Connect with us
Ad Widget

ಸುದ್ದಿ

ಗುರುಗಳಾಗಿ ಶ್ರೀ ಭೀಮಣ್ಣ ಕರ್ತವ್ಯಕ್ಕೆ ಹಾಜರಾದ ಸುಮಧುರ ಕ್ಷಣ

Published

on

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪದೋನ್ನತಿ : ಗುರುಗಳಾಗಿ ಶ್ರೀ ಭೀಮಣ್ಣ ಕರ್ತವ್ಯಕ್ಕೆ ಹಾಜರಾದ ಸುಮಧುರ ಕ್ಷಣ

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಪದೋನ್ನತಿ ಹೊಂದಿ ದಿನಾಂಕ 28-01-2021 ರಂದು ನೂತನ ಮುಖ್ಯ ಗುರುಗಳಾಗಿ ಶ್ರೀಯುತ ಭೀಮಣ್ಣ ಇವರು ಕರ್ತವ್ಯಕ್ಕೆ ಹಾಜರಾದ ಸುಮಧುರ ಕ್ಷಣಗಳ ಈ ಕಾರ್ಯಕ್ರಮಕ್ಕೆ ಸುಮಾರು 50 ಅಭಿಮಾನಿ ಶಿಕ್ಷಕಬಳಗ ಸಾಕ್ಷಿಯಾದರು. ಇವರ ಕಾರ್ಯವೈಖರಿಗೆ ಇವರು ಕರ್ತವ್ಯಕ್ಕೆ ಹಾಜರಾಗುವ ಸಂದರ್ಭದಲ್ಲಿ ನೆರೆದಿದ್ದ ಆತ್ಮೀಯ ಬಳಗವೇ ಸಾಕ್ಷಿ ಎಂಬಂತೆ ಭಾಸವಾಯಿತು. ಮುಂದಿನ ವೃತ್ತಿ ಜೀವನದಲ್ಲಿ ಇನ್ನಷ್ಟು ಸಾಧನೆಗೈದು ಎಲ್ಲರಿಗೂ ಮಾದರಿಯಾಗಲಿ ಎಂದು ಆತ್ಮೀಯ ಬಳಗದವರು ಹಾರೈಸಿದರು.

ಈ ಸಂದರ್ಭದಲ್ಲಿ ವೀರಭದ್ರಪ್ಪ ಮಾಜಿ ಜಿಲ್ಲಾಧ್ಯಕ್ಷರು ಕ. ರಾ. ಪ್ರಾ. ಶಾ. ಶಿ. ಸಂಘ, ರಾಯಚೂರು, ಮಹದೇವಪ್ಪ ಮಿರ್ಜಾಪುರ, ಹೀರಾಲಾಲ್,ಮಾರುತಿ, ರಾಮು, ಬಂದೇನವಾಜ್, ನೂರುಲ್ ಹಕ್, ದತ್ತಾತ್ರೇಯ ಸಿ. ಆರ್. ಪಿ,ಮಲ್ಲಿಕಾರ್ಜುನ, ಅಂಜಿನಯ್ಯ, ಪ್ರಸನ್ನ ಸಿ. ಎಸ್, ವೀರೇಶ್, ಜನಾರ್ಧನ್ ಸಿ. ಆರ್. ಪಿ, ಭೀಮರಾಯ, ರೆಹಮಾನ್, ಆನಂದ್ ಧನಲಕ್ಷ್ಮೀ, ನಂದಿನಿ, ಭೀಮನಾಯಕ್,ಇನ್ನುಳಿದ ಆತ್ಮೀಯ ಬಳಗ, ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading
Advertisement
Click to comment

Leave a Reply

Your email address will not be published. Required fields are marked *

ಸುದ್ದಿ

ಪ್ಲಾಸ್ಟಿಕ್ ಬಳಕೆಯಿಂದ ಜೀವರಾಶಿಗೆ ಅಪಾಯ -ಶ್ರೀಮತಿ ಸುಕನ್ಯಾ ಕಳವಳ

Published

on

ಬಾಗೇಪಲ್ಲಿ: ಅತಿಯಾಗಿ ಪ್ಲಾಸ್ಟಿಕ್ ಬಳಕೆಯಿಂದ ಮನುಕುಲದ ಭೂಮಿ ಮೇಲಿನ ಸಕಲ ಜೀವರಾಶಿಗೂ ಅಪಾಯವಾಗುತ್ತಿದೆ’ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಅರ್.ಎಂ.ಎಸ್.ಎ. ಡಿ ವೈ ಪಿ ಸಿ ಅಧಿಕಾರಿಗಳಾದ ಶ್ರೀಮತಿ ಸುಕನ್ಯಾ ರವರು ಆತಂಕ ವ್ಯಕ್ತಪಡಿಸಿದರು.

ಇಂದು ಕಸಬಾ ಹೋಬಳಿ ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯ ಸುಂದರ ಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನದಡಿಲ್ಲಿ ಸುಂದರ ಕೈ ತೋಟ ನಿರ್ಮಿಸಿದ್ದು, ವೀಕ್ಷಣೆ ಮಾಡಿ ಉತ್ತಮವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿ, ‘ಮನುಷ್ಯನ ಜೀವನ ಶೈಲಿಯಿಂದ ಭೂಮಿ ಮೇಲಿನ ಎಲ್ಲಾ ಜೀವರಾಶಿಗಳಿಗೂ ಅಪಾಯವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಶಾಲಾ ಕಾಲೇಜು ಮಕ್ಕಳಿಗೆ ವಿದ್ಯಾಭ್ಯಾಸದ ಜತೆಗೆ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರೆ ಸಮಾಜವನ್ನು ಬದಲಾವಣೆ ತರಲು ಸಹಕಾರಿಯಾಗುತ್ತದೆ. ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರೆ ಶೇ 50ರಷ್ಟು ಪರಿಸರ ಮಾಲಿನ್ಯ ನಿಯಂತ್ರಿಸಬಹುದು’ ಎಂದು ಸಲಹೆ ನೀಡಿದರು.

ಕಾಡಿಗೆ ಬೆಂಕಿ ಹಚ್ಚುವುದು, ಮೋಜ ಮಸ್ತಿ ನೆಪದಲ್ಲಿ ಕಾಡು ನಾಶ ಮಾಡಿ ರೆಸಾರ್ಟ್ ನಿರ್ಮಾಣದಿಂದಾಗಿ ನೆಮ್ಮದಿಯಿಂದ ಜೀವಿಸುತ್ತಿದ್ದ ವನ್ಯಜೀವಿಗಳು ಆಹಾರ ಹುಡುಕುತ್ತಾ ನಾಡಿಗೆ ಬಂದು ಮನಷ್ಯನ ಕೈಯಲ್ಲಿ ಬಲಿಯಾಗುತ್ತಿವೆ’ ಎಂದು ವಿಷಾದಿಸಿದರು.

‘ಪರಿಸರ ರಕ್ಷಿಸದಿದ್ದರೆ ಮುಂದಿನ ಪೀಳಿಗೆ ಸರ್ವನಾಶವಾಗಲಿದೆ. ಪರಿಸರ ರಕ್ಷಣೆ ಎಂದರೆ ನಮ್ಮ ರಕ್ಷಣೆ ಎಂದು ಅರ್ಥ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ತ್ಯಾಜ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಪರಿಸರ ರಕ್ಷಣೆಯು ಪ್ರತಿಯೊಬ್ಬರ ಜವಾಬ್ದಾರಿ’ಎಂದು ಹೇಳಿದರು.

‘ಎಲ್ಲರೂ ಪ್ಲಾಸ್ಟಿಕ್ ಮಿತ ಬಳಕೆ ಅಭ್ಯಾಸ ಮಾಡಬೇಕು.ಶಾಲೆಯ ಆವರಣದಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಬೇಕಾದರೆ ಮೊದಲು ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಲ್ಲಿಸಬೇಕು. ವಿಧ್ಯಾರ್ಥಿಗಳು ಮಾರುಕಟ್ಟೆಗೆ ಹೋಗುವಾಗ ಮರೆಯದೆ ಬಟ್ಟೆಯ ಅಥವಾ ಸೆಣಬಿನ ಕೈಚೀಲ ಕೊಂಡೊಯ್ಯಬೇಕು’ ಎಂದು ತಿಳಿಸಿದರು.

ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ ಮಾತನಾಡಿ
‘ಪ್ಲಾಸ್ಟಿಕ್ ಬಳಕೆ ನಿರ್ಬಂಧದ ಬಗ್ಗೆ ಭಾಷಣೆ ಮಾಡಿದರೆ ಸಾಲದು. ಮೊದಲು ನಾವು ಬದಲಾಗಿ ಇತರರಿಗೆ ಮಾದರಿಯಾಗಬೇಕು. ನಮ್ಮ ಶಾಲೆಯ ಸುಂದರ್ ಲಾಲ್ ಬಹುಗುಣ ಇಕೋಕ್ಲಬ್ ವತಿಯಿಂದ ಶಾಲೆ ಆವರಣದಲ್ಲಿ ವಿಜ್ಞಾನ ಶಿಕ್ಷಕ ಎಲ್.ರವಿ ರವರ ಮಾರ್ಗದರ್ಶನದಲ್ಲಿ ಕೈತೋಟ ನಿರ್ಮಿಸಲಾಗಿದೆ.

ಪರಿಸರದಲ್ಲಿ ನೀರು ಕುಡಿದು ಬಿಸಾಕಿರುವ ಬಾಟಲ್ ತಂದು ಕೈತೋಟಕ್ಕೆ ರಕ್ಷಣೆ ಗೋಡೆಯನ್ನು ನಿರ್ಮಿಸಿ ಬಹಳ ಸುಂದರವಾಗಿ ಕಾಣಿಸುತ್ತದೆ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಶಾಲೆ ಆವರಣದಲ್ಲಿ ಎಳೆ ಮತ್ತು ಕಸವನ್ನು ಗೊಬ್ಬರವಾಗಿ ಪರಿವರ್ತಿಸಿ ಕೈತೋಟಕ್ಕೆ ಬಳಸಿದರೆ ಪರಿಸರ ಸಂರಕ್ಷಣೆಯ ಜತೆಗೆ ಆರ್ಥೀಕವಾಗಿ ಸಹಕಾರಿಯಾಗುತ್ತದೆ’ ಎಂದು ಹೇಳಿದರು.

ತಾಲ್ಲೂಕು ಕಸಬಾ ಇಸಿಓ ಆರ್.ಹನುಮಂತ ರೆಡ್ಡಿ ಮಾತನಾಡಿ ವೈಯಕ್ತಿಕ ಸ್ವಚ್ಚತೆಯೊಂದಿಗೆ ಪರಿಸರ ಸ್ವಚ್ಚತೆ,ಸಾತ್ವಿಕ ಆಹಾರ ಪದ್ದತಿ, ನೀರಿನ ಮಿತ ಬಳಿಕೆ, ಪರಿಸರ ಬಗ್ಗೆ ಪ್ರೀತಿ ಕಾಳಜಿಯೊಂದಿಗೆ ಪರಿಸರ ಸಂರಕ್ಷಣೆ ವಿವಿಧ ರೀತಿಯ ಮಾಲಿನ್ಯಗಳು ಅವುಗಳಿಂದ ಉಂಟಾಗುವ ದುಷ್ಪರಿಣಾಮಗಳು ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು. ಮುಂದೆ ಹತ್ತು ನೇ ತರಗತಿಯಲ್ಲಿ ಓದಿ ಅತ್ಯುತ್ತಮ ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎನ್. ಎನ್.ಸಂದ್ಯಾ,ಬಿರಾದಾರ ವಿಠ್ಠಲ ಚಂದ್ರ ಶಾ,ಶ್ರೀನಿವಾಸ್ ಎನ್.ಸಿ.ನಾರಾಯಣ ಸ್ವಾಮಿ, ಎಲ್. ರವಿ,ರಾಮಚಂದ್ರಪ್ಪ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.

Continue Reading

ಸುದ್ದಿ

ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ

Published

on

ಬೆಳಗಾವಿ : ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಬುದ್ಧ, ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಭಿಮಾನಿಯ ಹೊಸ ಕಾರಿಗೆ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.

ಮೂಢನಂಬಿಕೆಯ ವಿರುದ್ಧ ನಾವು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗವಾಗಿ ಸ್ಮಶಾನದಲ್ಲಿ ನೂತನ ಕಾರಿಗೆ ಚಾಲನೆ ನೀಡಲಾಗಿದೆ.

Continue Reading

Politics

ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟೇಶ್, ಮಾಜಿ ಸಚಿವರಾದ ಡಾ. ಎಚ್.ಸಿ ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಶಾಸಕರಾದ ಧರ್ಮಸೇನ, ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್