Politics
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಫಿಕ್ಸ್
ಬೆಂಗಳೂರು : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೆಸಲು ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ 9 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಿದೆ, ತಾಲೂಕು ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಚುನಾವಣೆ, ಜಿಲ್ಲಾಧಿಕಾರಿಗಳ ಚುನಾವಣೆ, ರಾಜ್ಯ ಪದಾಧಿಕಾರಿಗಳ ಚುನಾವಣೆಯ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ತಾಲೂಕು ಕಾರ್ಯಕಾರಿ ಸಮಿತಿ ಪ್ರಕ್ರಿಯೆಗಳು. ಡಿ.9 ರಿಂದ 15 ರವರೆಗೆ ಮತ್ತು ತಾಲೂಕು, ಜಿಲ್ಲಾ, ರಾಜ್ಯ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಗಳು ಡಿ.19 ರಿಂದ 29ರವರೆಗೆ ನಡೆಯಲಿವೆ.
Politics
ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ
ಶಿಡ್ಲಘಟ್ಟ : ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.
ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.
ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ . ಡಾ.ಬಿ.ಆರ್ .ಅಂಭೆಡ್ಕರ್ ಅಭಿವೃದ್ದಿ ನಿಗಮದ ಶಿಡ್ಲಘಟ್ಟ ತಾಲೂಕು ಅಭಿವೃದ್ದಿ ಅಧಿಕಾರಿ ಎಂ.ರಾಜಶೇಖರ್ ಸೇರಿದಂತೆ ತಾಲೂಕು ಮಟ್ಟದವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವರದಿ: ಕೆ.ಮಂಜುನಾಥ್.ಶಿಡ್ಲಘಟ್ಟ
Politics
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ
ಮಸ್ಕಿ: ಎರಡು ವರ್ಷಗಳ ಹಿಂದೆ ಫೆ ೧೪ರಂದು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿಂಧನೂರು ನಗರದ ಗಾಂಧಿ ವೃತ್ತದಲ್ಲಿ ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬೆಳಗುರ್ಕಿ ಗ್ರಾಮದ ಹಾಲಿ ಸೈನಿಕ ವೆಂಕಟೇಶ್ ,ಮಾಜಿ ಸೈನಿಕರದ ಚನ್ನಾಗೌಡ, ಗುರಪ್ಪ,ರೈತ ಮತ್ತು ಸೈನಿಕರ ಅಭಿಮಾನಿಗಳ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಓಂಕಾರ ಜಿ ಎಂ, ಮಧ್ವರಾಜ್ ಆಚಾರ್ಯ, ವಿನೋದ್ ಭಾಂಡಗೆ, ಅನಿಲರಾಜ್ ವಕೀಲರು, ಪ್ರಲ್ಹಾದ ಕೆಂಗಲ್, ಹನುಮೇಶ ಜಾಗೀರದಾರ ಅವಿನಾಶ್ ದೇಶಪಾಂಡೆ, ಸಾಬಣ್ಣ ಭೂಪನವರ್ , ವಿರೇಶ ಮಾಳಿಗಿ, ಶರಣಪ್ಪ ಮರಳಿ, ಶಿವರಾಜ ಸಸಾಲಮಾರಿ, ದ್ರಾಕ್ಷಿಯಣಿ ಬಸವನ ಗೌಡ, ರೇಷ್ಮಾ, ಚನ್ನ, ಕೃಷ್ಣ, ಚಂದ್ರು, ಮಲ್ಲಿಕಾರ್ಜುನ ಜೇನುರು ಹಲವರಿದ್ದರು.
ವರದಿ : ದುರ್ಗೇಶ್ ಬೋವಿ ಮಸ್ಕಿ
Politics
ನೂತನ ಹೆಲಿಪ್ಯಾಡ್ ಮೈದಾನ, ಆರೋಗ್ಯ ಕೇಂದ್ರಕ್ಕೆ ಮಂಜೂರಾದ ವಾಹನದ ಉದ್ಘಾಟನೆ
ಹಿರೇಕೆರೂರು : ತಾಲೂಕಿನ ಬಸರಿಹಳ್ಳಿ ಗ್ರಾಮದ ಬಳಿ ಎಮ್.ಐ.ಡಿ.ಪಿ. ಯೋಜನೆಯಡಿ ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಹೆಲಿಪ್ಯಾಡ್ ಮೈದಾನವನ್ನು ಇಂದು ಉದ್ಘಾಟಿಸಲಾಯಿತು. ನಂತರ, ಆರೋಗ್ಯ ಇಲಾಖೆ ವತಿಯಿಂದ ಕೊಡ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನೂತನವಾಗಿ ಮಂಜೂರಾದ ವಾಹನದ ಉದ್ಘಾಟನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಬಿ.ಸಿ ಪಾಟೀಲ್, ಸಹಕಾರ ಸಚಿವರಾದ ಶ್ರೀ ಎಸ್.ಟಿ. ಸೋಮಶೇಖರ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ್, ಅಧಿಕಾರಿಗಳು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.