿಕ್ಕಿ ಹಾಕಿಕೊಂಡು ಸಾವನ್ನಪ್ಪಿರುವವರನ್ನು ವೈಜಕೂರು ಗ್ರಾಮದ ನಿವಾಸಿ ಕೈವಾರದಲ್ಲಿ ಪೋಸ್ಟ್ ಮೆನ್ ಆಗಿ ಕೆಲಸ ನಿರ್ವಸುತ್ತಿದ್ದ ರವಿಕುಮಾರ್ (೪೦) ಮತ್ತು ಆತನ ಮಗ ರಾಹುಲ್ (೧೨) ಎಂದು ಗುರುತಿಲಾಗಿದ್ದು, ಗಾಯಗೊಂಡ ಮಹಿಳೆಯನ್ನು ರವಿಕುಮಾರ್ ಪತ್ನಿ ಅಂಗ ನವಾಡಿ ಶಿಕ್ಷಕಿ ರಾಧಮ್ಮ (೩೫) ಮತ್ತು ರುಚಿತಾ (೧೪) ವರ್ಷದ ಹುಡುಗಿ ಎಂದು ಗುರುತಿಸಲಾಗಿದೆ.
ಇನ್ನು ಗಾಯಗೊಂಡವರನ್ನು ಚಿಂತಾಮಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಸಕ ಕೃಷ್ಣಾರೆಡ್ಡಿ ಮತ್ತು ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ.
ವರದಿ : ಕೆ.ಮಂಜುನಾಥ್ ಶಿಡ್ಲಘಟ್ಟ