Politics
ಪುರ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಗೌರಿಬಿದನೂರು : ತಾಲ್ಲೂಕಿನ ಪುರ ಗ್ರಾಮ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯು ಇಂದು ನಡೆಯಿತು. ಭಾರತೀಯ ಜನತಾ ಪಕ್ಷದ ಬೆಂಬಲಿತ ಅಭ್ಯರ್ಥಿ ವಿರುಪಾಕ್ಷಗೌಡ ಅವರು ಅಧ್ಯಕ್ಷರಾಗಿ,ಮಾಲಾಶ್ರೀ ಶಂಕರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಪಿ.ಎನ್ ಜಗನ್ನಾಥ ಪುರ, ನಾರಾಯಣಸ್ವಾಮಿ, ಗೌಡಗೆರೆ ರಾಜಶೇಖರ್, ಗೋಪಾಲ್ ಪುರ, ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭಾಶಯ ಕೋರಿದರು.
ವರದಿ: ಅಕ್ಷಯ್ A S
Politics
ಮಸ್ಕಿ ತಾಲೂಕಿನ ಬಿಜೆಪಿ ಪಕ್ಷದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸದಸ್ಯರು
ಮಸ್ಕಿ.ಫೆ.20 :- ಇಂದು ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನೆಡೆದ ಕುಷ್ಟಗಿ ಜನಪ್ರಿಯ ಶಾಸಕರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರು ಅವರ ಸಮ್ಮುಖದಲ್ಲಿ ಭೋವಿ ಸಮಾಜದ ಮುಖಂಡ ವೀರೇಶ ಆನೆಹೂಸರು ಮತ್ತು ಅಮರೇಗೌಡ ಕಡಬೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ಕಾಂಗ್ರಸ್ ಮುಖಂಡರಾದ ಹನುಮಂತಪ್ಪ ಮುದ್ದಾಪೂರು. ಶ್ರೀ ಶೈಲಪ್ಪ ಬ್ಯಾಳಿ. ಎಚ್.ಬಿ.ಮುರಾರಿ. ಸಿದ್ದಣ್ಣ ಹೂವಿನಭಾವಿ. ಕೃಷ್ಣ ಡಿ.ಚಿಗರಿ. ಮೈಬುಸಾಬ. ಬಸನಗೌಡ ಮುದವಾಳ. ಸುರೇಶ್ ಬ್ಯಾಳಿ. ಮಲ್ಲಯ್ಯ ಮುರಾರಿ. ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ : ದುರ್ಗೇಶ್ ಬೋವಿ ಮಸ್ಕಿ
Politics
ನೀತಿ ಆಯೋಗದ ಆಡಳಿತ ಮಂಡಳಿಯ ಸಭೆ
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿಯ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದರು.
ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು, ಕೇಂದ್ರ ಸಚಿವರು, ನೀತಿ ಆಯೋಗದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
Politics
ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟೇಶ್, ಮಾಜಿ ಸಚಿವರಾದ ಡಾ. ಎಚ್.ಸಿ ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಶಾಸಕರಾದ ಧರ್ಮಸೇನ, ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.