ಸುದ್ದಿ
ಶಿಕ್ಷಕರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ ಪಿ.ವೆಂಕಟರವಣ
ಬಾಗೇಪಲ್ಲಿ: ಗ್ರಾಮಪಂಚಾಯಿತಿ ಚುನಾವಣೆಗೂ ಮುನ್ನಾ ತಾಲ್ಲೂಕಿನಲ್ಲಿ ಡಿಸೆಂಬರ್ 15ರಂದು ಬಿ.ಆರ್.ಸಿ ಕೇಂದ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೆಯಲಿದೆ.
ಅಧಿಕಾರಕ್ಕಾಗಿ ಶಿಕ್ಷಕರ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಪ್ರಚಾರದ ಮೂಲಕ ಗಮನ ಸೆಳೆಯುತ್ತಿವೆ.
ತಾಲ್ಲೂಕು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವೆಂಕಟರವಣ ಮಾತನಾಡಿ
ಪ್ರಾಥಮಿಕ ಶಾಲಾ ಶಿಕ್ಷಕರ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ನೀಡುವ ಮೂಲಕ ಶಿಕ್ಷಕರ ಸೇವೆಯನ್ನು ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.
ಅವರು ಇಂದು ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಮತಯಾಚನೆ ಮಾಡಿ ಮಾತನಾಡಿ, ಈಗಾಗಲೇ ಕಳೆದ ಐದು ವರ್ಷಗಳಲ್ಲಿ ಶಿಕ್ಷಕರ ಅನೇಕ ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸುವಲ್ಲಿ ಶಿಕ್ಷಕರ ಸಂಘದ ಸೇವೆ ಅಪಾರವಾಗಿದೆ. ಕಾಲಕಾಲಕ್ಕೆ ಶಿಕ್ಷಕರಿಗೆ ಸಿಗಬೇಕಾದ ಸಂಬಳ,ಹಾಗೂ ಪ್ರತಿ ತಿಂಗಳು 31ರ ಒಳಗೆ ಸಂಬಳ ಹಾಗೂ ಶಿಕ್ಷಕರು ನಿವೃತ್ತಿ ಹೊಂದಿದ ಸ್ಥಳದಲ್ಲಿ ಸನ್ಮಾನ ಹಾಗೂ ಎಲ್ಲ ಸೌಲಭ್ಯಗಳನ್ನು ಈಡೇರಿಸುವಲ್ಲಿ ಸಂಘವು ಬಹುಮುಖ್ಯ ಪಾತ್ರ ವಹಿಸುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ ಬಾಗೇಪಲ್ಲಿ ಕ್ಷೇತ್ರದಲ್ಲಿ ಭವ್ಯ ಶಿಕ್ಷಕರ ಭವನ ನಿರ್ಮಾಣ ಕಾರ್ಯವನ್ನು ಮಾಡಲಿದೆ ಎಂದು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಿ.ವೆಂಕಟರಾಯಪ್ಪ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಲಿಷ್ಠವಾಗಿದ್ದು ಶಿಕ್ಷಕರ ಹೋರಾಟದಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಈ ಮತಯಾಚನೆ ಕಾರ್ಯಕ್ರಮದಲ್ಲಿ ಕದಿರಪ್ಪ, ಆಂಜನೇಯಲು ಫಯಾಜ್ ಅಹಮದ್, ಮಂಜುನಾಥ ವೈ.ಎಂ.,ಹೆಚ್.ಎಸ್.ವರುಣ್,.ಎ.ವೆಂಕಟೇಶ್ವರ್,ಎ.ಪದ್ಮಾವತಿ, ಪ್ರಭಾವತಿ ಆರ್.ಹನುಮಂತ ರೆಡ್ಡಿ ,ವಿ.ಸುಮಾ ಮತ್ತಿತರರು ಹಾಜರಿದ್ದರು.
ಸುದ್ದಿ
ತಾಲ್ಲೂಕಿನಲ್ಲಿ ‘ಕೈ’ ಬಲಪಡಿಸುತ್ತಿರುವುದು ಹರ್ಷದಾಯಕ : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ
ಬಾಗೇಪಲ್ಲಿ: ಕಾಂಗ್ರೆಸ್ ಪಕ್ಷದ ಸಿದ್ದಾಂತಗಳು ದೇಶದ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದೆ ಸಾಮಾಜಿಕ ನ್ಯಾಯ ಒದಗಿಸುವ ಬದ್ಧತೆಯನ್ನು ನೆಚ್ಚಿ ವಿವಿಧ ಪಕ್ಷಗಳಿಂದ ತೊರೆದು ನೂರಾರು ಅಲ್ಪಸಂಖ್ಯಾತರು ಹಾಗೂ ಯುವ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಅವರು ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಅವರ ಸ್ವ ಗೃಹದಲ್ಲಿ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪಿ.ಶಬೀರ್ ಭಾಷಾ,ಉಪಾಧ್ಯಕ್ಷರಾಗಿ ಷೇಕ್ ಮುಬಾರಕ್,ಪ್ರಧಾನ ಕಾರ್ಯದರ್ಶಿಯಾಗಿ ಖಯಾಮ್ ಪೀರ್ ರವರಿಗೆ
ನೇಮಕಾತಿ ಪತ್ರವನ್ನು ಹಸ್ತಂತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿ
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟುವ ಪಕ್ಷ ಎಂದರು. ಜಾತ್ಯತೀತ ನಿಲುವು ಹೊಂದಿರುವ ಹಾಗೂ ದೇಶದ ಜನಪರವಾದ ಪಕ್ಷ ಎಂದು ಹೇಳಿದರು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ
ಪಕ್ಷ ಮತ್ತು ಸಮ ಸಮಾಜಕ್ಕಾಗಿ ಇನ್ನಷ್ಟು ತೊಡಗಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಮಾತನಾಡಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಸಲಿದ್ದೇನೆ ನನಗೆ ಪಟ್ಟಣದ ಸಮಸ್ಯೆಗಳ ಬಗ್ಗೆ ಅರಿವು ಇದೆ. ಪಟ್ಟಣದ 23 ವಾರ್ಡ್ ಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಯನ್ನು ಮನೆಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವುಗಾಗಿ ಶ್ರಮಿಸುತ್ತನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯರಾದ ಅಮರನಾಥ್ ರೆಡ್ಡಿ, 7 ನೇ ವಾರ್ಡ್ ಪುರಸಭೆ ಸದಸ್ಯರಾದ ನಂಜುಂಡಪ್ಪ, ಡಿ.ಸಿ
ಸಿ.ಅಲ್ಪಸಂಖ್ಯಾತ ಜಿಲ್ಲಾ ಕಾರ್ಯದರ್ಶಿ ಜೆ.ಎಂ.ಅನ್ಸರ್ ಪಾಷಾ,ಹಾಗೂ ನೂರಾರು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸುದ್ದಿ
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ
ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ