Connect with us
Ad Widget

Politics

ಈ ಗ್ರಾಮ ಪಂಚಾಯತಿ ಚುನಾವಣೆ ಜಿಲ್ಲೆಯಲ್ಲಿ ಕುತೂಹಲಕಾರಿಯಾಗಲಿದೆ‌‌

Published

on

ಚಿಕ್ಕಬಳ್ಳಾಪುರ: ಕೆಲವು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟಿಸಿ ಚುನಾವಣಾ ಚಟುವಟಿಕೆಗಳಿಗೆ ನಾಂದಿ ಮಾಡಲಾಗಿತ್ತು. ಕಳೆದ ಸೋಮವಾರ ಗ್ರಾಮ ಪಂಚಾಯತಿ ಚುನಾವಣೆಗೆ ಅಧಿಸೂಚನೆ ಪ್ರಕಟಿಸಿ ದಿನಾಂಕಗಳನ್ನು ಘೋಷಿಸುವ ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಡಿ. 22ರಂದು ಮೂರು ತಾಲ್ಲೂಕು ಹಾಗೂ ಡಿ. 27ರಂದು ಮೂರು ತಾಲ್ಲೂಕುಗಳಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಶಿಡ್ಲಘಟ್ಟ (24 ಗ್ರಾ.ಪಂ.ಗಳು), ಚಿಂತಾಮಣಿ (35 ಗ್ರಾ.ಪಂ.ಗಳು) ಹಾಗೂ ಬಾಗೇಪಲ್ಲಿ (25 ಗ್ರಾ.ಪಂ.ಗಳು) ತಾಲ್ಲೂಕಿನಲ್ಲಿ ಡಿ. 22 ರಂದು ಒಟ್ಟು 84 ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಯಲಿದೆ.

ಎರಡನೆಯ ಹಂತದಲ್ಲಿ ಚಿಕ್ಕಬಳ್ಳಾಪುರ (23 ಗ್ರಾ.ಪಂ.ಗಳು), ಗೌರಿಬಿದನೂರು (37 ಗ್ರಾ.ಪಂ.ಗಳು) ಹಾಗೂ ಗುಡಿಬಂಡೆ (8 ಗ್ರಾ.ಪಂ.ಗಳು) ತಾಲ್ಲೂಕಿನಲ್ಲಿ ಡಿ. 27ರಂದು ಒಟ್ಟು 68 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಈಗಾಗಲೇ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಸ್ಪರ್ಧೆಗೆ ಇಳಿಯಲು ಆಯಾ ಮೀಸಲಾತಿಯ ಜಾತಿ ಅನುಸಾರದ ಮಂದಿ ಲಾಭಿ ಮಾಡತೊಡಗಿದ್ದಾರೆ. ಉಳಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಹಿಂಬಾಲಿಸಿ ತಮಗೆ ಸೀಟು ಕೊಡಿ ಎಂದು ದುಂಬಾಲ ಹಿಡಿಯುತ್ತಿರುವ ಪ್ರಸಂಗಗಳೂ ನಡೆಯುತ್ತಿವೆ.

ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷದ ಬೆಂಬಿಲತರೇ ಹೆಚ್ಚು ಗ್ರಾಮ ಪಂಚಾಯಿತಿ ಹಿಡಿತವನ್ನು ಸಾಧಿಸುತ್ತಿದ್ದ ಜಿಲ್ಲೆಯಲ್ಲಿ ಈ ಸಲ ಕುತೂಹಲ ಮೂಡಿಸಿದೆ. ಏಕೆಂದರೆ ಆಗಿನ ಕಾಂಗ್ರೆಸ್ ನಲ್ಲಿದ್ದವರು ಈಗ ಬಿಜೆಪಿ ಪಕ್ಷ ಸೇರಿ ಸಚಿವರೂ ಆಗಿ ತಮ್ಮದೇ ಆದ ಪ್ರಭಾವವನ್ನು ಬೀರುತ್ತಿದ್ದಾರೆ. ಜಿಲ್ಲೆಯ ಈಗಿನ ಸಂಸದರೂ ಬಿಜೆಪಿಯರೇ ಆಗಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರೂ, ಸೇರಿದಂತೆ ಬಿಜೆಪಿ ಪಕ್ಷದ ಪ್ರಭಾವಿಗಳು ಜಿಲ್ಲೆಯಲ್ಲಿ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಶೇ.80 ರಷ್ಟು ಗ್ರಾಮ ಪಂಚಾಯತಿಗಳ ಆಡಳಿತ ಚುಕ್ಕಾಣಿ ಹಿಡಿಯಲು ಕರೆಯನ್ನೂ ಕೊಟ್ಟಿದ್ದಾರೆ. ಇನ್ನು ಜೆಡಿಎಸ್ ಪಕ್ಷವು ತನ್ನದೇ ಆದ ಅಸ್ತಿತ್ವವನ್ನು ಹೊಂದಿದೆ. ಚಿಂತಾಮಣಿಯಲ್ಲಿ ಅದೇ ಪಕ್ಷದ ಶಾಸಕರಿದ್ದಾರೆ.‌ ಶಿಡ್ಲಘಟ್ಟ,ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ತಾಲ್ಲೂಕುಗಳಲ್ಲಿ ಜೆಡಿಎಸ್ ಪಕ್ಷದ ಕಾಯಂ ಮತದಾರರೂ ಇದ್ದಾರೆ. ಇನ್ನು ಬಾಗೇಪಲ್ಲಿ, ಗುಡಿಬಂಡೆ ತಾಲ್ಲೂಕುಗಳಲ್ಲಿ ಸಿಪಿಐಎಂ , ಪಿಎಸ್ಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆಯಲು ಕಾತುರದಿಂದಿದ್ದಾರೆ.

ಇಷ್ಟೆಲ್ಲವುಗಳ ನಡುವೆ ಬಹಳಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಅತಿಯಾದ ಭ್ರಷ್ಟಾಚಾರ, ಸ್ವಜನ ಪಕ್ಷಪಾತಗಳು, ಅನುದಾನಗಳ ದುರ್ಬಳಕೆ, ನರೇಗಾ ಕಾಮಗಾರಿಗಳಲ್ಲಿ ಅವ್ಯವಹಾರಗಳಿಂದಾಗಿ ಗ್ರಾಮೀಣ ಭಾಗದ ಜನರು ರೋಸಿ ಹೋಗಿದ್ದಾರೆ. ಕೆಲವು ಪ್ರಾಮಾಣಿಕ ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯೋನ್ಮುಖರಾಗುವವರೆಗೂ ಬಹಳಷ್ಟು ಸರ್ಕಾರಿ ಯೋಜನೆಗಳ ಹೆಸರುಗಳೇ ಕೇಳದಷ್ಟು ದುರಾಡಳಿತಗಳು ನಡೆದಿವೆ. ಹೀಗಾಗಿ ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಗ್ರಾಮ ಪಂಚಾಯತಿ ಆಡಳಿತಗಳು ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ನಡೆಯಬೇಕು ಎಂದು ಪ್ರಜ್ಞಾವಂತರ ಬಯಕೆಯೂ ಮುನ್ನೆಲೆಗೆ ಬರುತ್ತಿದೆ.

ಒಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿ ಚುನಾವಣೆ ಕುತೂಹಲಕಾರಿ ಎನಿಸಿದೆ.

ಜಿಲ್ಲೆಯ 6 ತಾಲ್ಲೂಕಿನಲ್ಲಿ ಒಟ್ಟು 152 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 1,195 ಮೂಲ ಮತಗಟ್ಟೆಗಳು, 137 ಆಕ್ಸಿಲರಿ ಮತಗಟ್ಟೆಗಳನ್ನು ಎಂದು ಗುರುತಿಸಲಾಗಿದ್ದು, ಒಟ್ಟು 1,332 ಮತಗಟ್ಟೆಗಳು
ಸಿದ್ಧವಾಗಿವೆ.

ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ 152 ಗ್ರಾ.ಪಂ.ನಲ್ಲಿ 3,87,796 ಪುರುಷರು, 3,87,266 ಮಹಿಳೆಯರು ಮತ್ತು 52 ಇತರೆ ಸೇರಿದಂತೆ ಒಟ್ಟು 7,75,116 ಮತದಾರರಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಎರಡು ಹಂತದ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಆಯಾ ತಾಲ್ಲೂಕು ಆಡಳಿತವು ಸಕಲ ಸಿದ್ಧತೆ ‌ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

Politics

ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ

Published

on

ಶಿಡ್ಲಘಟ್ಟ : ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.

ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.

ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ . ಡಾ.ಬಿ.ಆರ್ .ಅಂಭೆಡ್ಕರ್ ಅಭಿವೃದ್ದಿ ನಿಗಮದ ಶಿಡ್ಲಘಟ್ಟ ತಾಲೂಕು ಅಭಿವೃದ್ದಿ ಅಧಿಕಾರಿ ಎಂ.ರಾಜಶೇಖರ್ ಸೇರಿದಂತೆ ತಾಲೂಕು ಮಟ್ಟದವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವರದಿ: ಕೆ.ಮಂಜುನಾಥ್.ಶಿಡ್ಲಘಟ್ಟ

Continue Reading

Politics

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ

Published

on

ಮಸ್ಕಿ: ಎರಡು ವರ್ಷಗಳ ಹಿಂದೆ ಫೆ ೧೪ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಂಧನೂರು ನಗರದ ಗಾಂಧಿ ವೃತ್ತದಲ್ಲಿ ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳಗುರ್ಕಿ ಗ್ರಾಮದ ಹಾಲಿ ಸೈನಿಕ ವೆಂಕಟೇಶ್ ,ಮಾಜಿ ಸೈನಿಕರದ ಚನ್ನಾಗೌಡ, ಗುರಪ್ಪ,ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಓಂಕಾರ ಜಿ ಎಂ, ಮಧ್ವರಾಜ್ ಆಚಾರ್ಯ, ವಿನೋದ್ ಭಾಂಡಗೆ, ಅನಿಲರಾಜ್ ವಕೀಲರು, ಪ್ರಲ್ಹಾದ ಕೆಂಗಲ್, ಹನುಮೇಶ ಜಾಗೀರದಾರ ಅವಿನಾಶ್ ದೇಶಪಾಂಡೆ, ಸಾಬಣ್ಣ ಭೂಪನವರ್ , ವಿರೇಶ ಮಾಳಿಗಿ, ಶರಣಪ್ಪ ಮರಳಿ, ಶಿವರಾಜ ಸಸಾಲಮಾರಿ, ದ್ರಾಕ್ಷಿಯಣಿ ಬಸವನ ಗೌಡ, ರೇಷ್ಮಾ, ಚನ್ನ, ಕೃಷ್ಣ, ಚಂದ್ರು, ಮಲ್ಲಿಕಾರ್ಜುನ ಜೇನುರು ಹಲವರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading

Politics

ನೂತನ ಹೆಲಿಪ್ಯಾಡ್ ಮೈದಾನ, ಆರೋಗ್ಯ ಕೇಂದ್ರಕ್ಕೆ ಮಂಜೂರಾದ ವಾಹನದ ಉದ್ಘಾಟನೆ

Published

on

ಹಿರೇಕೆರೂರು : ತಾಲೂಕಿನ ಬಸರಿಹಳ್ಳಿ ಗ್ರಾಮದ ಬಳಿ ಎಮ್.ಐ.ಡಿ.ಪಿ. ಯೋಜನೆಯಡಿ ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಹೆಲಿಪ್ಯಾಡ್ ಮೈದಾನವನ್ನು ಇಂದು ಉದ್ಘಾಟಿಸಲಾಯಿತು. ನಂತರ, ಆರೋಗ್ಯ ಇಲಾಖೆ ವತಿಯಿಂದ ಕೊಡ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನೂತನವಾಗಿ ಮಂಜೂರಾದ ವಾಹನದ ಉದ್ಘಾಟನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಬಿ.ಸಿ ಪಾಟೀಲ್, ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ್, ಅಧಿಕಾರಿಗಳು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್