Connect with us
Ad Widget

ರಾಜ್ಯ

ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ

Published

on

ಬೆಂಗಳೂರು : ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ರಾಜ್ಯ

ಗೌಸನಗರ ಗ್ರಾಮದಲ್ಲಿ ಅರಣ್ಯ ಇಲಾಖೆ ಸಂಬಂಧಿಸಿದ ಜಮೀನಿನಲ್ಲಿ ಅಕ್ರಮವಾಗಿ ಮೊರಂ ಟಿಪ್ಪರ್ ಗಳಿಂದ ಮಾರಾಟ

Published

on

ರಾಯಚೂರು ಮಾ.2- ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗೌಸನಗರ ಗ್ರಾಮದಲ್ಲಿ ಅರಣ್ಯ ಇಲಾಖೆ ಸಂಬಂಧಿಸಿದ ಸರ್ವೆ ನಂ.42/1 ರಲ್ಲಿ 72 ಎಕರೆ 7 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ಅನುಕೃತಕವಾಗಿ ಮೊರಂ ಟಿಪ್ಪರ್ ಗಳ ಮೂಲಕ ಮಾರಾಟ ಮಾಡುತ್ತಿರು ಗೌಸನಗರ ಗ್ರಾಮದ ನಿವಾಸಿಯಾದ ನರಸಿಂಹಲು ತಂದೆ ತಿಮ್ಮಪ್ಪ ಇವರ ಮೇಲೆ ಸೂಕ್ತ ಕಾನೂನು ಕ್ರಮಕೆ ಒತ್ತಾಯಿಸಿದರು. ಅವರು ಸೋಮವಾರ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಆ ಗ್ರಾಮದ ಜನರು ಹಲವಾರು ಬಾರಿ ಅವರಿಗೆ ವಿಚಾರಿಸಿದರೆ ಅದಕ್ಕೆ ಅವರು ನೀವು ಯಾರು ನನ್ನನ್ನು ಕೇಳುವುದಕ್ಕೆ ಸರಕಾರದವರೇ ನನ್ನನ್ನು ಕೇಳುವುದಿಲ್ಲ ಅಂಥದರಲ್ಲಿ ನೀವು ಯಾರು ನನಗೆ ಕೇಳುವುದಕ್ಕೆ ನಾನು ಹೀಗೆ ಮಾಡುತ್ತೇನೆ ನನಗೆ ರಾಜಕೀಯ ಬೆಂಬಲವಿದೆ ನನ್ನ ಮೇಲೆ ಯಾರಿಗಾದರೂ ಕಂಪ್ಲೇಟ್ ಮಾಡಿಕೊಳ್ಳಿ ಎಂದು ರಾಜ ರೋಷವಾಗಿ ದರ್ಪದಿಂದ ಹೇಳುತ್ತಾನೆ.ಅವರು ಈಗಾಗಲೇ 35 ಲಕ್ಷ ರೂ. ಗಳ ಮೊರಂ ಮಾರಾಟ ಮಾಡಿರುತ್ತಾರೆ. ಸರಕಾರ ಜಮೀನ ಆಗಿರುವುದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಈಗಾಗಲೇ ಅಕ್ರಮ ಸಕ್ರಮ ದಲ್ಲಿ ಅರ್ಜಿಗಳನ್ನು ಹಾಕಿರುತ್ತಾರೆ. ನಾಳೆ ಅವರಿಗೆ ಇದೆ ಜಮೀನು ಬಂದಾಗ ಫಲವತ್ತಾದ ಮಣ್ಣನ್ನು ಕಳೆದುಕೊಂಡು ಮೇಲೆ ಬೆಳೆ ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಅಕ್ರಮವಾಗಿ ಅನಧಿಕೃತವಾಗಿ ಶ್ರೀ ನರಸಿಂಹ ತಂದೆ ತಿಮ್ಮಪ್ಪ ಇವರು ಮೊರಂ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸಬೇಕು, ಮತ್ತು 32 ಲಕ್ಷ ರೂ.ಗಳನ್ನು ವಶ ಪಡಿಸಿಕೊಳ್ಳಬೇಕು, ಹಾಗೂ ಅವರ ಮೇಲೆ ಕಾನೂನುಕ್ರಮ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ ವಹಿಸಿದರೇ ನಮ್ಮ ಗ್ರಾಮಸ್ಥರಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ನಿವಾಸಿಗಳಾದ ಅಂಜನಯ್ಯ, ತಿಮ್ಮಪ್ಪ, ಯುವರಾಜ್, ಶಿವಪ್ಪ, ವೀರೇಶ್, ರಾಮಚಂದ್ರ, ನಾಗರಾಜ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಭೋವಿ ಮಸ್ಕಿ

Continue Reading

ರಾಜ್ಯ

ಬಳಗಾನೂರಿನ ವಿದ್ಯಾರ್ಥಿಗಳು ಖೋ ಖೋ ವಿಭಾಗದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Published

on

ಮಸ್ಕಿ :- ಲಿಂಗಸುಗೂರು ತಾಲೂಕಿನ ಚಿತಾಪೂರದಲ್ಲಿ ನಡೆದ ರಾಯಚೂರು ಜಿಲ್ಲಾ ಅಮೆಚೂರ್ ಖೋ ಖೋ ಅಸೋಸಿಯೇಷನ್ ಆಶ್ರಯದಲ್ಲಿ ಪೆ.26 ರಂದು ನಡೆದ ಪುರುಷರ ಸಿನಿಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಪಟ್ಟಣ ಬಳಗಾನೂರಿನ ( ರಾಜು ಮಸ್ಕಿ /ಬದ್ರಪ್ಪ ) ಮತ್ತು ( ಶಿವಲಿಂಗ ಭೋವಿ / ಮುದುಕಪ್ಪ ) ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ .

ಈ ಸಂದರ್ಭದಲ್ಲಿ ತರಬೇತಿ ನೀಡಿದ ತರಬೇತಿದಾರರಾದ ಸರಕಾರಿ ಪ್ರೌಢ ಶಾಲೆ ಬಳಗಾನೂರಿನ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರ ತಿಳಿಸಿದ್ದಾರೆ .

ಜನನಿ ಪದವಿ ಪೂರ್ವ ಕಾಲೇಜಿನ ವಿದ್ಯಾಭ್ಯಾಸ ಮಾಡುತ್ತಿರುವ ರಾಜು ಮಸ್ಕಿ ವಿದ್ಯಾರ್ಥಿಯ ಸಾಧನೆಗೆ ಪ್ರಾಚಾರ್ಯರಾದ ತಿರುಪತಿ ಸರ್ ಹಾಗೂ ಆಡಳಿತ ವರ್ಗವು ರಜಾಕ್ ಪಾಷ ಸರ್ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.

ಮಾಚ್೯ 6 ಮತ್ತು 7 ರಂದು ಧಾರವಾಡದ ಸೌಂಸಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪುರುಷರ ಸಿನಿಯರ್ ಹೊನಲು ಬೆಳಕಿನ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾ ಪಟುಗಳಿಗೆ ಪಟ್ಟಣದ ಎಲ್ಲಾ ಗುರು ಹಿರಿಯರು, ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಹಷ೯ ವ್ಯಕ್ತಪಡಿಸಿದ್ದಾರೆ.

ವರದಿ : ದುರ್ಗೇಶ್ ಭೋವಿ ಮಸ್ಕಿ

Continue Reading

ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Published

on

ಬಾಗೇಪಲ್ಲಿ: ಪೆಟ್ರೋಲ್ ಡೀಸೆಲ್,ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘ ನೇತೃತ್ವದಲ್ಲಿ ಬಾಗೇಪಲ್ಲಿ ಡಾ.ಎಚ್.ಎನ್ ವೃತದಿಂದ ಮೆರವಣಿಗೆ ಹೊರಟು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ಡೀಸೆಲ್ ದರ ಏರಿಕೆಯಿಂದ ಜನ ಸಾಮಾನ್ಯರ ಜೀವನ ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಭಾರತದಲ್ಲಿ ಜೀವನ ಮಾಡೋದೇ ಕಷ್ಟವಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇಲ್ಲ ಎಂದು ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ಸಿಪಿಐಎಂ ಪಕ್ಷದ ಮುಖಂಡ ಹಾಗೂ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ರಾಜ್ಯ ಸಂಚಾಲಕ ಪಿ.ಎಂ.ಮುನಿವೆಂಕಟಪ್ಪ ಮಾತನಾಡಿ ಕೋವಿಡ್‌ ಲಾಕ್‌ಡೌನ್‌ ನಂತರ ಚಾಲಕರ ಜೀವನ ಮತ್ತಷ್ಟು ಹದಗೆಟ್ಟಿದೆ. ಸರ್ಕಾರವು ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುತ್ತಲೇ ಇದೆ. ಕೇವಲ ಚಾಲಕರಷ್ಟೇ ಅಲ್ಲ, ಅಡುಗೆ ಸಿಲಿಂಡರ್‌ ದರ ಕೂಡ ಏರಿಸುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದರು.

ಇಂತಹ ಸಂಕಷ್ಟದ ನಡುವೆ ರಾಜ್ಯ ಸರ್ಕಾರವು ಟಿ.ವಿ, ಬೈಕ್ ಇರುವವರ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ನೀಡಿರುವ ಹೇಳಿಕೆಯಿಂದ ಬಡವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ. ಅಗತ್ಯ ವಸ್ತುಗಳು, ತೈಲ ಬೆಲೆ ಇಳಿಸಬೇಕು. ಮಾರ್ಚ್ 4ರ ಗಡುವಿನೊಳಗೆ ಸರ್ಕಾರ ಚಾಲಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧ ಚಲೋ ನಡೆಸಲಾಗುವುದು’ ಎಂದು ತಿಳಿಸಿದರು.

ಎಡಪಂಥೀಯ ಚಿಂತಕ ಹಾಗೂ ಪ್ರಜಾ ವೈದ್ಯ ಡಾ.ಅನಿಲ್ ಕುಮಾರ್ ಅವುಲಪ್ಪ ಮಾತನಾಡಿ
ಕೊರೊನಾ ಬಳಿಕ ಪುನಶ್ಚೇತನದ ಹಾದಿ ತುಳಿದಿರುವ ಸಾಮಾನ್ಯರ ಜೀವನ ಹಾಗೂ ಆರ್ಥಿಕ ಸ್ಥಿತಿಗತಿಯ ಮೇಲೆ ಪೆಟ್ರೋಲ್ ಬೆಲೆ ಏರಿಕೆಯು ಬರೆ ಎಳೆದಂತಾಗಿದೆ. ಗ್ಯಾಸ್ ಸಿಲಿಂಡರ್, ಅಗತ್ಯ ವಸ್ತುಗಳ ದರ ಹೆಚ್ಚಳದಿಂದ ಜನರು ತತ್ತರಿಸಿ ಹೋಗಿದ್ದಾರೆ. ಜೊತೆಗೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೂ ಹೆಚ್ಚಾಗಿರುವುದು ಜೀವನ ನಿರ್ವಹಣೆಗೆ ಕಠಿಣ ಸವಾಲು ಹಾಕಿದಂತಾಗಿದೆ ಎಂದು ಹೇಳಿದರು.
ಪ್ರತಿಭಟನೆಯ ನಂತರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಾ.ಅನಿಲ್ ಕುಮಾರ್ ಅವುಲಪ್ಪ, ಮಂಜುನಾಥ ರೆಡ್ಡಿ, ಸಾವಿತ್ರಮ್ಮ, ಮುನಿವೆಂಕಟಪ್ಪ, ಅಶ್ವಥಪ್ಪ, ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್