ಸುದ್ದಿ
ಅಭ್ಯರ್ಥಿಗಳು ಮನೆಮನೆಗೆ ತೆರಳಿ ಭರ್ಜರಿ ಮತಯಾಚನೆ
ಬಾಗೇಪಲ್ಲಿ:ಅಧಿಕಾರ ವಿಕೇಂದ್ರೀಕರಣದ ಮೊದಲನೇ ಮೆಟ್ಟಿಲು ಎಂದೇ ಪರಿಗಣಿಸಲಾಗಿರುವ ಗ್ರಾಮಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಗೂಳೂರು ಹೋಬಳಿ ವ್ಯಾಪ್ತಿಯಲ್ಲಿ ಈ ಬಾರಿ ಎಲ್ಲೆಡೆ ವಿದ್ಯಾವಂತ ಯುವಕರೇ ಉತ್ಸುಕರಾಗಿದ್ದು, ಗಡಿಭಾಗದಲ್ಲಿ ಚುನಾವಣೆ ಪ್ರಕ್ರಿಯೆ ಗರಿಗೆದರಿದೆ.
ಮುಂಬರುವ ತಾಲ್ಲೂಕು ಪಂಚಾಯತಿ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ರಾಜಕೀಯ ಪಕ್ಷಗಳಿಗೆ ದಿಕ್ಸೂಚಿಯಾಗಲಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ತಂತ್ರ ಪ್ರತಿತಂತ್ರವನ್ನು ಎಣಿದಿದ್ದಾರೆ.
ಮೊದಲನೇ ಹಂತದ ಚುನಾವಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಅಭ್ಯರ್ಥಿಗಳು ಮನೆಮನೆಗೆ ತೆರಳಿ ಮತಯಾಚನೆ ಕಾರ್ಯಕ್ರಮದಲ್ಲಿ ಮಗ್ನರಾಗಿದ್ದಾರೆ.
ಗೂಳೂರು ಎರಡನೇ ಬ್ಲಾಕ್ ಅಭ್ಯರ್ಥಿಗಳಾದ ಆದಿನಾರಾಯಣಪ್ಪ,ಕೃಷ್ಣಮ್ಮ,ನಂಜುಂಡಪ್ಪ (ಚಿನ್ನಪ್ಪಯ್ಯ),ಮಹಿತ ಬಿ .ಸಾಯಿನಾಥ್ ರೆಡ್ಡಿ ಇಂದು ಗೂಳೂರು ಮುಖ್ಯ ರಸ್ತೆಯಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಹಿತ ಬಿ.ಸಾಯಿನಾಥ್ ರೆಡ್ಡಿ ನಮ್ಮ ಗ್ರಾಮವನ್ನು ಸ್ವಚ್ಛ ಮತ್ತು ಸುವರ್ಣ ಗ್ರಾಮವನ್ನಾಗಿ ಮಾಡುವ ಕನಸುನೊಂದಿಗೆ ನಾವು ಅಭ್ಯರ್ಥಿಗಳಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೆವೇ ಎಂದು ಹೇಳಿದರು
ಈ ಸಂದರ್ಭದಲ್ಲಿ ಕೆ.ವಿ.ಪ್ರಶಾಂತ್ ಕುಮಾರ್,ಸಾಯಿನಾಥ್ ರೆಡ್ಡಿ ಆದಿನಾರಾಯಣ,ಕೃಷ್ಣಮ್ಮ,ನಂಜುಂಡಪ್ಪ (ಚಿನ್ನಪ್ಪಯ್ಯ) ಮಹಿತ ಸಾಯಿನಾಥ್ ರೆಡ್ಡಿ, ವಿನೋದ್, ನಾಗರಾಜ್, ಶ್ರೀನಾಥ್ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.
ಸುದ್ದಿ
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ
ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ
ಸುದ್ದಿ
ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳ ವೀಕ್ಷಣೆ ನಡೆಸಿದ ಮುಖ್ಯಮಂತ್ರಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಶಿವಮೊಗ್ಗದ ಹೊರವಲಯದ ಸೋಗಾನೆಯಲ್ಲಿ, ಸುಮಾರು 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳ ವೀಕ್ಷಣೆ ನಡೆಸಿದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ರುದ್ರೇಗೌಡ ಮತ್ತಿತರರು ಉಪಸ್ಥಿತರಿದ್ದರು.