ಮನರಂಜನೆ
ಅಭಿಷೇಕ್ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್
ಬೆಂಗಳೂರು : ಅಭಿಷೇಕ್ ಅಂಬರೀಶ್ ನಟನೆಯ ಮ್ಯಾಡ್ ಮ್ಯಾನರ್ಸ್ ಸಿನಿಮಾ ಸೆಟ್ಟೇರಿ ಅನೇಕ ಸಮಯವಾಗಿದೆ. ಆದರೆ ಅಭಿಷೇಕ್ ಜೊತೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.
ರೆಬಲ್ ಸ್ಟಾರ್ ಪುತ್ರನ ಎರಡನೇ ಸಿನಿಮಾಗೆ ಕನ್ನಡದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಜೊತೆ ಕನ್ನಡತಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಈ ಮೊದಲು ರಚಿತಾ, ಅಭಿಷೇಕ್ ನಟನೆ ಚೊಚ್ಚಲ ಸಿನಿಮಾ ಅಮರ್ ನಲ್ಲಿ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರು.
ಮನರಂಜನೆ
13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಅವರು ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ದೇಶಕ ಡಿ.ಆರ್.ಜೈರಾಜ್, ಹಿರಿಯ ಕಲಾವಿದರಾದ ಶ್ರುತಿ, ತಾರಾ ಅನುರಾಧಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆಯುಕ್ತ ಪಿ.ಎಸ್.ಹರ್ಷ ಉಪಸ್ಥಿತರಿದ್ದರು.
ಮನರಂಜನೆ
ಹೀರೋ ಆಗಿ ಪ್ರೇಕ್ಷಕರ ಮುಂದೆ ಕುರಿ ಪ್ರತಾಪ್
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಕುರಿ ಪ್ರತಾಪ್ ಈಗ ಪ್ರೇಕ್ಷಕರ ಮುಂದೆ ಹೀರೋ ಆಗಿ ಬರಲು ಸಜ್ಜಾಗಿದ್ದಾರೆ. ಸ್ಯಾಂಡಲ್ವುಡ್ ನಲ್ಲಿ ಈಗಾಗಲೇ ಅನೇಕ ಹಾಸ್ಯ ಕಲಾವಿದರು ನಾಯಕರಾಗಿ ಮಿಂಚಿ ಸಕ್ಸಸ್ ಕಂಡಿದ್ದಾರೆ. ಕಾಮಿಡಿ ನಟರಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಅನೇಕ ಕಲಾವಿದರು ಖ್ಯಾತಿಗಳಿಸುತ್ತಿದ್ದಂತೆ ಹೀರೋ ಆಗಿ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ಇದೀಗ ಅದೇ ಸಾಲಿಗೆ ಕುರಿ ಪ್ರತಾಪ್ ಸಹ ಸೇರಿಕೊಂಡಿದ್ದಾರೆ.
ಅಂದಹಾಗೆ ಕುರಿ ಪ್ರತಾಪ್ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ‘ಆರ್ ಸಿ ಬ್ರದರ್ಸ್’ ಎಂದು ಟೈಟಲ್ ಇಡಲಾಗಿದೆ. ಪ್ರಕಾಶ್ ಕುಮಾರ್ ಎನ್ನುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಹೋದರ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾ ಇದಾಗಿದೆ. ಚಿತ್ರದಲ್ಲಿ ತಬಲ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ
ಮನರಂಜನೆ
‘ಪೊಗರು’ ಆಡಿಯೋ ಲಾಂಚ್ ಗೆ ಸಿದ್ದ ರಾಮಯ್ಯ
ದಾವಣಗೆರೆಯಲ್ಲಿ ನಾಳೆ ಅದ್ಧೂರಿಯಾಗಿ ನಡೆಯಲಿರುವ ಪೊಗರು ಆಡಿಯೋ ಲಾಂಚ್ ಗೆ ಮಾಜಿ ಸಿದ್ದರಾಮಯ್ಯ ಅವರನ್ನು ಧ್ರುವಸರ್ಜಾ, ನಿರ್ದೇಶಕ ನಂದ ಕಿಶೋರ್ ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನಿಸಿದರು. ಈ ವೇಳೆ ಶಾಸಕ ಬೈರತಿ ಸುರೇಶ್, ನಟ ಪ್ರಥಮ್ ಜೊತೆಗಿದ್ದರು.