ಸುದ್ದಿ
ಕವಿತಾಳ-5ಎ ನಾಲಾ ಯೋಜನೆ ಜಾರಿ ಆಗ್ರಹಿಸಿ ನಡೆಸಿದ ಧರಣಿ 26ನೇ ದಿನಕ್ಕೆ ಹೋರಾಟದ ಸ್ವರೂಪ ಬದಲಾಯಿಸಬೇಕಾಗುತ್ತದೆ-ಬಾಲಸ್ವಾಮಿ ಕೊಡ್ಲಿ
ಕವಿತಾಳ : ರೈತರ ಬೇಡಿಕೆಗೆ ಸ್ಪಂದಿಸಬೇಕಾದ ಸರಕಾರ ಮೌನವಹಿಸುವುದನ್ನು ಬಿಟ್ಟು ಎಚ್ಚೆತ್ತುಕೊಳ್ಳಬೇಕು, ರೈತರು ಬದುಕಲು ನೀರು ಕೇಳುವುದು ತಪ್ಪೆ, ಕಳೆದ 25 ದಿನಗಳಿಂದ ಧರಣಿ ನಡೆದಿದ್ದರು ಸರಕಾರ ಕಣ್ಮುಚ್ಚಿದೆ, ಯೋಜನೆ ನಮ್ಮ ಹಕ್ಕು, ರೈತರು ಯೋಜನೆಯನ್ನು ಪಡೆಯಲು ಶಾಂತಿಯಿಂದ ನಡೆದ ಹೋರಾಟದ ಸ್ವರೂಪ ಬದಲಾಯಿಸಬೇಕೆಂದು ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಾಲಸ್ವಾಮಿ ಕೊಡ್ಲಿ ಹೇಳಿದರು.
ಅವರು ಇಂದು ಪಟ್ಟಣ ಸಮೀಪದ ಪಾಮನಕಲ್ಲೂರು ಗ್ರಾಮದ ಆದಿಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಎನ್‍ಆರ್‍ಬಿಸಿ 5ಎ ನಾಲಾ ಯೋಜನೆ ಜಾರಿಗೆ ಒತ್ತಾಯಿಸಿ ನಡೆಯುತ್ತಿರುವ 26ನೇ ದಿನದ ಧರಣಿ ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.
ಕಳೆದ 12 ವರ್ಷಗಳ ಸತತ ಹೋರಾಟದಿಂದ ನೀರಿಗಾಗಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತ ನಿರಂತರ ಹೋರಾಟ ನಡೆಸುತ್ತಲೆ ಬಂದಿದ್ದಾರೆ, ಆದರೆ ಸರಕಾರ ಈ ರೈತರ ಹೋರಾಟಕ್ಕೆ ಬೆಲೆ ನೀಡದೆ ಅಮಾನುಷವಾಗಿ ವರ್ತಿಸುತ್ತಿದೆ. ನೀರಾವರಿ ಹಿತ ದೃಷ್ಠಿಯಿಂದ ರೈತರು ಮಾಡುತ್ತಿರುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ರೈತರು ಹುಡುಗಾಟದ ವಸ್ತುವಲ್ಲ. ಸರಕಾರ ಇವರ ಜೊತೆ ಹುಡುಗಾಟವಾಡುವುದನ್ನು ನಿಲ್ಲಿಸಬೇಕು.
ದೇಶದ ಬೆನ್ನೆಲುಬೆಂದು ಕರೆಯಿಸಿಕೊಂಡ ರೈತ ಇಂದು ನೀರು ಪಡೆಯಲು ಬೀದಿಗಿಳಿದು ಇಂತಹ ಕಷ್ಟಕರವಾದ ಹೋರಾಟ ಮಾಡುತ್ತಿರುವುದು ನೋಡಿದರೆ ಸರಕಾರ ರೈತರ ಪರವಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ. ಬೆನ್ನೆಲುಬಾದ ರೈತನ ಗೋಣು ಮುರಿಯದೆ ನೀರು ಕೊಡುವತ್ತ ಗಮನ ಹರಿಸಬೇಕು. ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಯೋಜನೆ ಅವಶ್ಯಕವಾಗಿದೆ. ಈ ಯೋಜನೆಯಿಂದ ಸುಮಾರು 38 ಹಳ್ಳಿಗಳು ನೀರಾವರಿ ಸೌಲಭ್ಯ ಪಡೆಯುತ್ತವೆ.
ಇದರಿಂದ ರೈತರು ನೆಮ್ಮದಿಯಾಗಿ ಜೀವನ ಮಾಡಬಹುದು, ರೈತರ ಬದುಕು ಹಸನಾದಾಗ ಮಾತ್ರ ನಾವು ಉಸಿರಾಡಲು ಸಾಧ್ಯ, ಅನ್ನ ನೀಡುವ ರೈತನಿಗೆ ನೀರು ಕೊಡುವುದು ಸರಕಾರದ ಕರ್ತವ್ಯ, ಇಲ್ಲಿನ ರಾಜಕೀಯ ಎಲ್ಲಾ ಪಕ್ಷದ ಶಾಸಕರು, ಸಂಸದರು, ನಾಯಕರಿಗೆ ನನ್ನದೊಂದು ಪ್ರಶ್ನೆ. ಯೋಜನೆ ಆದೇಶವಿದ್ದರೂ ಜಾರಿಯಾಗಲಿಲ್ಲವೆಂದರೆ ದಕ್ಷಿಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬೆಂಕಿ ಹತ್ತಿ ಉರಿಯುತ್ತಿತ್ತು ಹಾಗೂ ವಿಧಾನ ಸೌಧ, ವಿಧಾನ ಪರಿಷತ್‍ನಲ್ಲಿ ಗಲಾಟೆಗಲಾಗುತ್ತಿದ್ದವು. ಅಲ್ಲಿನ ರಾಜಕಾರಣಿಗಳು ಪಕ್ಷಬೇಧ ಮರೆತು ಒಂದಾಗಿ ಹೋರಾಡಿ ಯೋಜನೆಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. ಆದರೆ ಈ ಭಾಗದ ರಾಜಕಾರಣಿಗಳಿಗೆ ನಾಚಿಕೆಯಾಗಬೇಕು. ನಿಮ್ಮಲ್ಲಿ ತಾಕತ್ತಿಲ್ಲವಾ, ನೀವು ರೈತರಿಂದ ಆಯ್ಕೆಯಾಗಿಲ್ಲವಾ, ಕೇವಲ ಓಟಿಗಾಗಿ ರೈತರನ್ನು ಬಳಸಿಕೊಳ್ಳುವ ನೀವು ಅವರ ಬೇಡಿಕೆಗಳಿಗೆ ಸ್ಪಂಧಿಸದಿರುವುದು ಯಾವ ನ್ಯಾಯ, ಪಕ್ಷಬೇಧ ಮರೆತು ಹೋರಾಟಕ್ಕೆ ದುಮುಕಿ ಸರಕಾರದ ಗಮನ ಸೆಳೆಯಬೇಕು. ಕೇವಲ ತೋರ್ಪಡಿಕೆಗಾಗಿ ರೈತರ ಪರವಾಗಿ ಇದ್ದೇವೆಂದು ಉದ್ದುದ್ದ ಭಾಷಣ ಬಿಗಿಯುವುದನ್ನು ನಿಲ್ಲಿಸಿ, ಸುಳ್ಳು ಭರವಸೆ ನೀಡದೆ ಹೋರಾಟವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು, ರೈತರ ತಾಳ್ಮೆಗೆ ಒಂದು ಮಿತಿಯಿದೆ.
ಇದನ್ನು ಪರೀಕ್ಷಿಸಬೇಡಿ, ಮುಂದಿನ ದಿನಗಳಲ್ಲಿ ನಡೆಯುವ ಅವಘಡಗಳಿಗೆ ಆಸ್ಪದ ನೀಡದೆ ಶೀಘ್ರವೇ ಯೋಜನೆ ಜಾರಿಗೊಳಿಸಿ ಎಂದು ಹೇಳುತ್ತ ಹೋರಾಟವನ್ನು ಕಡೆಗಣಿಸಿದರೆ ಮುಂಬರುವ ದಿನಗಳಲ್ಲಿ ನಾವೇಲ್ಲರು ರೈತರಿಗೆ ಹೆಗಲು ನೀಡುವ ಮೂಲಕ ಜಿಲ್ಲಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜನಶಕ್ತಿ ಕೇಂದ್ರದ ರಾಜ್ಯಾಧ್ಯಕ್ಷ ಪ್ರಭುರಾಜ ಕೊಡ್ಲಿ, ಮಾದಿಗ ಮಹಾಸಭಾದ ರಾಜ್ಯ ಕಾರ್ಯದರ್ಶೀ ದೊಡ್ಡಪ್ಪ ಮುರಾರಿ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ವೈ, ಸಿಂಧನೂರು ತಾಲೂಕ ಗೌರವಾಧ್ಯಕ್ಷ ಅಲ್ಲಮಪ್ರಭು ಪೂಜಾರಿ, ಸಿಂಧನೂರು ತಾಲೂಕಾಧ್ಯಕ್ಷ ಅಮರೇಶ ಗಿರಿಜಾಲಿ, ಮಸ್ಕಿ ತಾಲೂಕಧ್ಯಕ್ಷ ಅಶೋಕ ಮುರಾರಿ, ಜನಪರ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಮಕ್ಬುಲ್ ಗುರು, ಮಾನ್ವಿ ತಾಲೂಕ ಜನಶಕ್ತಿ ಕೇಂದ್ರದ ಉಪಾಧ್ಯಕ್ಷ ಮೈನುದ್ದೀನ್, ಮಂಜುನಾಥಸ್ವಾಮಿ ತೋರಣದಿನ್ನಿ, ಶಿವಶಂಕರಗೌಡ ಮಲ್ಕಾಪುರ, ಬಸವರಾಜಪ್ಪಗೌಡ ಹರ್ವಾಪೂರು, ತಿಮ್ಮನಗೌಡ, ಎನ್.ಶಿವನಗೌಡ, ಮಂಜೂರುಪಾಷ, ಅಂಬಮ್ಮ ಸೇರಿದಂತೆ ಇನ್ನಿತರರಿದ್ದರು.
ಸುದ್ದಿ
ತಾಲ್ಲೂಕಿನಲ್ಲಿ ‘ಕೈ’ ಬಲಪಡಿಸುತ್ತಿರುವುದು ಹರ್ಷದಾಯಕ : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ
ಬಾಗೇಪಲ್ಲಿ: ಕಾಂಗ್ರೆಸ್ ಪಕ್ಷದ ಸಿದ್ದಾಂತಗಳು ದೇಶದ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದೆ ಸಾಮಾಜಿಕ ನ್ಯಾಯ ಒದಗಿಸುವ ಬದ್ಧತೆಯನ್ನು ನೆಚ್ಚಿ ವಿವಿಧ ಪಕ್ಷಗಳಿಂದ ತೊರೆದು ನೂರಾರು ಅಲ್ಪಸಂಖ್ಯಾತರು ಹಾಗೂ ಯುವ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಅವರು ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಅವರ ಸ್ವ ಗೃಹದಲ್ಲಿ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪಿ.ಶಬೀರ್ ಭಾಷಾ,ಉಪಾಧ್ಯಕ್ಷರಾಗಿ ಷೇಕ್ ಮುಬಾರಕ್,ಪ್ರಧಾನ ಕಾರ್ಯದರ್ಶಿಯಾಗಿ ಖಯಾಮ್ ಪೀರ್ ರವರಿಗೆ
ನೇಮಕಾತಿ ಪತ್ರವನ್ನು ಹಸ್ತಂತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿ
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟುವ ಪಕ್ಷ ಎಂದರು. ಜಾತ್ಯತೀತ ನಿಲುವು ಹೊಂದಿರುವ ಹಾಗೂ ದೇಶದ ಜನಪರವಾದ ಪಕ್ಷ ಎಂದು ಹೇಳಿದರು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ
ಪಕ್ಷ ಮತ್ತು ಸಮ ಸಮಾಜಕ್ಕಾಗಿ ಇನ್ನಷ್ಟು ತೊಡಗಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಮಾತನಾಡಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಸಲಿದ್ದೇನೆ ನನಗೆ ಪಟ್ಟಣದ ಸಮಸ್ಯೆಗಳ ಬಗ್ಗೆ ಅರಿವು ಇದೆ. ಪಟ್ಟಣದ 23 ವಾರ್ಡ್ ಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಯನ್ನು ಮನೆಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವುಗಾಗಿ ಶ್ರಮಿಸುತ್ತನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯರಾದ ಅಮರನಾಥ್ ರೆಡ್ಡಿ, 7 ನೇ ವಾರ್ಡ್ ಪುರಸಭೆ ಸದಸ್ಯರಾದ ನಂಜುಂಡಪ್ಪ, ಡಿ.ಸಿ
ಸಿ.ಅಲ್ಪಸಂಖ್ಯಾತ ಜಿಲ್ಲಾ ಕಾರ್ಯದರ್ಶಿ ಜೆ.ಎಂ.ಅನ್ಸರ್ ಪಾಷಾ,ಹಾಗೂ ನೂರಾರು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸುದ್ದಿ
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ
ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ