ಸುದ್ದಿ
ಮೇಕ್ ಇನ್ ಇಂಡಿಯಾ ಪರಿಕಲ್ಪನೆಯ ಲಾಂಛನ ಲೋಕಾರ್ಪಣೆ
ಬೆಂಗಳೂರು : ಆತ್ಮ ನಿರ್ಭರ ಭಾರತ ಯೋಜನೆಯಡಿಯಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯ ಲಾಂಛನವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ ಅಮೃತ ಹಸ್ತದಿಂದ ಬೆಂಗಳೂರಿನ ಸ್ಯಾಂಕಿ ರಸ್ತೆ ಯ , ವಿಂಡ್ಸರ್ ಮ್ಯಾನರ್ ವೃತ್ತದಲ್ಲಿ , ಲೋಕಾರ್ಪಣೆಗೊಂಡಿತು.
ಈ ಸಂಧರ್ಭದಲ್ಲಿ ನನ್ನ ಜೊತೆ ನನ್ನ ಸಹೋದ್ಯೋಗಿ ಸಚಿವರು ಹಾಗೂ ಶಾಸಕರಗಳೂ ಸಹ ಉಪಸ್ಥಿತರಿದ್ದರು.
ಸುದ್ದಿ
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಬಾಗೇಪಲ್ಲಿ: ಪೆಟ್ರೋಲ್ ಡೀಸೆಲ್,ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘ ನೇತೃತ್ವದಲ್ಲಿ ಬಾಗೇಪಲ್ಲಿ ಡಾ.ಎಚ್.ಎನ್ ವೃತದಿಂದ ಮೆರವಣಿಗೆ ಹೊರಟು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನ ಸಾಮಾನ್ಯರ ಜೀವನ ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಭಾರತದಲ್ಲಿ ಜೀವನ ಮಾಡೋದೇ ಕಷ್ಟವಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇಲ್ಲ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.
ಸಿಪಿಐಎಂ ಪಕ್ಷದ ಮುಖಂಡ ಹಾಗೂ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ರಾಜ್ಯ ಸಂಚಾಲಕ ಪಿ.ಎಂ.ಮುನಿವೆಂಕಟಪ್ಪ ಮಾತನಾಡಿ ಕೋವಿಡ್ ಲಾಕ್‌ಡೌನ್ ನಂತರ ಚಾಲಕರ ಜೀವನ ಮತ್ತಷ್ಟು ಹದಗೆಟ್ಟಿದೆ. ಸರ್ಕಾರವು ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಕೇವಲ ಚಾಲಕರಷ್ಟೇ ಅಲ್ಲ, ಅಡುಗೆ ಸಿಲಿಂಡರ್ ದರ ಕೂಡ ಏರಿಸುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದರು.
ಇಂತಹ ಸಂಕಷ್ಟದ ನಡುವೆ ರಾಜ್ಯ ಸರ್ಕಾರವು ಟಿ.ವಿ, ಬೈಕ್ ಇರುವವರ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ನೀಡಿರುವ ಹೇಳಿಕೆಯಿಂದ ಬಡವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ. ಅಗತ್ಯ ವಸ್ತುಗಳು, ತೈಲ ಬೆಲೆ ಇಳಿಸಬೇಕು. ಮಾರ್ಚ್ 4ರ ಗಡುವಿನೊಳಗೆ ಸರ್ಕಾರ ಚಾಲಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧ ಚಲೋ ನಡೆಸಲಾಗುವುದು’ ಎಂದು ತಿಳಿಸಿದರು.
ಎಡಪಂಥೀಯ ಚಿಂತಕ ಹಾಗೂ ಪ್ರಜಾ ವೈದ್ಯ ಡಾ.ಅನಿಲ್ ಕುಮಾರ್ ಅವುಲಪ್ಪ ಮಾತನಾಡಿ
ಕೊರೊನಾ ಬಳಿಕ ಪುನಶ್ಚೇತನದ ಹಾದಿ ತುಳಿದಿರುವ ಸಾಮಾನ್ಯರ ಜೀವನ ಹಾಗೂ ಆರ್ಥಿಕ ಸ್ಥಿತಿಗತಿಯ ಮೇಲೆ ಪೆಟ್ರೋಲ್ ಬೆಲೆ ಏರಿಕೆಯು ಬರೆ ಎಳೆದಂತಾಗಿದೆ. ಗ್ಯಾಸ್ ಸಿಲಿಂಡರ್, ಅಗತ್ಯ ವಸ್ತುಗಳ ದರ ಹೆಚ್ಚಳದಿಂದ ಜನರು ತತ್ತರಿಸಿ ಹೋಗಿದ್ದಾರೆ. ಜೊತೆಗೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೂ ಹೆಚ್ಚಾಗಿರುವುದು ಜೀವನ ನಿರ್ವಹಣೆಗೆ ಕಠಿಣ ಸವಾಲು ಹಾಕಿದಂತಾಗಿದೆ ಎಂದು ಹೇಳಿದರು.
ಪ್ರತಿಭಟನೆಯ ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ.ಅನಿಲ್ ಕುಮಾರ್ ಅವುಲಪ್ಪ, ಮಂಜುನಾಥ ರೆಡ್ಡಿ, ಸಾವಿತ್ರಮ್ಮ, ಮುನಿವೆಂಕಟಪ್ಪ, ಅಶ್ವಥಪ್ಪ, ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.
ಸುದ್ದಿ
ಕೃಷಿ ವಿಶ್ವವಿದ್ಯಾಲಯ ಆಯೋಜಿಸಲಾಗಿದ್ದ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭ
ಬೆಂಗಳೂರು : ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ ಶ್ರೀ ತೇಜಸ್ವಿ ಸೂರ್ಯ ರವರು, ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದಿರುವ ಹಲವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ ಡಾ. ಎಸ್ ರಾಜೇಂದ್ರ ಪ್ರಸಾದ್ (ಕುಲಪತಿಗಳು, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು) ಶ್ರೀ ಗುರುಮೂರ್ತಿ, ಡಾ. ವಿ ನಾಗೇಗೌಡ, ಶ್ರೀ ಎಸ್ ಎಂ ನಾರಾಯಣ ರೆಡ್ಡಿ, ಡಾ. ಬಿ ಕೆ ಕುಮಾರಸ್ವಾಮಿ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಸುದ್ದಿ
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ರಂಗೋಲಿ ಸ್ಪರ್ಧೆ
ಪೀಣ್ಯ ದಾಸರಹಳ್ಳಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಶಾಲ್ ಪಬ್ಲಿಕ್ ಸ್ಕೂಲ್ ಪೈಪ್ಲೈನ್ ರೋಡ್ ದಾಸರಹಳ್ಳಿಯಲ್ಲಿ ಏರ್ಪಡಿಸಿದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜ್ಞಾನಕ್ಕೆ ಸಂಬಂಧಪಟ್ಟ ಆಕೃತಿ ಗಳನ್ನು ಚಿತ್ರಿಸಿ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ತಿಳುವಳಿಕೆ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ .ಪಿ ಮಾತನಾಡಿ ‘ಸಿ .ವಿ. ರಾಮನ್ ಅವರು ಬಹುದೊಡ್ಡ ವಿಜ್ಞಾನಿಗಳಾಗಿ ದೇಶಕ್ಕೆ ಹಾಗೂ ಜಗತ್ತಿಗೆ ಅನೇಕ ವಿಜ್ಞಾನದ ಬಗ್ಗೆ ಅವಿಷ್ಕಾರಗಳನ್ನು ಮಾಡಿ ಜಾಗೃತಿ ಮೂಡಿಸಿ ನಮ್ಮೆಲ್ಲರಿಗೆ ಆದರ್ಶರಾಗಿದ್ದಾರೆ ಹಾಗಾಗಿ ಅವರ ನೆನಪಿನ ಪ್ರಯುಕ್ತ ರಾಷ್ಟ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಣೆ ಮಾಡಲು ಸಂತೋಷವಾಗುತ್ತದೆ ಇಂದು ನಮ್ಮ ಶಾಲೆಯಲ್ಲಿ ವಿಜ್ಞಾನದ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಂದ ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಮೆದುಳಿನ ಆಕೃತಿ ,ಹೃದಯದ ಆಕೃತಿ, ಪಚನಕ್ರಿಯೆ ಆಕೃತಿ, ಅಸ್ತಿಪಂಜರದ ಆಕೃತಿ ಗಳನ್ನು ಬಿಡಿಸಿ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಮುಂದಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಂಡುಬಂದಿರುವುದು ಇದರಿಂದ ವಿದ್ಯಾರ್ಥಿಗಳಲ್ಲಿ ಆತ್ಮ ಸ್ಥೈರ್ಯ ಬರುತ್ತದೆ’ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ನರಸೇಗೌಡ ಶಿಕ್ಷಕರಾದ ಮೀನಾಕ್ಷಿ, ಮಧು, ಲೀಲಾ, ಚೈತನ್ಯ ,ಚೈತ್ರ ,ವೆಂಕಟರತ್ನಮ್ಮ ,ಆನಂದಿ ಮತ್ತು ರಮ್ಯ ಪಾಲ್ಗೊಂಡಿದ್ದರು.