ಸುದ್ದಿ
ಗ್ರಾಮ ಪಂಚಾಯತಿ ಚುನಾವಣೆ ದಿನಾಂಕ ಪ್ರಕಟ
ಬೆಂಗಳೂರು : ರಾಜ್ಯದಲ್ಲಿ ಕೆಲವು ದಿನಗಳಿಂದ ತೀವ್ರ ಕೂತುಹಲ ಮೂಡಿಸಿದ್ದ ಗ್ರಾಮಪಂಚಾಯಿತಿ ಚುನಾವಣೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಮತ್ತು 27 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಇಂದು ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದರಾಜ್ಯ ಚುನಾವಣಾ ಆಯೋಗ, ರಾಜ್ಯದಲ್ಲಿ 2 ಹಂತಗಳಲ್ಲಿ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ. ರಾಜ್ಯದ ಒಟ್ಟು 5,762 ಗ್ರಾಮಪಂಚಾಯಿತಿಗಳಿಗೆ ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಘೋಷಣೆ ಮಾಡಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ.
ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್-19 ನಿಯಮ ಕಡ್ಡಾಯ ಮಾಡಲಾಗಿದ್ದು, ಬೀದರ್ ಜಿಲ್ಲೆಯಲ್ಲಿ ಮತದಾನಕ್ಕೆ ಇವಿಎಂ ಬಳಸಲು ನಿರ್ಧರಿಸಲಾಗಿದೆ.
ಸುದ್ದಿ
ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿ ಒದಗಿಸುವ ಮೂರನೇ ಹಂತದ ಅಭಿಯಾನ
ಶಿಡ್ಲಘಟ್ಟ : ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿ ಒದಗಿಸುವ ಮೂರನೇ ಹಂತದ ಅಭಿಯಾನವನ್ನು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಪ್ರಾರಂಭಿಸಿದರು. ಸೋಮವಾರ 60 ವರ್ಷ ವಯಸ್ಸಿನ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲಾಯಿತು.
“60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಇತರೆ ಆನಾರೋಗ್ಯ (ಕೋಮಾರ್ಬಿಡಿಟಿ) ಸಮಸ್ಯೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಅರ್ಹ ವ್ಯಕ್ತಿಗಳು ಲಸಿಕೆ ಪಡೆಯುವುದಕ್ಕಾಗಿ ಕೋ–ವಿನ್ ಆ್ಯಪ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಿಂದ ಸಮಯ ಕಾಯ್ದಿರಿಸಬಹುದು” ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ತಿಳಿಸಿದರು.
“60 ವರ್ಷ ದಾಟಿದವರು ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರು. ಬೇರೆ ರೋಗಗಳನ್ನು ಹೊಂದಿರುವ, ಈಗಾಗಲೇ 45 ದಾಟಿದವರು ಕೂಡ ನೋಂದಣಿಗೆ ಅರ್ಹರು. 20 ಅನಾರೋಗ್ಯಗಳನ್ನು ಆರೋಗ್ಯ ಸಚಿವಾಲಯವು ಪಟ್ಟಿ ಮಾಡಿದೆ. ಒಂದು ಮೊಬೈಲ್ ಸಂಖ್ಯೆ ನೀಡಿ ಗರಿಷ್ಠ ನಾಲ್ಕು ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಬಹುದು. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್‌ಪಿಆರ್ ಸ್ಮಾರ್ಟ್ ಕಾರ್ಡ್, ಭಾವಚಿತ್ರ ಇರುವ ಪೆನ್ಶನ್ ಪತ್ರದಲ್ಲಿ ಯಾವುದಾದರೂ ಒಂದನ್ನು ಬಳಸಿ ನೋಂದಣಿ ಮಾಡಬಹುದು. ಪ್ರತಿ ದಿನ ಸಂಜೆ 3 ಗಂಟೆಯವರೆಗೆ ಈ ಆಸ್ಪತ್ರೆಗೆ ಭೇಟಿ ನೀಡಿಯೂ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದು” ಎಂದು ಅವರು ವಿವರಿಸಿದರು.
“ನಮ್ಮ ತಾಲ್ಲೂಕು ಆಸ್ಪತ್ರೆಯಲ್ಲಿ 60 ವರ್ಷ ಮೇಲ್ಪಟ್ಟ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡುತ್ತಿದ್ದು, ಬರುವವರು ಆಧಾರ್, ಎಲೆಕ್ಷನ್ ಕಾರ್ಡ್ ಮತ್ತು ತಮ್ಮ ಮೊಬೈಲ್ ಅನ್ನು ತರಬೇಕು.ಹಿರಿಯ ನಾಗರಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಅವರು ಮನವಿ ಮಾಡಿದರು.
ವರದಿ.ಕೆ.ಮಂಜುನಾಥ್.ಶಿಡ್ಲಘಟ್ಟ
ಸುದ್ದಿ
ಎನ್ ಆರ್ ಬಿ ಸಿ 5 ಏ ಕಾಲುವೆ ಜಾರಿಗೆ ಒತ್ತಾಯಿಸಿ ರಸ್ತೆತಡೆ ಟಿ ಯು ಸಿ ಐ, ಕೆ ಆರ್ ಎಸ್ ನೇತೃತ್ವದಲ್ಲಿ ಪ್ರತಿಭಟನೆ
ಮಸ್ಕಿ : – ಎನ್ ಆರ್ ಬಿ ಸಿ 5ಏ ಕಾಲುವೆ ಜಾರಿಗೊಳಿಸುವಂತೆ ಒತ್ತಾಯಿಸಿ ಟಿ ಯು ಸಿ ಐ, ಮತ್ತು ಕರ್ನಾಟಕ ರೈತ ಸಂಘಟನೆಗಳು ನೇತ್ರತ್ವದಲ್ಲಿ ಪಾಮನಕಲ್ಲೂರು ಹಟ್ಟಿ ರಸ್ತೆಯಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಮಾನಸಯ್ಯ ಮಾತನಾಡಿ ಎನ್ ಆರ್ ಬಿ ಸಿ 5ಏ ಕಾಲುವೆ ಯೋಜನೆ ಜಾರಿಗೊಳಿಸಿ ಎಂಬುದು ಈ ಭಾಗದ ಜನತೆಯ ಒಂದುವರೆ ದಶಕದ ಬಹುಮುಖ್ಯ ಹಕ್ಕಾಗಿದೆ, ಇದುವರೆಗಿನ ಎಲ್ಲಾ ಸರ್ಕಾರಗಳು ಮತ್ತು ಭಾಗದ ಎಲ್ಲ ಜನಪ್ರತಿನಿಧಿಗಳು ಈ ನೆಲದ ರೈತರ ಈ ಬೇಡಿಕೆಗೆ ಯಾವ ಸ್ಪಂದನೆಯನ್ನು ನೀಡದೆ, ಬರಿ ನಿರ್ಲಕ್ಷವೇ ಉತ್ತರ ವಾಗಿದ್ದು ಇದು ಬೇಸರದ ಸಂಗತಿಯಾಗಿದೆ 5 ಎ ನಾಲಾ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ ಈ ಭಾಗದ ರೈತರು ಆರಂಭಿಸಿರುವ ಅನಿರ್ದಿಷ್ಟ ಅವಧಿ ಹೋರಾಟ 100ನೇ ದಿನ ಪೂರೈಸಿದೆ, ಆದರೂ ಸರ್ಕಾರದ ಸೂಕ್ತ ಸ್ಪಂದನೆ ದೊರೆಯದೆ ಹೋಗಿದೆ ಸರ್ಕಾರ ರೈತ ವಿರೋಧಿ ನಡೆ ತೀವ್ರ ಖಂಡನೀಯವಾಗಿದೆ ಎಂದರು.
ಮಸ್ಕಿ , ಮಾನ್ವಿ, ಲಿಂಗಸಗೂರು , ದೇವದುರ್ಗ ಎಲ್ಲ ತಾಲೂಕುಗಳ 107 ಗ್ರಾಮಗಳು 1, 77, 912. ಎಕ್ಕರೆ ಪ್ರದೇಶಕ್ಕೆ ನೀರಾವರಿ ಒದಗಿಸುವ ಮಹತ್ವದ ಯೋಜನೆ ಇದಾಗಿದೆ , ರಾಜಕೀಯ ಷಡ್ಯಂತರ ದಿಂದ ರೈತರ ಬದುಕನ್ನು ಮತ್ತಷ್ಟು ದುಸ್ತರ ಗೊಳಿಸಲು ಯಾರು ಮುಂದಾಗಬಾರದು ಆಗಿದೆ .
ನೀರಾವರಿ ವಂಚಿತ ಈ ಗ್ರಾಮಗಳು ಜನತೆ ಮಹಾನಗರಗಳಿಗೆ ಗುಳ್ಳೆ ಹೋಗುವ ಅನಿವಾರ್ಯ ಪರಿಸ್ಥಿತಿಗೆ ಅನುಗುಣವಾಗಿದೆ. ಈ ಪರಿಸ್ಥಿತಿಯನ್ನು ನೋಡಿ ಪರಿಗಣಿಸಿ ಯೋಜನೆ ಜಾರಿಗೆ ಮುಂದಾಗಬೇಕೆಂದು ಒತ್ತಾಯಿಸಿದರು, ಮಳೆಯಾಶ್ರಿತ ರಾಯಚೂರು ಕೊಪ್ಪಳ ಜಿಲ್ಲೆಯ ರೈತರು ಲಕ್ಷಾಂತರ ಎಕರೆ ಭೂಮಿ ನೀರು ಒದಗಿಸುವ ಮಹತ್ವದ ಯೋಜನೆ ಎನ್ ಆರ್ ಬಿ ಸಿ 5ಏ ಕಾಲುವೆ ಯಾಗಿದ್ದು ನೀರಾವರಿ ನಿರೀಕ್ಷೆಯಲ್ಲಿರುವ ರೈತರ ಬದುಕಿಗೆ ಪ್ರಥಮ ಆದ್ಯತೆಯನ್ನು 2021 – 22ರ ಬಜೆಟ್ ನಲ್ಲಿ, ಅನುದಾನ ನೀಡಬೇಕೆಂದು ಒತ್ತಾಯಿಸಿದರು .
ಈ ಸಂದರ್ಭದಲ್ಲಿ ಆರ್ ಮಾನಸಯ್ಯ ,
ಸಂತೋಷ್ ದಿನ್ನಿ, ಮೋನಿಶ್ ದೊಡ್ಡಮನಿ, ತಿಪ್ಪರಾಜು ಶಾಂತಕುಮಾರ್, ಚಾಂದ್ ಸಾಬ್, ಮರಿಯಪ್ಪ, ಬಸವರಾಜ್, ಸುತ್ತಮುತ್ತಲಿನ ಗ್ರಾಮಗಳ ರೈತರು ಭಾಗವಹಿಸಿದ್ದರು.
ವರದಿ: ದುರ್ಗೇಶ್ ಭೋವಿ ಮಸ್ಕಿ
ಸುದ್ದಿ
ಬೇಸಿಗೆಯ ಮುನ್ನ ಅರಣ್ಯ ರಕ್ಷಣೆ ಅಗತ್ಯ ಕ್ರಮ
ಬಾಗೇಪಲ್ಲಿ: ಪ್ರಕೃತಿಯಲ್ಲಿನ ಬೆಟ್ಟಗುಡ್ಡಗಳಲ್ಲಿ ಸಸ್ಯ ಸಂಪತ್ತು ಫೆಬ್ರವರಿ ತಿಂಗಳಲ್ಲಿ ಸಾಮಾನ್ಯವಾಗಿ ಎಲೆಗಳುದುರಿಸುತ್ತವೆ. ಇವು ಒಣಗಿ ಆಕಸ್ಮಿಕವಾಗಿ ಅಥವಾ ಕಿಡಿಗೇಡಿಗಳು ಬೆಂಕಿ ಹಚ್ಚಿದರೆ ಇಡೀ ಬೆಟ್ಟ ಬೆಂಕಿಯ ಕೆನ್ನಾಲಿಗೆಗೆ ಭಸ್ಮವಾಗುತ್ತದೆ. ಇಂತಹ ಕೃತ್ಯಗಳನ್ನು ತಡೆಯಬೇಕಾಗಿರುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯವೆಂದು ಭಾವಿಸಬೇಕು.
ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಗ್ರಾಮ ಪಂಚಾಯತಿಗಳು ಜನತೆಯಲ್ಲಿ ಅರಿವು ಮೂಡಿಸಿ ಸಸ್ಯ ಸಂಪತ್ತಿನ ನಾಶವನ್ನು ತಪ್ಪಿಸಬೇಕಿದೆ. ಇದರಿಂದಾಗಿ ಜೀವ ವೈವಿಧ್ಯತೆಯನ್ನು ಸಂರಕ್ಷಿಸಬಹುದು ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.