Connect with us
Ad Widget

ಸುದ್ದಿ

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ “ಪಕ್ಷಾಂತರ ಪರ್ವ ಆರಂಭ”

Published

on

ಶಿಡ್ಲಘಟ್ಟ :ತತ್ವ ಸಿದ್ದಾಂತಗಳ ‌ಮೇಲೆ ನಂಬಿಕೆ ಇಟ್ಟು ಪಕ್ಷ ಕ್ಕೆ ಬರುವ ಎಲ್ಲರಿಗೂ ಸ್ವಾಗತ ಎಂದು ಜೆಡಿಎಸ್ ಪಕ್ಷದ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ತಿಳಿಸಿ ದರು. ತಾಲೂಕಿನ ತಿಮ್ಮನಾಯಕನ ಹಳ್ಳಿ ಪಂಚಾಯತಿ ಯ ಯರ್ರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ನೂತನ ಕಾರ್ಯಕರ್ತರಸೇರ್ಪಡೆ ಕಾರ್ಯಕ್ರಮ ದಲ್ಲಿ ಮಾತನಾಡುತ್ತಿದ್ದರು.

ತಿಮ್ಮನಾಯಕಹಳ್ಳಿ ಪಂಚಾಯತಿ ಗೆ ಸೇರಿದ ನೂರಾರು ಕಾಂಗ್ರೆಸ್ ಕಾರ್ಯ ಕರ್ತರು ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆ ಯಾದವರನ್ನು ಪಕ್ಷ ಕ್ಕೆ ಬರಮಾಡಿಕೊಂಡರು ಮುಂದಿನ ತಿಂಗಳಿನಿಂದ ತಾವು ತಾಲೂಕಿನ ಎಲ್ಲಾ ಕಡೆ ಪ್ರವಾಸ ಕೈಗೊಂಡು ಪಕ್ಷದ ಕಾರ್ಯಕರ್ತ ರ ಸಂಘಟನೆ ಮಾಡುವುದಾಗಿ ತಿಳಿಸಿದರು ನನಗೆ ನಮ್ಮ ಪಕ್ಷಕ್ಕೆ ಕಾರ್ಯಕರ್ತ ರೇ ಬಂಡವಾಳ ವಾಗಿದ್ದಾರೆ ಸಂಘಟಿತ ಹೋರಾಟ ಮಾಡಿ ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಾಲೂಕಿನ ಎಲ್ಲಾ ೩೦ಗ್ರಾಮ ಪಂಚಾಯತಿ ಗಳಲ್ಲಿ ಜೆಡಿಎಸ್ ತೆಕ್ಕೆಗೆ ಬರವ ಹಾಗೆ ಮಾಡುವ ಪಣತೊಟ್ಟಿದ್ದು ಎಲ್ಲರ ಸಹಕಾರ ಬೇಕಾಗಿದೆ ಎಂದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಉಂಟಾಗಲು ನಿರ್ದಿಷ್ಟ ಪಂಗಡದ ಕೆಲ ಮುಖಂಡ ರು ಫತ್ವ ಹೊರಡಿಸಿ ತಮಗೆ ಮತ ನೀಡಬಾರದೆಂದು ಹೇಳಿದ ಕಾರಣ ಕಡಿಮೆ ಅಂತರದಿಂದ ಸೋಲೊಪ್ಪ ಬೇಕಾಯಿತು ಎಂದು ತಿಳಸಿದರು ಈಗಾಗಲೇ ತಾಲೂಕು ಪಂಚಾಯತಿ ಪಿ ಎಲ್ ಡಿ ಬ್ಯಾಂಕ್ ಜೆಡಿಎಸ್ ವಶದಲ್ಲಿದ್ದು. ತಮಗೆ ಹಾಗೂ ಜೆಡಿಎಸ್ ಪಕ್ಷಕ್ಕೆ ಜನರ ಒಲವು ಇದ್ದು ಕಾರ್ಯ ಕರ್ತರು ಇದೇ ಉತ್ಸಾಹ ದಿಂದ ಪಕ್ಷ ಸಂಘಟನೆ ಮಾಡಿದ್ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮಪಕ್ಷಕ್ಕೆ ಜಯ ಖಚಿತವೆಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿದರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜ್ ಗೋಪಾಲ್, ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ರೆಡ್ಡಿ, ಗೋಪಾಲ್,ತಿಮ್ಮನಾಯಕನ ಹಳ್ಳಿ ಮಂಜುನಾಥ್, ರಘುನಾಥ್ ರೆಡ್ಡಿ, ಮತ್ತು ನರಸಿಂಹಮೂರ್ತಿ, ಮುಂತಾದವರು ಕಾರ್ಯ ಕ್ರಮದಲ್ಲಿ ಹಾಜರಿದ್ದರು.

ವರದಿ: ಕೆ.ಮಂಜುನಾಥ್. ಶಿಡ್ಲಘಟ್ಟ

Continue Reading
Advertisement
Click to comment

Leave a Reply

Your email address will not be published. Required fields are marked *

ಸುದ್ದಿ

ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ

Published

on

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Continue Reading

ಸುದ್ದಿ

ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Published

on

ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.

ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ

Continue Reading

ಸುದ್ದಿ

ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳ ವೀಕ್ಷಣೆ ನಡೆಸಿದ ಮುಖ್ಯಮಂತ್ರಿ

Published

on

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಶಿವಮೊಗ್ಗದ ಹೊರವಲಯದ ಸೋಗಾನೆಯಲ್ಲಿ, ಸುಮಾರು 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳ ವೀಕ್ಷಣೆ ನಡೆಸಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ ಮತ್ತಿತರರು ಉಪಸ್ಥಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್