Politics
ಪುರಸಭೆಯ ಸ್ಥಾಯಿ ಸಮಿತಿಗೆ ಎ.ನಂಜುಂಡಪ್ಪ ಅವಿರೋಧ ಆಯ್ಕೆ
ಬಾಗೇಪಲ್ಲಿ: ಪಟ್ಟಣದ ಪುರಸಭೆ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎ.ನಂಜುಂಡಪ್ಪ ಶನಿವಾರ ಅವಿರೋಧವಾಗಿ ಆಯ್ಕೆಯಾದರು.
ಶನಿವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ 7 ನೇ ವಾರ್ಡಿನ ಸದಸ್ಯರಾದ ಎ.ನಂಜುಂಡಪ್ಪರವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಇದರ ಹಿನ್ನೆಲೆಯಲ್ಲಿ ಎ.ನಂಜುಂಡಪ್ಪ ಅವಿರೋಧವಾಗಿ ಆಯ್ಕೆಯಾದರು.
ಶಾಸಕರು ಅಭಿನಂದನೆ: ಆಯ್ಕೆಯ ಬಳಿಕ ಶಾಸಕ ಎಸ್. ಎನ್.ಸುಬ್ಬಾರೆಡ್ಡಿಯವರು ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಎ.ನಂಜುಂಡಪ್ಪ ಅಭಿನಂದಿಸಿದರು. ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲಾ ಸದಸ್ಯರಿಗು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮುಂದಿನ ದಿನದಲ್ಲಿ ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಪುರಸಭೆ ಎಲ್ಲಾ ವಾರ್ಡ್‌ಗಳ ಅಭಿವೃದ್ಧಿಗೆ ಕೈ ಜೋಡಿಸಬೇಕಿದೆ. ಪುರಸಭೆ ಈ ರಾಜ್ಯದಲ್ಲಿ ಮಾದರಿಯಾಗಿಸಲು ಶ್ರಮಿಸಬೇಕು ಎಂದು ಹೇಳಿದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪಂಕಜಾರೆಡ್ಡಿ ಪುರಸಭೆ ಉಪಾಧ್ಯಕ್ಷ ಎ.ಶ್ರೀನಿವಾಸ್ ಸದಸ್ಯರಾದ ಕೆ.ಎ.ಶ್ರೀನಾಥ್, ನಾಗರತ್ನಮ್ಮ,ರೇಷ್ಮಾ ಬಾನು,ಸುಜಾತ.ಎಸ್, ಬಿ.ಎ.ನರಸಿಂಹಮೂರ್ತಿ, ರಮೇಶ್ ಬಾಬು,ಎಸ್.ನೂರುಲ್ಲಾ,ಪಿ.ವಿ.ಮಧುಸೂದನ ರೆಡ್ಡಿ , ನಿಸಾರ್ ಅಹ್ಮದ್, ಮಾಜಿ ಪುರಸಭೆ ಅದ್ಯಕ್ಷ ಬಿ.ಆರ್.ನರಸಿಂಹ ನಾಯ್ಡು, ಕೆ.ಡಿ.ಪಿ.ಸದಸ್ಯ ಅಮರನಾಥ ರೆಡ್ಡಿ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.
Politics
ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು
ಬಾಗೇಪಲ್ಲಿ: ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ತಾಲ್ಲೂಕು ದಂಡಾಧಿಕಾರಿಗಳಾದ ಡಿ.ಎ.ದಿವಾಕರ್ ಹೇಳಿದರು.
ಅವರು ತಾಲ್ಲೂಕಿನ ಗೂಳೂರು ಹೋಬಳಿಯ ಗೊರ್ತಪಲ್ಲಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮನ್ನು ಇಂದು ಉದ್ಘಾಟಿಸಿ ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರ್ಕಾರ ರೂಪಿಸಿರುವ ‘ಅಧಿಕಾರಿಗಳ ನಡೆ ಗ್ರಾಮದ ಕಡೆಗೆ’ ಕಾರ್ಯಕ್ರಮ ಬಹಳ ಹಿಂದಿನಿಂದ ಇದೆ. ಬೇರೆ ಬೇರೆ ಸರ್ಕಾರಗಳ ಅವಧಿಯಲ್ಲಿ ಬೇರೆ ಹೆಸರು ನೀಡುತ್ತ ಬರಲಾಗಿದೆ.
ತಾಲೂಕು ಮಟ್ಟದ ಹಾಗು ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಜನರ ಮಧ್ಯೆ ಇಳಿದು ಕೆಲಸ ಮಾಡಬೇಕು. ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡ್ತಾ ಇದ್ದೇವೆಯೇ ಎಂದು ಪ್ರತಿಯೊಬ್ಬರೂ ಅವಲೋಕನ ಮಾಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳು ಇದ್ದರೆ, ಅಕ್ರಮಗಳು ಕಂಡು ಬಂದರೆ ಅದನ್ನು ನೇರವಾಗಿ ಸರಿಯಾದ ಮಾರ್ಗದಲ್ಲಿ ಸಂಬಂಧಪಟ್ಟವರ ಗಮನಕ್ಕೆ ತನ್ನಿ ಎಂದು ಅವರು ಹೇಳಿದರು. ಊರಿನ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.
ಪ್ರತಿ ಮನೆ ಮುಂದೆಯೂ ನಿಂತು ಮನೆಯ ಸದಸ್ಯರ ಯೋಗಕ್ಷೇಮ ವಿಚಾರಿಸಿ, ಸಮಸ್ಯೆಗಳಿದ್ದರೆ ತಿಳಿಸಿ ಎಂದು ಕೇಳಿದರು. ಕೆಲವರು ಪಡಿತರ ಚೀಟಿ, ವೃದ್ಧಾಪ್ಯ ವೇತನ ಸಮಸ್ಯೆಗಳ ಕಡೆಗೆ ಗಮನ ಸೆಳೆದರು. ನೀರಿನ ಸಮಸ್ಯೆ. ರಸ್ತೆ ಸಮಸ್ಯೆ ಪರಿಹರಿಸುವಂತೆ ಕೆಲವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸಿ.ಎನ್.ಸತ್ಯನಾರಾಯಣ ರೆಡ್ಡಿ
ಕಾರ್ಯನಿರ್ವಾಹಣಾಧಿಕಾರಿಗಳಾದ ಮಂಜುನಾಥ ಸ್ವಾಮಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿರ್ಮಲಾ ಬಾಯಿ
ಶ್ರೀನಿವಾಸ ನಾಯಕ್ , ಉಪಾಧ್ಯಕ್ಷರಾದ ರೇಣುಕಾ
ಶ್ರೀನಿವಾಸನಾಯಕ್ , ಸದಾಶಿವಾರೆಡ್ಡಿ ಲಕ್ಷ್ಮೀನಾರಾಯಣ ಸೋಮಶೇಖರ್ ಹಾಗೂ ಗೊರ್ತಪಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
Politics
ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಕೋಟಿ 86 ಲಕ್ಷ 30 ಸಾವಿರ ರೂಗಳ ಸಾಲ ವಿತರಣೆ
ಶಿಡ್ಲಘಟ್ಟ :ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ(ನಿ) ವತಿಯಿಂದ 41 ಮಹಿಳಾ ಸ್ವಸಹಾಯ ಸಂಘಗಳಿಗೆ ಇಂದು ಒಂದು ಕೋಟಿ 86 ಲಕ್ಷ 30 ಸಾವಿರ ರೂಗಳ ಸಾಲ ವಿತರಣೆ ಮಾಡಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ನಾಗರಾಜ್ ಮಾತನಾಡಿದರು.
ಮಳ್ಳೂರು ಎಸ್.ಎಫ್.ಸಿ.ಎಸ್. ಬ್ಯಾಂಕ್ ನಿಂದ ಈಗಾಗಲೇ ಮಹಿಳೆಯರಿಗೆ ಹಾಗೂ ರೈತರಿಗೆ ಸಾಲವಾಗಿ ಸುಮಾರು ಹತ್ತು ಕೋಟಿ ರೂಗಳನ್ನು ವಿತರಿಸಲಾಗಿದೆ. ನಗರ ಎಸ್.ಎಫ್.ಸಿ.ಎಸ್.ಬ್ಯಾಂಕ್ ನಿಂದ 17 ಕೋಟಿ ರೂಗಳ ಸಾಲ ವಿತರಣೆ ಮಾಡಲಾಗಿದೆ, ಡಿಸಿಸಿ ಬ್ಯಾಂಕ್ ಮಹಿಳೆಯರಿಗೆ ಹೆಚ್ಚೆಚ್ಚು ಸಾಲ ನೀಡುತ್ತಿದ್ದು, ಶಿಡ್ಲಘಟ್ಟ ತಾಲ್ಲೂಕಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸಾಲ ವಿತರಣೆ ಮಾಡಿದ ಕೀರ್ತಿ ಅಧ್ಯಕ್ಷ ಗೋವಿಂದೇಗೌಡರಿಗೆ ಸಲ್ಲುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಮಹಿಳೆಯರು ಶೇಕಡ 75 ರಷ್ಟು ಮರು ಪಾವತಿ ಮಾಡಿದ್ದರೆ. ಮಹಿಳೆಯರಿಗೆ ಅನುಕೂಲವಾಗಲು ಮೈಕ್ರೋ ಎಟಿಎಂ ವಾಹನವನ್ನು ನಿಮ್ಮ ಬಳಿಗೆ ಬರುವಂತೆ ಮಾಡಲಾಗಿದೆ. ತಾಲ್ಲೂಕಿನ ಮಹಿಳೆಯರು ಉದ್ದೇಶಿತ ಯೋಜನೆಗೆ ಸಾಲದ ಹಣ ಬಳಸಿಕೊಂಡು ಸಕಾಲದಲ್ಲಿ ಬ್ಯಾಂಕ್‌ಗೆ ಮರುಪಾವತಿ ಮಾಡಬೇಕು. ಜೊತೆಗೆ ತಮ್ಮ ಉಳಿತಾಯದ ಹಣವನ್ನು ನಿಮ್ಮ ಎಸ್.ಎಫ್.ಸಿ.ಎಸ್. ಬ್ಯಾಂಕ್‌ನಲ್ಲೆ ಇಟ್ಟು ನಿಮಗೆ ಬೇಕಾದಾಗ ಹಣ ಪಡೆದುಕೊಳ್ಳಬಹುದು ಎಂದರು.
ಮಳ್ಳೂರು ಎಸ್‌ಎಫ್‌ಸಿಎಸ್ ಅಧ್ಯಕ್ಷ ರಾಮರೆಡ್ಡಿ ಮಾತನಾಡಿ, ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಬ್ಯಾಂಕ್ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಬ್ಯಾಂಕ್ ಉತ್ತಮವಾಗಿ ನಡೆಯಲು ಸಾಧ್ಯವಾಗಿದೆ ಎಂದರು.
ಎಸ್‌ಎಫ್‌ಸಿಎಸ್ ಉಪಾದ್ಯಕ್ಷ ಸಿ.ನಾರಾಯಣಸ್ವಾಮಿ, ಗ್ರಾಮದ ಮುಖಂಡ ಎಂ.ಆರ್.ಮುನಿಕೃಷ್ಣಪ್ಪ, ನಿರ್ದೇಶಕರಾದ ಭಕ್ತರಹಳ್ಳಿ ಕೆ.ಮುನಿರಾಜು, ಶಾಂತಮ್ಮ, ಮಳ್ಳೂರು ಪದ್ಮಮ್ಮ, ಕಾರ್ಯನಿರ್ವಾವಹಣಾಧಿಕಾರಿ ಮಂಜುನಾಥ್, ಮೇಲೂರು ವೆಂಕಟರೆಡ್ಡಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಅನಂದ್, ಮೇಲ್ವಿಚಾರಕ ಶ್ರೀನಾಥ್ ಸೇರಿದಂತೆ ಮುಂತಾದವರು ಹಾಜರಿದ್ದರು.
ವರದಿ.ಕೆ.ಮಂಜುನಾಥ್.ಶಿಡ್ಲಘಟ್ಟ
Politics
ಎನ್.ಎಸ್.ಎಸ್ ಘಟಕ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
2020 – 21ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಎನ್.ಎಸ್.ಎಸ್ ಘಟಕ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಹಾವೇರಿ : ಇಂದು ಹಿರೇಕೆರೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆದ, 2020 – 21ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಎನ್.ಎಸ್.ಎಸ್ ಘಟಕ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕೃಷಿ ಸಚಿವರಾದ ಬಿಸಿ ಪಾಟೀಲ್ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ್, ಸಮಾಜದ ಗಣ್ಯರು, ಮುಖಂಡರು, ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
-
Uncategorized5 days ago
ದೇಶದ ಮೊಟ್ಟಮೊದಲ ಹೊಗೆ ರಹಿತ ಗ್ರಾಮದಲ್ಲಿ ಮತ್ತೆ ಹೊಗೆ.?!
-
Politics4 weeks ago
ಬಾಗೇಪಲ್ಲಿ ತಾಲ್ಲೂಕು ಶಾಸಕರಿಂದ ಉಚಿತ ಡಿಜಿಟಲ್ ಸೇವಾ ಕೇಂದ್ರಕ್ಕೆ ಚಾಲನೆ
-
Politics3 weeks ago
ಸರ್ಕಾರದ ಸೌಲಭ್ಯಗಳನ್ನು ಬಡವರಿಗೆ ತಲುಪಿಸುವ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ
-
ಸುದ್ದಿ3 weeks ago
ಬಾಗೇಪಲ್ಲಿ ತಾಲ್ಲೂಕು ಕಚೇರಿ ಕಟ್ಟಡ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ