ರಾಜ್ಯ
ಡಿಜಿ ಪೆಟ್ರೋಲ್ ಪಂಪ್ ಬಳಿ ನೂತನ ಉದ್ಯಾನವನ ನಿರ್ಮಾಣಕ್ಕೆ ಚಾಲನೆ
ಬೆಂಗಳೂರು : ತಮ್ಮ ವಿಧಾನಸಭಾ ಕ್ಷೇತ್ರದ ಪದ್ಮನಾಭನಗರ ವಾರ್ಡ್ ನ ಡಿಜಿ ಪೆಟ್ರೋಲ್ ಪಂಪ್ ಬಳಿ ನೂತನ ಉದ್ಯಾನವನ ನಿರ್ಮಾಣಕ್ಕೆ ಸ್ಥಳೀಯ ಶಾಸಕರಾದ ಆರ್. ಅಶೋಕ್ ರವರು ಭೂಮಿಪೂಜೆ ನೆರವೇರಿಸಿದರು.
ಉದ್ಯಾನವನದ ಕುರಿತು ಅಲ್ಲಿ ಪಾಲ್ಗೊಂಡ ಸ್ಥಳೀಯರಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಉದ್ಯಾನವನವು ನಮ್ಮ ಕ್ಷೇತ್ರದ ಅತಿದೊಡ್ಡ ಉದ್ಯಾನವನವಾಗಲಿದ್ದು, ಕ್ಷೇತ್ರದ ಜನರಿಗೆ ಅಗತ್ಯವಿರುವ ಸೌಲಭ್ಯ, ಅತ್ಯುತ್ತಮ ಮನರಂಜನಾ ಮತ್ತು ವಿಶ್ರಾಂತಿಯ ತಾಣವಾಗಲಿದೆ ಎಂದರು.
ರಾಜ್ಯ
ನೂತನವಾಗಿ ಪಿಎಸೈ ಹುದ್ದೆಗೆ ಆಯ್ಕೆಯಾದವರಿಗೆ ಸನ್ಮಾನ
ಬನ್ನಹಟ್ಟಿ: ನಗರದ ನಿವಾಸಿಯಾದ ಶ್ರೀಮತಿ ಸುಜಾತಾ ಕಾಡಪ್ಪ ಪಾಟೀಲ ನೂತನವಾಗಿ ಪಿಎಸೈ ಹುದ್ದೆಗೆ ಆಯ್ಕೆಯಾಗಿದಕ್ಕೆ ಊರಿನ ಗಣ್ಯರ ವತಿಯಿಂದ ಸನ್ಮಾನಿಸಲಾಗಿದೆ.
ಮೂಲತಃ ರೈತ ಕುಟುಂಬ ವರ್ಗಕ್ಕೆ ಸೇರಿದವರಾಗಿದ್ದು. ಇವರ ಪತಿ ರವಿ ಅಥಣಿಯವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆ ಕಂಡು ಇಡಿ ನಗರವೇ ಹೆಮ್ಮೆ ಪಡೆಯುತ್ತಿದ್ದು. ಈ ಸಂದರ್ಭದಲ್ಲಿ ನಗರದ ಮುಖಂಡರಾದ ಆರ್.ಕೆ.ಪಾಟೀಲ, ಜೆ.ಆರ್.ಹಂದಿಗುಂದ, ಡಿ.ಆರ್.ಪಾಟೀಲ, ಬಿ.ಎನ್.ಪಾಟೀಲ, ಬಿ.ಕೆ.ಪಾಟೀಲ್ ಹ, ಬಿ.ಡಿ. ಪಾಟೀಲ ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು.
ವರದಿ : ದೇವು ಕೂಚಬಾಳ
ರಾಜ್ಯ
ಜನಪ್ರಿಯ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ
ಚಿಕ್ಕಬಳ್ಳಾಪುರ : ಜನಪ್ರಿಯ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಅಧಿಕಾರಿಗಳೊಂದಿಗೆ ಮಾನ್ಯ ಸ್ಥಳೀಯ ಶಾಸಕರು ಹಾಗೂ ಆರೋಗ್ಯ ಸಚಿವರಾದ ಕೆ. ಸುಧಾಕರ್ ರವರು ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೊಳಿಸುವ ಕುರಿತಂತೆ ಚರ್ಚಿಸಿದರು. ಇತಿಹಾಸ ಪ್ರಿಯರಿಗೆ ಕೌತುಕವಾದ, ನಿಸರ್ಗ ಪ್ರಿಯರಿಗೆ ರಮಣೀಯವಾದ ಹಾಗೂ ಚಾರಣಿರಿಗೆ ರೋಮಾಂಚನಕಾರಿಯಾದ ನಂದಿ ಬೆಟ್ಟ ವರ್ಷದುದ್ದಕ್ಕೂ ಪ್ರವಾಸಿಗರನ್ನು ಆಕರ್ಷಿಸುತ್ತದೆ.
ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಯೋಜನೆ ರೂಪಿಸಿದ್ದು ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದೆ. ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯ
ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ
ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿಕೊಂಡಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಎಬಿವಿಪಿ ಆಗ್ರಹ
ತಾಳಿಕೋಟಿ : ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆಯನ್ನು ಹೊಂದಿದೆ..
ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡುವಂತೆ ಅಖಿಲ ಕರ್ನಾಟಕ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಿಸಿತ್ತು.
ಕರ್ನಾಟಕ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಶಿಟ್ ಬ್ಲಾಕಿಂಗ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ.
ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುವ ಜೊತೆಗೆ ಆದಾಯ ತೆರಿಗೆಯ ಕಾಯ್ದೆಯು ಕೂಡಾ ಇಲ್ಲಿ ಉಲ್ಲಂಘನೆ ಆಗಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ ದಂಧೆಯಲ್ಲಿ ತೊಡಗಿದವರ ವಿರುದ್ಧ ಸರ್ಕಾರ ಯಾವುದೆ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತದೆ.. ಎಂದು ಪತ್ರಿಕಾ ಗೋಷ್ಠಿಯಲ್ಲಿ ABVP ಕಾರ್ಯಕರ್ತರು ತಿಳಿಸಿದರು.
ವರದಿ :- ದೇವು ಕೂಚಬಾಳ ತಾಳಿಕೋಟೆ