Politics
ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ
ಶಿಡ್ಲಘಟ್ಟ : ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಈಗಾಗಲೇ 1.2 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವವರ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಮಾರ್ಚ್ ಅಂತ್ಯದೊಳಗೆ ಅಂತಹವರು ಸ್ವಯಂ ಪ್ರೇರಿತರಾಗಿ ಪಡಿತರ ಚೀಟಿ ವಾಪಸ್ಸು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಪಡಿತರ ಅಕ್ಕಿಯ ದುರುಪಯೋಗದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಪಡಿತರ ವಿತರಕರಿಂದ ಅಕ್ಕಿಯ ದುರ್ಬಳಕೆ ಹಾಗೂ ಕಳ್ಳತನದಂತಹ ಪ್ರಕರಣಗಳು ಕಂಡು ಬಂದಲ್ಲಿ ಪಡಿತರ ವಿತರಕರು ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ನೀಡಲಾಗುವ ಪಡಿತರ ಅಕ್ಕಿಯ ದುರುಪಯೋಗದ ಕುರಿತು ಆರೋಪಗಳು ಕೇಳಿ ಬರುತ್ತಿದ್ದು, ಪಡಿತರ ವಿತರಿಸುವ ಅಂಗಡಿಗಳಲ್ಲಿ, ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಪಡಿತರ ಅಕ್ಕಿ ದುರ್ಬಳಕೆಯನ್ನು ತಡೆಯಬೇಕು ಎಂದರು.
ನಗರದ ಹೊರವಲಯದ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳು ಕೆಟ್ಟು ತಿಂಗಳುಗಳು ಕಳೆದರೂ ದುರಸ್ತಿ ಪಡಿಸಿಲ್ಲ ಕೂಡಲೇ ದುರಸ್ತಿಗೊಳಿಸುವಂತೆ ನಗರಸಭೆ ಸೇರಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೂ ರಸ್ತೆಯ ಒಂದು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ಮಾಡುವುವವರನ್ನು ತೆರವುಗೊಳಿಸಿ ಎಂದರು.
ಎಲ್ಲಾ ಇಲಾಖೆಗಳಿಂದ ಸರ್ಕಾರದ ಯೋಜನೆಗಳು ಅಥವಾ ಕಾಮಗಾರಿಗಳನ್ನು ಜಾರಿಗೊಳಿಸುವ ಮುನ್ನ ನಮ್ಮ ಗಮನಕ್ಕೆ ತರುವ ಜೊತೆಗೆ ಸಕಾಲದಲ್ಲಿ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಇಓ ಚಂದ್ರಕಾಂತ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ . ಡಾ.ಬಿ.ಆರ್ .ಅಂಭೆಡ್ಕರ್ ಅಭಿವೃದ್ದಿ ನಿಗಮದ ಶಿಡ್ಲಘಟ್ಟ ತಾಲೂಕು ಅಭಿವೃದ್ದಿ ಅಧಿಕಾರಿ ಎಂ.ರಾಜಶೇಖರ್ ಸೇರಿದಂತೆ ತಾಲೂಕು ಮಟ್ಟದವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ವರದಿ: ಕೆ.ಮಂಜುನಾಥ್.ಶಿಡ್ಲಘಟ್ಟ
Politics
ಮಸ್ಕಿ ತಾಲೂಕಿನ ಬಿಜೆಪಿ ಪಕ್ಷದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸದಸ್ಯರು
ಮಸ್ಕಿ.ಫೆ.20 :- ಇಂದು ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನೆಡೆದ ಕುಷ್ಟಗಿ ಜನಪ್ರಿಯ ಶಾಸಕರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರು ಅವರ ಸಮ್ಮುಖದಲ್ಲಿ ಭೋವಿ ಸಮಾಜದ ಮುಖಂಡ ವೀರೇಶ ಆನೆಹೂಸರು ಮತ್ತು ಅಮರೇಗೌಡ ಕಡಬೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ಕಾಂಗ್ರಸ್ ಮುಖಂಡರಾದ ಹನುಮಂತಪ್ಪ ಮುದ್ದಾಪೂರು. ಶ್ರೀ ಶೈಲಪ್ಪ ಬ್ಯಾಳಿ. ಎಚ್.ಬಿ.ಮುರಾರಿ. ಸಿದ್ದಣ್ಣ ಹೂವಿನಭಾವಿ. ಕೃಷ್ಣ ಡಿ.ಚಿಗರಿ. ಮೈಬುಸಾಬ. ಬಸನಗೌಡ ಮುದವಾಳ. ಸುರೇಶ್ ಬ್ಯಾಳಿ. ಮಲ್ಲಯ್ಯ ಮುರಾರಿ. ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ವರದಿ : ದುರ್ಗೇಶ್ ಬೋವಿ ಮಸ್ಕಿ
Politics
ನೀತಿ ಆಯೋಗದ ಆಡಳಿತ ಮಂಡಳಿಯ ಸಭೆ
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿಯ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದರು.
ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು, ಕೇಂದ್ರ ಸಚಿವರು, ನೀತಿ ಆಯೋಗದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.
Politics
ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟೇಶ್, ಮಾಜಿ ಸಚಿವರಾದ ಡಾ. ಎಚ್.ಸಿ ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಶಾಸಕರಾದ ಧರ್ಮಸೇನ, ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.