ಸುದ್ದಿ
ಸಾಹಿತ್ಯ ಸಿಂಚನದಿಂದ ಬದುಕಿನ ಮೌಲ್ಯಗಳು ಸಾಕ್ಷಾತ್ಕಾರಗೊಳ್ಳುತ್ತವೆ : ಸಿ.ಸೋಮಶೇಖರ್
ಪೀಣ್ಯ ದಾಸರಹಳ್ಳಿ: ‘ ಸಾಹಿತ್ಯದ ಸಿಂಚನ ಯಾರಲ್ಲಿರುತ್ತದೋ ಅವರು ಮುಂಬರಲು ಸಾಧ್ಯ, ಅವರಲ್ಲಿ ಬದುಕಿನ ಮೌಲ್ಯಗಳು ಸಾಕ್ಷಾತ್ಕಾರಗೊಳ್ಳುತ್ತವೆ’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಹೇಳಿದರು.
ಬಾಗಲಗುಂಟೆಯ ಶ್ರೀ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಪುಸ್ತಕ ಬಿಡುಗಡೆ, ಕವಿಗೋಷ್ಠಿ, ಧ್ವನಿಸುರುಳಿ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ ಕಲೆ, ಸಾಹಿತ್ಯ ಎನ್ನುವುದು ತಪಸ್ಸಿನಂತೆ ದೀರ್ಘಕಾಲ ಪ್ರಯತ್ನಪಟ್ಟರೆ ಫಲ ಸಿಗುತ್ತದೆ’ ಎಂದ ಅವರು ಇತ್ತೀಚಿನ ಕೆಟ್ಟ ಸಾಹಿತ್ಯದ ಗೀತರಚನೆಗಳನ್ನು ತ್ಯಜಿಸುವ ಪ್ರಯತ್ನ ಮಾಡಬೇಕು’ ಎಂದು ಆಗ್ರಹಿಸಿದರು.
ಪತ್ರಕರ್ತ ರಘುನಾಥ್ ಚ.ಹ. ಮಾತನಾಡಿ ‘ ಕಥೆಗಳ ಮೂಲಕ ಬರವಣಿಗೆ ಹೆಚ್ಚು ಅಭಿವೃದ್ಧಿಯಾಗುತ್ತದೆ. ಸಾಹಿತ್ಯದ ಸಂಪರ್ಕ ಜ್ಞಾನವನ್ನು ಹೆಚ್ಚಿಸುತ್ತದೆ. ಆಧುನಿಕ ಜಗತ್ತಿನಲ್ಲಿ ಕಲೆ, ಸಾಹಿತ್ಯ ನಮ್ಮ ಬದುಕಿಗೆ ಪೂರಕವಾಗಿದೆ’ ಎಂದರು.
ಈ ಸಂದರ್ಭದಲ್ಲಿ ಈ ರವೀಶ್ ಅವರ ಪ್ರೀತಿಯ ನೆರಳು ಕಾದಂಬರಿಯನ್ನು ಸಾಹಿತಿ ದ್ವಾರನಕುಂಟೆ ಪಾತಣ್ಣ ಬಿಡುಗಡೆ ಮಾಡಿ ಕೃತಿಯ ಬಗ್ಗೆ ಮಾತನಾಡಿದರು. ಕಡೆಗೋಲ ಚಿನ್ನರಿಲು ಕಥಾಸಂಕಲನವನ್ನು ಲೇಖಕ ಗುರುರಾಜ್ ಎಸ್. ಬಿಡುಗಡೆ ಮಾಡಿ ಮಾತನಾಡಿದರು.
ಈ ವೇಳೆ ಸಂಸ್ಥೆಯ ಸಂಸ್ಥಾಪಕ ಈ. ರವೀಶ್, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ. ತಿಮ್ಮಯ್ಯ, ದಾಸರಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೈ. ಬಿ ಎಚ್. ಜಯದೇವ್ ಮುಂತಾದವರಿದ್ದರು.
ಸುದ್ದಿ
ತಾಲ್ಲೂಕಿನಲ್ಲಿ ‘ಕೈ’ ಬಲಪಡಿಸುತ್ತಿರುವುದು ಹರ್ಷದಾಯಕ : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ
ಬಾಗೇಪಲ್ಲಿ: ಕಾಂಗ್ರೆಸ್ ಪಕ್ಷದ ಸಿದ್ದಾಂತಗಳು ದೇಶದ ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದೆ ಸಾಮಾಜಿಕ ನ್ಯಾಯ ಒದಗಿಸುವ ಬದ್ಧತೆಯನ್ನು ನೆಚ್ಚಿ ವಿವಿಧ ಪಕ್ಷಗಳಿಂದ ತೊರೆದು ನೂರಾರು ಅಲ್ಪಸಂಖ್ಯಾತರು ಹಾಗೂ ಯುವ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ಅವರು ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಅವರ ಸ್ವ ಗೃಹದಲ್ಲಿ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪಿ.ಶಬೀರ್ ಭಾಷಾ,ಉಪಾಧ್ಯಕ್ಷರಾಗಿ ಷೇಕ್ ಮುಬಾರಕ್,ಪ್ರಧಾನ ಕಾರ್ಯದರ್ಶಿಯಾಗಿ ಖಯಾಮ್ ಪೀರ್ ರವರಿಗೆ
ನೇಮಕಾತಿ ಪತ್ರವನ್ನು ಹಸ್ತಂತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿ
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟುವ ಪಕ್ಷ ಎಂದರು. ಜಾತ್ಯತೀತ ನಿಲುವು ಹೊಂದಿರುವ ಹಾಗೂ ದೇಶದ ಜನಪರವಾದ ಪಕ್ಷ ಎಂದು ಹೇಳಿದರು. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ
ಪಕ್ಷ ಮತ್ತು ಸಮ ಸಮಾಜಕ್ಕಾಗಿ ಇನ್ನಷ್ಟು ತೊಡಗಿಸಿಕೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷ ನಿಜಾಮುದ್ದೀನ್ ಮಾತನಾಡಿ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಸಲಿದ್ದೇನೆ ನನಗೆ ಪಟ್ಟಣದ ಸಮಸ್ಯೆಗಳ ಬಗ್ಗೆ ಅರಿವು ಇದೆ. ಪಟ್ಟಣದ 23 ವಾರ್ಡ್ ಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಯನ್ನು ಮನೆಮನೆಗೆ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವುಗಾಗಿ ಶ್ರಮಿಸುತ್ತನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಡಿ ಪಿ ಸದಸ್ಯರಾದ ಅಮರನಾಥ್ ರೆಡ್ಡಿ, 7 ನೇ ವಾರ್ಡ್ ಪುರಸಭೆ ಸದಸ್ಯರಾದ ನಂಜುಂಡಪ್ಪ, ಡಿ.ಸಿ
ಸಿ.ಅಲ್ಪಸಂಖ್ಯಾತ ಜಿಲ್ಲಾ ಕಾರ್ಯದರ್ಶಿ ಜೆ.ಎಂ.ಅನ್ಸರ್ ಪಾಷಾ,ಹಾಗೂ ನೂರಾರು ಅಲ್ಪಸಂಖ್ಯಾತ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸುದ್ದಿ
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ
ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಭದ್ರಾವತಿಯಲ್ಲಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ
ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ಶಿಡ್ಲಘಟ್ಟ : ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್ ಮಾತನಾಡಿದರು.
ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವ ಜೊತೆಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿಸುತ್ತದೆ ಎಂದು ಅವರು ತಿಳಿಸಿದರು.
ಪ್ರತಿನಿತ್ಯ ಒತ್ತಡದ ನಡುವೆ ಕೆಲಸ ನಿರ್ವಹಿಸುವ ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು ಎಂದರು.
ತಹಶೀಲ್ದಾರ್ ಬಿ.ಎಸ್.ರಾಜೀವ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳುವ ಜೊತೆಗೆ ಸರ್ಕಾರಿ ನೌಕರರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರಡ್ಡಿ, ಗೌರವಾಧ್ಯಕ್ಷ ಟಿ.ವಿಜಯ್‌ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಬಿ.ಕೆ.ಚಂದ್ರಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್, ಸಿಡಿಪಿಓ ನಾಗಮಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯಲು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ.ಮುನಿರಾಜು, ದೈಹಿಕ ಶಿಕ್ಷಕರ ಸಂಘದ ರಂಗನಾಥ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ