ಕ್ರೀಡೆ
ಸಚಿನ್ ತೆಂಡೂಲ್ಕರ್ ಗೆ ಕೊರೊನಾ ದೃಢ
ಕೊರೋನಾ 2ನೇ ಅಲೆಯ ಅಬ್ಬರ ಶುರುವಾಗಿದೆ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿವೆ. ಇತ್ತ ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತು ಟ್ವಿಟ್ ಮಾಡಿರುವಂತ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಗೆ ಒಳಗಾದ ನಂತ್ರ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ವೈದ್ಯರ ಸಲಹೆಯ ಮೂಲಕ ಚಿಕಿತ್ಸೆ ಪಡೆಯುತ್ತಿರುವುದಾಗಿ
ಕ್ರೀಡೆ
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಶ್ರೀ ಮರಿಬಸವ ಲಿಂಗೇಶ್ವರ ತಾತನವರು ತಿಳಿಸಿದರು.
ಮಸ್ಕಿ :- ತಾಲೂಕಿನ ಬೆಳ್ಳಿಗನೂರು ಗ್ರಾಮದಲ್ಲಿ ಗುರುವಾರ ನಡೆದ ಮರಿಬಸವ ಲಿಂಗೇಶ್ವರ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ವನ್ನು, ಶ್ರೀ ಮರಿಬಸವ ಲಿಂಗೇಶ್ವರ ತಾತನವರು ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಅದನ್ನು ಸಮಾನವಾಗಿ ಸ್ವೀಕರಿಸಬೇಕು ಯುವಕರು ದುಶ್ಚಟದಿಂದ ದೂರ ಇರಬೇಕು, ಉತ್ತಮ ಆರೋಗ್ಯ ಕಾಪಾಡಲು ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗಿಯಾಗಬೇಕು, ಕ್ರೀಡಾ ಚಟುವಟಿಕೆಯಲ್ಲಿ ಬಾಗಿ ಆಗುವುದರಿಂದ ಮನಸ್ಸು ಮತ್ತು ದೇಹ ಸದೃಢವಾಗಿ ಬೆಳೆಯುತ್ತದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಮರಿ ಬಸವಲಿಂಗ ತಾತನವರ ಉಟಕನೂರು, ಮಾಂತೇಶ್ ಜಾಲವಾಡಗಿ, ಶರಣಪ್ಪ ಐರೆಡ್ಡಿ, ಶರಭಯ್ಯ ತಾತ, ಕೆಂಚನಗೌಡ, ಸಿದ್ದಯ್ಯ ತಾತ, ಪಂಪಾಪತಿ ಗದ್ದಿ, ಶೇಖರಪ್ಪ, ಬೀರಪ್ಪ ಅಗಸಿಮನಿ, ರವಿಕುಮಾರ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ, ಚಂದ್ರು, ದೇವರಾಜ್ ಪೊಲೀಸ್ ಪಾಟೀಲ್, ಸೇರಿದಂತೆ ಅನೇಕ ಕ್ರೀಡಾಪಟುಗಳು ಬೆಳ್ಳಿಗನೂರ್ ಗ್ರಾಮಸ್ಥರು ಭಾಗಿಯಾಗಿದ್ದರು.
ವರದಿ : ದುರ್ಗೇಶ್ ಭೋವಿ ಮಸ್ಕಿ
ಕ್ರೀಡೆ
ಐಪಿಎಲ್ ಆಟಗಾರರ ಹರಾಜು
14ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಯು ಇಂದು ನಡೆಯಲಿದೆ. ಈ ಹರಾಜು ಪ್ರಕ್ರಿಯೆಗೆ 292 ಆಟಗಾರರು ಹೆಸರು ಅಂತಿಮಗೊಳಿಸಿದ್ದು, ಈ ಪೈಕಿ 164 ಭಾರತೀಯ ಕ್ರಿಕೆಟಿಗರು ಹಾಗೂ 128 ಮಂದಿ ವಿದೇಶಿ ಆಟಗಾರರಿದ್ದಾರೆ. ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಮ್ಯಾಕ್ಸ್ವೆಲ್, ಇಂಗ್ಲೆಂಡ್ ನ ಆಲ್-ರೌಂಡರ್ ಮೋಹಿನ್ ಅಲಿ ಫ್ರಾಂಚೈಸಿಗಳ ಗಮನ ಸೆಳೆಯುವ ಸಾಧ್ಯತೆಗಳಿವೆ. ಕಳೆದ ಬಾರಿ ಕರೋನವೈರಸ್ ಭೀತಿಯಿಂದ 13ನೇ ಐಪಿಎಲ್ ಟೂರ್ನಿಯನ್ನು ವಿದೇಶದಲ್ಲಿ ನಡೆಸಲಾಗಿತ್ತು, ಆದರೆ ಇದೀಗ ಏಪ್ರಿಲ್ ಎರಡನೇ ವಾರದಿಂದ ಭಾರತದಲ್ಲಿ ಟೂರ್ನಿ ಆರಂಭಿಸಲು ಸಿದ್ಧತೆಗಳು ನಡೆಯುತ್ತಿವೆ.
ಕ್ರೀಡೆ
ಕನ್ನಡಿಗ ಜಾವಗಲ್ ಶ್ರೀನಾಥ್ ದಾಖಲೆಯನ್ನು ಮುರಿದ ಬೂಮ್ರಾ
ಚೆನ್ನೈ: ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶಿಷ್ಟ ದಾಖಲೆ ಬರೆದರು. ಅವರು ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ 17 ಪಂದ್ಯಗಳ ಬಳಿಕ ತವರಿನಲ್ಲಿ ಆಡಿದರು. ಬುಮ್ರಾ 2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್‌ಟೌನ್‌ನಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ 17 ಟೆಸ್ಟ್ ಪಂದ್ಯಗಳಿಂದ 79 ವಿಕೆಟ್ ಕಬಳಿಸಿದ್ದಾರೆ. ಇದಕ್ಕೂ ಮೊದಲು ಕನ್ನಡಿಗ ಜಾವಗಲ್ ಶ್ರೀನಾಥ್ 12 ಟೆಸ್ಟ್ ಪಂದ್ಯಗಳ ಬಳಿಕ ತವರಿನಲ್ಲಿ ಆಡಿದ್ದರು. ಇದೀಗ ಮೈಸೂರು ಎಕ್ಸ್‌ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಹೆಸರಿನಲ್ಲಿದ್ದ ದಾಖಲೆಯನ್ನು ಬುಮ್ರಾ ಹಿಂದಿಕ್ಕಿದರು.