Connect with us
Ad Widget

ಸುದ್ದಿ

ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ತಕ್ಷಣವೇ ಅನುದಾನವನ್ನು ಬಿಡುಗಡೆ ಮಾಡಿ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಅಧ್ಯಕ್ಷರು ಮನವಿ

Published

on

ಲಿಂಗಸಗೂರು : ವಿಶ್ವದಲ್ಲಿ ಭಾಷೆಗಾಗಿ ಇರುವ ಏಕೈಕ ವಿಶ್ವವಿದ್ಯಾಲಯ ಎಂದು ಹೆಮ್ಮೆಯೊಂದಿಗೆ ಸ್ಥಾಪನೆಯಾಗಿರುವ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಅನುದಾನದ ಕೊರತೆಯಿಂದ ಸೊರಗುತ್ತಿರುವುದು ಅತ್ಯಂತ ನೋವಿನ ಸಂಗತಿ. ಸರ್ಕಾರದ ಈ ನಿರ್ಲಕ್ಷವನ್ನು ಕರ್ನಾಟಕ ನವನಿರ್ಮಾಣ ಸೇನೆ ತೀವ್ರವಾಗಿ ಖಂಡಿಸುತ್ತದೆ.

ಅನುದಾನದ ಕೊರತೆಯಿಂದ ಕಳೆದ ಹಲವು ವರ್ಷಗಳಿಂದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ‌ ನೇಮಕವೇ ಆಗಿಲ್ಲ ಅಲ್ಲಿರುವ ಸಿಬ್ಬಂದಿಗಳು ಸಂಬಳ ನೋಡದೆ ಎಷ್ಟೊ ವರ್ಷಗಳು ಕಳೆದವು.

ವಿವಿಯ ಕಟ್ಟಡಗಳು ಸುಣ್ಣಬಣ್ಣ ನೋಡದೆ ದಶಕಗಳೇ ಕಳೆಯುತ್ತ ಬಂದಿವೆ ವಿವಿಯ ಗ್ರಂಥಾಲಯಕ್ಕೆ ಹಚ್ಚಿದ ಬಣ್ಣ ಮಾಸಿ ಪಕಳೆಗಳ ವಿದ್ಯಾರ್ಥಿಗಳ ಮೇಲೆ ಬೀಳುತ್ತಿದೆ ಎಂದು ಈ ಹಿಂದೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

ದಿನೇದಿನೇ ಹೀಗೆ ಹಲವಾರು ತೊಂದರೆಯ ಗುಡುಗುತ್ತಿರುವ ಕನ್ನಡಿಗರ ಹೆಮ್ಮೆಯ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವ ಜವಾಬ್ದಾರಿ ಸರ್ಕಾರದ ಮೇಲಿದೆ.

ಕನ್ನಡದ ಬೆಳವಣಿಗೆ, ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಹುಟ್ಟಿಕೊಂಡಿರುವ ವಿಶ್ವವಿದ್ಯಾಲಯದ ಮೂಲ ಆಶಯವನ್ನು ರಾಜಕೀಯ ಕಾರಣಗಳಿಗಾಗಿ ಸರಕಾರ ಬಲಿ ನೀಡುವ ಕೆಲಸ ಮಾಡಬಾರದು ಅನ್ಯ ವಿಷಯಗಳಿಗೆ ಕೋಟಿ ಕೋಟಿ ಹಣ ಬಿಡುಗಡೆ ಮಾಡುವ ಸರಕಾರ ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಹೊರಬೇಕಾದ ಸರಕಾರವೇ ಈ ರೀತಿಯಾಗಿ ವರ್ತಿಸುತ್ತಿರುವುದು ಶೋಭೆಯಲ್ಲ ಸಾಹಿತ್ಯ ಸಂಸ್ಕೃತಿಗಾಗಿ ಸಿರಿತನ ನಾಡಿನ ಭಾಷೆಯ ವಿಶ್ವವಿದ್ಯಾಲಯಕ್ಕೆ ಒಂದೊಂದ್ ಆಗಿರುವ ಸ್ಥಿತಿಯನ್ನು ನಾವು ಖಂಡಿಸುತ್ತೇವೆ.

ಈ ಹಿಂದಿನ ಸರಕಾರಗಳು ವಿವಿಯ ನಿರ್ವಹಣೆಗಾಗಿ ವಾರ್ಷಿಕ 5 ಕೋಟಿ ಹಣ ನೀಡುತ್ತಿದ್ದವು. ಆದರೆ ನೆರೆ ,ಬರ, ಕರೋನ ,ನೆಪ ನೀಡಿ ಸರ್ಕಾರ ಈಗ ಅದನ್ನು 50 ಲಕ್ಷಕ್ಕೆ ಸೀಮಿತಗೊಳಿಸಿದೆ. ಅದರಲ್ಲಿ ಕೇವಲ 12 ಲಕ್ಷ ಬಿಡುಗಡೆ ಮಾಡಿದೆ ಸರಕಾರ ಈ ನಡೆ ನಿಜಕ್ಕೂ ಶೋಭೆಯಲ್ಲ ಕರ್ನಾಟಕದಲ್ಲಿ ಕನ್ನಡ ಉಳಿದು ಬೆಳೆದರೆ ಮಾತ್ರ ಸರಕಾರಗಳು ಉಳಿಯುತ್ತದೆ ಎನ್ನುವುದು ನೀವು ಮರೆಯಬಾರದು ಕನ್ನಡಪರ ಒಲವಿರುವ ತಮ್ಮ ಅವಧಿಯಲ್ಲಿ ಕನ್ನಡ ವಿವಿಗೆ ಇಂತಹ ಪರಿಸ್ಥಿತಿ ಬಂದೊದಗಿದೆ ಎಂದರೆ ನಮಗೆ ನಂಬಲಾಗುತ್ತಿಲ್ಲ .ನೀವು ಕನ್ನಡದ ಮುಖ್ಯಮಂತ್ರಿಗಳು ವಿವಿಗೆ ಬಲ ತುಂಬುವ ಕೆಲಸ ನಿಮ್ಮಿಂದ ಆಗಲಿ ಈ ಕೂಡಲೇ ಕನ್ನಡ ವಿಶ್ವವಿದ್ಯಾಲಯಕ್ಕೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ.

ಒಂದು ವೇಳೆ 15 ದಿನದೊಳಗೆ ಅನುದಾನ ಬಿಡುಗಡೆ ಮಾಡದೆ ಹೋದರೆ ಜನವರಿ 5ರಂದು ವಿವಿಯ ಆವರಣದಲ್ಲಿ ಹೋರಾಟಗಾರರ ಸಾಹಿತಿ, ಹೋರಾಟಗಾರರ, ವಿದ್ಯಾರ್ಥಿಗಳ ಹಕ್ಕೊತ್ತಾಯದಸಭೆಯನ್ನು ಹಮ್ಮಿಕೊಂಡು ಸರ್ಕಾರದ ನಡೆಯನ್ನು ಉಗ್ರವಾಗಿ ಖಂಡಿಸುವ ತೀರ್ಮಾನ ಕರ್ನಾಟಕ ನವನಿರ್ಮಾಣ ಸೇನೆಯ ತೆಗೆದುಕೊಳ್ಳುತ್ತದೆ ಎಂದು ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯ ಅಧ್ಯಕ್ಷರು ಭೀಮಶಂಕರ್ ಪಾಟೀಲ್ ಹೇಳಿದ್ದಾರೆ.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading
Advertisement
Click to comment

Leave a Reply

Your email address will not be published. Required fields are marked *

ಸುದ್ದಿ

ತಾಲ್ಲೂಕಿನಲ್ಲಿ ‘ಕೈ’ ಬಲಪಡಿಸುತ್ತಿರುವುದು ಹರ್ಷದಾಯಕ : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ

Published

on

ಬಾಗೇಪಲ್ಲಿ: ಕಾಂಗ್ರೆಸ್ ಪಕ್ಷದ ಸಿದ್ದಾಂತಗಳು ದೇಶದ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದೆ ಸಾಮಾಜಿಕ ನ್ಯಾಯ ಒದಗಿಸುವ ಬದ್ಧತೆಯನ್ನು ನೆಚ್ಚಿ ವಿವಿಧ ಪಕ್ಷಗಳಿಂದ ತೊರೆದು ನೂರಾರು ಅಲ್ಪಸಂಖ್ಯಾತರು ಹಾಗೂ ಯುವ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಅವರು ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಅವರ ಸ್ವ ಗೃಹದಲ್ಲಿ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪಿ.ಶಬೀರ್ ಭಾಷಾ,ಉಪಾಧ್ಯಕ್ಷರಾಗಿ ಷೇಕ್ ಮುಬಾರಕ್,ಪ್ರಧಾನ ಕಾರ್ಯದರ್ಶಿಯಾಗಿ ಖಯಾಮ್ ಪೀರ್ ರವರಿಗೆ
ನೇಮಕಾತಿ ಪತ್ರವನ್ನು ಹಸ್ತಂತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿ
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು,‌ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟುವ ಪಕ್ಷ ಎಂದರು. ಜಾತ್ಯತೀತ ನಿಲುವು ಹೊಂದಿರುವ ಹಾಗೂ ದೇಶದ ಜನಪರವಾದ ಪಕ್ಷ ಎಂದು ಹೇಳಿದರು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ
ಪಕ್ಷ ಮತ್ತು ಸಮ ಸಮಾಜಕ್ಕಾಗಿ ಇನ್ನಷ್ಟು ತೊಡಗಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಮಾತನಾಡಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಸಲಿದ್ದೇನೆ ನನಗೆ ಪಟ್ಟಣದ ಸಮಸ್ಯೆಗಳ ಬಗ್ಗೆ ಅರಿವು ಇದೆ. ಪಟ್ಟಣದ 23 ವಾರ್ಡ್ ಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಯನ್ನು ಮನೆಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವುಗಾಗಿ ಶ್ರಮಿಸುತ್ತನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯರಾದ ಅಮರನಾಥ್ ರೆಡ್ಡಿ, 7 ನೇ ವಾರ್ಡ್ ಪುರಸಭೆ ಸದಸ್ಯರಾದ ನಂಜುಂಡಪ್ಪ, ಡಿ.ಸಿ
ಸಿ.ಅಲ್ಪಸಂಖ್ಯಾತ ಜಿಲ್ಲಾ ಕಾರ್ಯದರ್ಶಿ ಜೆ.ಎಂ.ಅನ್ಸರ್ ಪಾಷಾ,ಹಾಗೂ ನೂರಾರು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Continue Reading

ಸುದ್ದಿ

ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ

Published

on

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Continue Reading

ಸುದ್ದಿ

ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Published

on

ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.

ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.

ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್

satta king gali