ಸುದ್ದಿ
ಶ್ರೀ ತುಳಸಿ ಮುನಿರಾಜು ಗೌಡರನ್ನು ಭೇಟಿಯಾಗಿ ಅಭಿನಂದಿಸಿದ ತೇಜಸ್ವಿ ಸೂರ್ಯ
ಬೆಂಗಳೂರು : ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಸಮ್ಮುಖದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಶ್ರೀ ತುಳಸಿ ಮುನಿರಾಜು ಗೌಡರನ್ನು ಭೇಟಿಯಾಗಿ ತೇಜಸ್ವಿ ಸೂರ್ಯ ರವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಆರ್ ಅಶೋಕ್, ಶ್ರೀ ಬಸವರಾಜ್ ಬೊಮ್ಮಾಯಿ, ಶ್ರೀ ಎಸ್ ಟಿ ಸೋಮಶೇಖರ್, ಶ್ರೀ ಭೈರತಿ ಬಸವರಾಜು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಸ್ ಆರ್ ವಿಶ್ವನಾಥ್, ಶಾಸಕರಾದ ಶ್ರೀ ಸುನಿಲ್ ಕುಮಾರ್ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.
ಸುದ್ದಿ
ಕೊತ್ತನೂರು ಕೆರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುದ್ದಲಿ ಪೂಜೆ
ಶಿಡ್ಲಘಟ್ಟ : ತಾಲ್ಲೂಕಿನ ಕೊತ್ತನೂರು ಕೆರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೆರೆ ಸಂಜೀವಿನಿ ಕಾರ್ಯಕ್ರಮದ ಅಡಿಯಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ನಮ್ಮ ಭಾಗದಲ್ಲಿ ನದಿ ನಾಲೆಗಳಿರದ ಕಾರಣ ನಾವುಗಳು ಹಿಂದಿನಿಂದಲೂ ನಂಬಿರುವುದು ಆಗಸದಿಂದ ಬೀಳುವ ಮಳೆಯನ್ನು. ಅದನ್ನು ಹಿಡಿದಿಡಲೆಂದೇ ಹಿಂದಿನವರು ಕೆರೆಗಳನ್ನು ಕಟ್ಟಿಸಿದ್ದಾರೆ. ಅವುಗಳನ್ನು ಉಳಿಸಿಕೊಂಡು, ಮಳೆ ನೀರು ಹಿಡಿದಿಟ್ಟುಕೊಳ್ಳಲು ಅನುವು ಮಾಡಿಕೊಡಲು ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆ ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ರುಪಿಸಿರುವುದು ತುಂಬಾ ಉಪಯುಕ್ತಕರ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಕೆರೆಗಳಲ್ಲಿ ನೀರಿಲ್ಲದೆ ಅಂತರ್ಜಲ ಮಟ್ಟ ಕುಸಿದು ಕೃಷಿ ಕ್ಷೇತ್ರಕ್ಕೆ ಅಲ್ಲದೆ ಕುಡಿಯುವ ನೀರಿಗೂ ತೀವ್ರ ಅಭಾವವಾಗಿದೆ. ಇಂತಹ ಸಮಯದಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಕೆರೆಗಳಲ್ಲಿ ಹೂಳೆತ್ತುವ ಯೋಜನೆ ವರದಾನವಾಗಿದೆ. ಇದರಿಂದ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿ ಅಂತರ್ಜಲಮಟ್ಟ ಹೆಚ್ಚಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆಯಿಂದ ಕೇವಲ ಸಾಮಾಜಿಕ ಕಾರ್ಯಕ್ರಮಗಳು ಅಲ್ಲದೆ ಮಹಿಳೆಯರಿಗೆ ತರಬೇತಿ ನೀಡಿ ಧನ ಸಹಾಯವನ್ನು ನೀಡುವುದರಿಂದ ಮಹಿಳೆಯರು ಸ್ವಾವಲಂಭಿಗಳಾಗಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು. ಹಳೆಯ ದೇವಾಲಯಗಳ ಜೀರ್ಣೋದ್ದಾರ ಮತ್ತು ಅವಿದ್ಯಾವಂತರಿಗೆ ಶಿಕ್ಷಣ ನೀಡುವ ಅಂಗವಿಕಲರಿಗೆ ವೃದ್ದರಿಗೆ ಹಾಗೂ ವಿಧವೆಯರಿಗೆ ಮಾಶಾಸನ ಮುಂತಾದ ಸಾಮಾಜಿಕ ಕಾರ್ಯಗಳನ್ನು ಯಾವುದೆ ಪ್ರತಿಫಲಾಪೇಕ್ಷೆಯಿಲ್ಲದೆ ಸಂಸ್ಥೆ ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ಯೋಜನಾ ನಿರ್ದೇಶಕ ಬಿ.ವಸಂತ್ ಮಾತನಾಡಿ, ಕಳೆದ 4 ವರ್ಷಗಳಿಂದ ಕೆರೆಗಳ ಪುನಶ್ಚೇತನ ಕಾರ್ಯಕ್ರಮ ನಡೆಯುತಿದೆ. ಕಳೆದ ಮಳೆಗಾಲದಲ್ಲಿ ಪುನಶ್ಚೇತನಗೊಂಡ ಎಲ್ಲ ಕೆರೆಗಳು ತುಂಬಿವೆ. ಇದರಿಂದಾಗಿ ಬತ್ತಿ ಹೋಗಿದ್ದ ಅನೇಕ ಕೊಳವೆ ಬಾವಿಗಳೂ ಮರುಜೀವ ಪಡೆದುಕೊಂಡಿವೆ. ರೈತರು ಕೃಷಿ ಕಾರ್ಯ ಪ್ರಾರಂಭಿಸಿದ್ದಾರೆ. ಜಾನುವಾರು, ಪ್ರಾಣಿ, ಪಕ್ಷಿಗಳ ನೀರಿನ ಸಮಸ್ಯೆಯೂ ನಿವಾರಣೆಯಾಗಿದೆ. ಕೊತ್ತನೂರು ಕೆರೆಯ ಪುನಶ್ಚೇತನದಿಂದ ಈ ಭಾಗದ ಜನ ಜಾನುವಾರುಗಳಿಗೂ ಸಾಕಷ್ಟು ಅನುಕೂಲವಾಗಲಿದೆ ಎಂದರು.
ತಹಶೀಲ್ದಾರ್ ಬಿ.ಎಸ್. ರಾಜೀವ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪಿಡಿಒ ಅಶ್ವತ್ಥಪ್ಪ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಸುರೇಶ್, ವೆಂಕಟಸ್ವಾಮಿರಡ್ಡಿ, ಸುಭ್ರಮಣಿ, ಕೆರೆ ಸಮಿತಿ ಅಧ್ಯಕ್ಷ ಪಂಚಾಕ್ಷರಿ ರೆಡ್ಡಿ, ಪ್ರಾದೇಶಿಕ ನಿರ್ದೇಶಕ ಸೀನಪ್ಪ, ದೇವರಾಜು, ಚಂದ್ರಪ್ಪ, ದೇವರಾಜು, ಜ್ಞಾನೇಶ್ ಮುಂತಾದವರು ಹಾಜರಿದ್ದರು.
ವರದಿ: ಕೆ.ಮಂಜುನಾಥ್.ಶಿಡ್ಲಘಟ್ಟ
ಸುದ್ದಿ
ಕೋಲಾರ ತಾಲ್ಲೂಕು ಮುಳವಾಡ ಗ್ರಾಮ ಘಟಕ ಪದಾಧಿಕಾರಿಗಳ ಆಯ್ಕೆ
ಕೋಲಾರ : ತಾಲ್ಲೂಕು ಮುಳವಾಡ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ರೀ ಕ್ರಾಂತಿ ರಾಜ್ಯಾಧ್ಯಕ್ಷರ ಮಾರ್ಗದಂತೆ ಕೋಲಾರ ತಾಲ್ಲೂಕು ಮುಳವಾಡ ಗ್ರಾಮ ಘಟಕ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾರ್ಯಾಧ್ಯಕ್ಷ ರದ ದೇವು ಕೂಚಬಾಳ ಮಾತನಾಡಿದರು ರಾಜ್ಯದಲ್ಲಿ ನಮ್ಮ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ರಾಜ್ಯಾಧ್ಯಕ್ಷರಾದ ವೈ ಕೊಟ್ರೇಶ್ ಸರ್ ಏನೋ 1 ಸಮಸ್ಯೆ ಆದ್ರೆ ಕೂಡ್ಲೆ ನಮಗೆ ಸ್ಪಂದಿಸುತ್ತಾರೆ ಮತ್ತು ನಾವು ಯುವಕರು ಮುಂದೆ ಬರೋಣ ಮತ್ತು ನಮ್ಮ ಭೋವಿ ಅಭಿವೃದ್ಧಿ ನಿಗಮದಿಂದ ನಮಗೆ ಸಿಗುವಂಥ ಸಹಾಯ ಸೌಲಭ್ಯಗಳು ಸಿಗುತ್ತಿಲ್ಲ ಆದಕಾರಣ ನಾವು ಹೋರಾಟ ಮಾಡೋಣ ಮತ್ತು ನಮ್ಮ ಮಕ್ಕಳಿಗೆ ಶಿಕ್ಷಣ ಕೊಡೋಣ ಎಂದು ಹೇಳಿದರು ಮುದ್ದೇಬಿಹಾಳ ತಾಲ್ಲೂಕು ಸಂಚಾಲಕರಾದ ಆನಂದ ವಡ್ಡರ ತಾಳಿಕೋಟೆ ತಾಲ್ಲೂಕು ಅಧ್ಯಕ್ಷರಾದ ಶ್ರೀನಿವಾಸ್ ಕುಲಕರ್ಣಿ ಮತ್ತು ಮುಳವಾಡ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಅಂಕುಶ್ ತಿರುಪತಿ ಬಂಡಿವಡ್ಡರ .ಅಧ್ಯಕ್ಷರು ಭರತ್ ಬಂಡಿವಡ್ಡರ ಉಪಾಧ್ಯಕ್ಷರು ರಾಘವೇಂದ್ರ ಬಂಡಿವಡ್ಡರ ಕಾರ್ಯದರ್ಶಿ ವಿನೋದ್ ಬಂಡಿವಡ್ಡರ ಪ್ರಧಾನ ಕಾರ್ಯದರ್ಶಿ ಶಶಿಕಾಂತ್ ಬಂಡಿವಡ್ಡರ ಖಜಾಂಚಿ ಇನ್ನೂರು ಯುವಕರು ಉಪಸ್ಥಿತರಿದ್ದರು.
ವರದಿ : ದೇವು ಕೂಚಬಾಲ
ಸುದ್ದಿ
ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಬಾಗೇಪಲ್ಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸ್ವಗೃಹದಿಂದ ಪಾದಯಾತ್ರೆ ಪ್ರಾರಂಭಿಸಿ ಪಟ್ಟಣದ ಬಸ್ ನಿಲ್ದಾಣದವರಿಗೆ ನಡೆದ ಪ್ರತಿಭಟನಾ ಮೆರವಣಿಗೆ ನಡೆಸಿದರು.
ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ನರೇಂದ್ರ ಮಾತನಾಡಿ
ತೈಲ ದರ ಹಾಗೂ ಗ್ಯಾಸ್ ಸಿಲಿಂಡರ್ ದರ ಏರಿಕೆಯಿಂದ ಜನಕ್ಕೆ ಸಂಕಷ್ಟ ಎದುರಾಗಿದೆ. ಜನರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ
ಸರ್ಕಾರಗಳು ಮಾಡುತ್ತಿದೆ. ಈ ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಕಾಳಜಿ ಇಲ್ಲವಾಗಿದೆ ಎಂದು ಕಿಡಿಕಾರಿದರು.
ನಂತರ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಚಿಕ್ಕಬಳ್ಳಾಪುರಕ್ಕೆ ಅಲ್ಲಿ ಪಾದಯಾತ್ರೆ ಪಾಲ್ಗೊಳ್ಳಲು ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ತಾ.ಪ.ಅಧ್ಯಕ್ಷ ಕೆ.ಆರ್.ನರೇಂದ್ರ ಬಾಬು,ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ಪುರಸಭೆ ಸದಸ್ಯ ನಂಜುಂಡಪ್ಪ, ಶ್ರೀನಿವಾಸ್ ರೆಡ್ಡಿ, ಮಂಜುನಾಥ ರೆಡ್ಡಿ, ಕೆ.ಡಿ.ಪಿ.ಸದಸ್ಯ ಅಮರ್ ನಾಥ್ ರೆಡ್ಡಿ, ಪುರಸಭೆ ಅದ್ಯಕ್ಷೆ ಗುಲ್ನಾಜ್ ಬೇಗಂ, ಉಪಾಧ್ಯಕ್ಷ ಶ್ರೀನಿವಾಸ್, ನಜರತ್ ಬೇಗಂ, ಸೋಮಶೇಖರ್, ಬಿ.ವಿ.ವೆಂಕಟರವಣ, ನಿಜಾಮುದ್ದೀನ್,ಅನ್ಸರ್ ಪಾಷಾ,ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.