Connect with us
Ad Widget

Politics

ಭಾರತ್ ಬಂದ್ ಗೆ ಸ್ಪಂದಿಸಿದ ತಾಲ್ಲೂಕಿನ ಜನ; ಬಂದ್ ಯಶಸ್ವಿ

Published

on

ಬಾಗೇಪಲ್ಲಿ: ಭಾರತ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಇಂದು ‘ಭಾರತ್ ಬಂದ್’ ಹಲವೆಡೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಡಪಂಥೀಯ ಚಿಂತಕ ಹಾಗೂ ಪ್ರಜಾ ವೈದ್ಯ ಅನಿಲ್ ಕುಮಾರ್ ಅವುಲಪ್ಪ ಪ್ರತಿಭಟನೆ ಉದ್ದೇಶಿ
ಮಾತನಾಡಿ, ರೈತರಿಗೆ ಮಾರಕವಾಗಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು‌ ಆಗ್ರಹಿಸಿದರು.

ರೈತರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಾರೆ. ಕೇಂದ್ರ ಸರ್ಕಾರದ ನೀತಿಗಳಿಂದ ದೇಶದ ರೈತರು ಸೇರಿದಂತೆ ಎಲ್ಲರೂ ಬೀದಿಗೆ ಬಂದಿದ್ದಾರೆ. ಕೃಷಿ ಕಾಯ್ದೆ ಯಾರಿಗೂ ಉಪಯೋಗವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕೇಂದ್ರ ಸರ್ಕಾರದ ಆಡಳಿತದಿಂದ 30 ವರ್ಷದ ಹಿಂದಿನ ಸ್ಥಿತಿಗೆ ಹೋಗಿದ್ದೇವೆ. ಕೇಂದ್ರ ನರೇಂದ್ರ ಮೋದಿ ಬಿಜೆಪಿ ಆಡಳಿತ ಬ್ರಿಟಿಷ್ ಆಡಳಿತಕ್ಕಿಂತ ಹೀನಾಯವಾಗಿದೆ.
ನರೇಂದ್ರ ಮೋದಿ ಕಾರ್ಪೊರೇಟ್ ಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ರೈತರ ಹೋರಾಟದ ಹಕ್ಕನ್ನು ಕಿತ್ತುಕೊಂಡು ರೈತರ ಬೆನ್ನು ಮೂಳೆ ಮುರಿತಿದ್ದಾರೆ ಇನ್ನೂ ಮುಂದಿನ ದಿನಗಳಲ್ಲಿ ಬಡವರಿಗೆ ನೀಡುವ ಆಹಾರವನ್ನು ಕಿತ್ತುಕೊಳ್ಳು ದಿನಗಳ ಹತ್ತಿರದಲ್ಲಿ ಇವೆ ಆದ್ದರಿಂದ ನಾವು ಹೋರಾಟ ಅನಿವಾರ್ಯವಾಗಿದೆ.

ರಾಷ್ಟ್ರ ಮಟ್ಟದಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟದಲ್ಲಿ ಭಾಗವಹಿಸಿದ ರೈತರನ್ನು ಕೇಂದ್ರ ಸರ್ಕಾರ ಸರಿಯಾಗಿ ನೋಡಿ ಹೇಳಿದರು. ರೈತರ ಸಂಘಟನೆಗಳ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಕೇಂದ್ರ ಸರ್ಕಾರ ಮಾಡುತ್ತದೆ ಎಂದು ಹೇಳಿದರು. ಕರ್ನಾಟಕದ ಪ್ರಾಂತ್ಯ ರೈತ ಸಂಘದ ಜಿಲ್ಲಾದ್ಯಕ್ಷ ಮಂಜುನಾಥ ರೆಡ್ಡಿ ಮಾತನಾಡಿ ಕೇಂದ್ರ ಸರ್ಕಾರದ ಕೃಷಿ ಮಸೂದೆ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿದ ಬಂದ್ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ರೈತರ, ಕೂಲಿ ಕಾರ್ಮಿಕರ, ಬಡವರ, ದಲಿತರ, ಮಹಿಳೆಯರ, ದುಡಿಯುವ ವರ್ಗ ನಿರ್ನಾಮ ಮಾಡುವ ಕೇಂದ್ರ ಸರ್ಕಾರದ ನರೇಂದ್ರ ಮೋದಿ ಕಾನೂನುಗಳನ್ನು ಜಾರಿಗೆ ತಂದು ರೈತರ ಬೆನ್ನು ಮೂಳೆ ಮುರಿತಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಯುವ ಮುಖಂಡ ನೂರುಲ್ಲಾ ಮಾತನಾಡಿ, ರೈತರ ಚಳವಳಿಯನ್ನು ಹತ್ತಿಕ್ಕಲು ಅನ್ನದಾತರ ಮೇಲೆ ಲಾಠಿ ಪ್ರಯೋಗ, ಜಲಫಿರಂಗಿ, ಅಶ್ರುವಾಯು ಪ್ರಯೋಗ ಮಾಡುತ್ತಿದೆ. ರೈತರ ಸಮಸ್ಯೆಯನ್ನು ಸ್ಪಂದಿಸುವುದನ್ನು ಬಿಟ್ಟು ಹಠಮಾರಿ ಧೋರಣೆಯನ್ನು ತೋರುತ್ತದೆ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಹಸಿರು ಸೇನೆ ರಾಜ್ಯ ಮಹಿಳಾ ಘಟಕ ಅದ್ಯಕ್ಷೆ ಸಿ.ಉಮಾ ಮಾತನಾಡಿ ರೈತರ ಉಳಿವಿಗಾಗಿ ಹೋರಾಟ ನಡೆಸಿತ್ತಿದ್ದೇವೆ ಕೇಂದ್ರ ಸರ್ಕಾರ ಹಠಕ್ಕೆ ಬಿದ್ದು ರೈತ ವಿರೋಧಿ ಕಾನೂನನ್ನು ಜಾರಿಗೆ ತಂದು ರೈತರನ್ನು ದಿವಾಳಿ ಎಬ್ಬಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಮುನಿವೆಂಕಟಪ್ಪ, ಚನ್ನರಾಯಪ್ಪ, ಲಕ್ಷ್ಮಣ್ ರೆಡ್ಡಿ ಸಿ.ಉಮಾ, ಆಂಜನೇಯ ರೆಡ್ಡಿ, ಮುಸ್ತಫಾ, ದೇವಿಕುಂಟೆ ಶ್ರೀನಿವಾಸ್, ಮಹಮ್ಮದ್ ನೂರುಲ್ಲಾ, ವಾಲ್ಮೀಕಿ ಅಶ್ವತ್ಥಪ್ಪ, ಬಿ.ವಿ ವೆಂಕಟರಮಣ, ಲಕ್ಷ್ಮೀನರಸಿಂಹಪ್ಪ, ಜಯಂತ್ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

Politics

ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ

Published

on

ಶಿಡ್ಲಘಟ್ಟ : ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.

ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.

ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ . ಡಾ.ಬಿ.ಆರ್ .ಅಂಭೆಡ್ಕರ್ ಅಭಿವೃದ್ದಿ ನಿಗಮದ ಶಿಡ್ಲಘಟ್ಟ ತಾಲೂಕು ಅಭಿವೃದ್ದಿ ಅಧಿಕಾರಿ ಎಂ.ರಾಜಶೇಖರ್ ಸೇರಿದಂತೆ ತಾಲೂಕು ಮಟ್ಟದವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ವರದಿ: ಕೆ.ಮಂಜುನಾಥ್.ಶಿಡ್ಲಘಟ್ಟ

Continue Reading

Politics

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ

Published

on

ಮಸ್ಕಿ: ಎರಡು ವರ್ಷಗಳ ಹಿಂದೆ ಫೆ ೧೪ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಂಧನೂರು ನಗರದ ಗಾಂಧಿ ವೃತ್ತದಲ್ಲಿ ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳಗುರ್ಕಿ ಗ್ರಾಮದ ಹಾಲಿ ಸೈನಿಕ ವೆಂಕಟೇಶ್ ,ಮಾಜಿ ಸೈನಿಕರದ ಚನ್ನಾಗೌಡ, ಗುರಪ್ಪ,ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಓಂಕಾರ ಜಿ ಎಂ, ಮಧ್ವರಾಜ್ ಆಚಾರ್ಯ, ವಿನೋದ್ ಭಾಂಡಗೆ, ಅನಿಲರಾಜ್ ವಕೀಲರು, ಪ್ರಲ್ಹಾದ ಕೆಂಗಲ್, ಹನುಮೇಶ ಜಾಗೀರದಾರ ಅವಿನಾಶ್ ದೇಶಪಾಂಡೆ, ಸಾಬಣ್ಣ ಭೂಪನವರ್ , ವಿರೇಶ ಮಾಳಿಗಿ, ಶರಣಪ್ಪ ಮರಳಿ, ಶಿವರಾಜ ಸಸಾಲಮಾರಿ, ದ್ರಾಕ್ಷಿಯಣಿ ಬಸವನ ಗೌಡ, ರೇಷ್ಮಾ, ಚನ್ನ, ಕೃಷ್ಣ, ಚಂದ್ರು, ಮಲ್ಲಿಕಾರ್ಜುನ ಜೇನುರು ಹಲವರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading

Politics

ನೂತನ ಹೆಲಿಪ್ಯಾಡ್ ಮೈದಾನ, ಆರೋಗ್ಯ ಕೇಂದ್ರಕ್ಕೆ ಮಂಜೂರಾದ ವಾಹನದ ಉದ್ಘಾಟನೆ

Published

on

ಹಿರೇಕೆರೂರು : ತಾಲೂಕಿನ ಬಸರಿಹಳ್ಳಿ ಗ್ರಾಮದ ಬಳಿ ಎಮ್.ಐ.ಡಿ.ಪಿ. ಯೋಜನೆಯಡಿ ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಹೆಲಿಪ್ಯಾಡ್ ಮೈದಾನವನ್ನು ಇಂದು ಉದ್ಘಾಟಿಸಲಾಯಿತು. ನಂತರ, ಆರೋಗ್ಯ ಇಲಾಖೆ ವತಿಯಿಂದ ಕೊಡ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನೂತನವಾಗಿ ಮಂಜೂರಾದ ವಾಹನದ ಉದ್ಘಾಟನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಬಿ.ಸಿ ಪಾಟೀಲ್, ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ್, ಅಧಿಕಾರಿಗಳು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್