ಮನರಂಜನೆ
ನಟಿ ಶುಭ್ರ ಅಯ್ಯಪ್ಪ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು : ನಟಿ ಶುಭ್ರ ಅಯ್ಯಪ್ಪ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಶುಭ್ರ ಅಯ್ಯಪ್ಪ 2014ರಂದು ತೆಲುಗಿನಲ್ಲಿ ‘ಪ್ರತಿನಿಧಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.
2015ರಂದು ಕನ್ನಡದಲ್ಲಿ ಹರ್ಷ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾದಲ್ಲಿ ಗೀತಾ ಎಂಬ ಪಾತ್ರದಲ್ಲಿ ನಟಿಸಿದರು. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದರು.
ಮನರಂಜನೆ
‘ಗಿಣಿರಾಮ’ ಧಾರಾವಾಹಿಯ ನಾಯಕಿ ನಯನಾ ನಾಗರಾಜ್ ಗೆ ಕೊರೊನಾ ಪಾಸಿಟಿವ್
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಹೆಚ್ಚುತ್ತಲೇ ಹೋಗುತ್ತಿದೆ. ದಿನದಿನಕ್ಕೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಸಾವುಗಳ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬರುತ್ತಿದೆ.
ಇದೀಗ ‘ಗಿಣಿರಾಮ’ ಧಾರಾವಾಹಿಯ ನಾಯಕಿ ನಯನಾ ನಾಗರಾಜ್ ಅವರು ಕೊರೋನಾ ಸೋಂಕು ತಗುಲಿದೆ. ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯ ತಿಳಿಸಿರುವ ನಟಿ, ‘ಈ ಸೋಂಕು ಹೇಗೆ ಬಂತು ಅನ್ನೋದೇ ತಿಳಿಯುತ್ತಿಲ್ಲ ಎಂದಿದ್ದಾರೆ.
ಮನರಂಜನೆ
ಚಿಕಿತ್ಸೆ ಪಲಿಸದೆ ನಟ ವಿವೇಕ್ ವಿಧಿವಶ
ಚೆನ್ನೈ : ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್ (59) ಚೆನ್ನೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಆಯಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವದಪಳನಿಯಲ್ಲಿರುವ ಎಸ್‌ಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವನ್ನು ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4.35 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.
ಮನರಂಜನೆ
ಹ್ಯಾರಿ ಪಾಟರ್ ಖ್ಯಾತಿಯ ಪೌಲ್ ರಿಟರ್ ನಿಧನ
ಮುಂಬೈ : ಹಾಲಿವುಡ್ನ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಕಲಾವಿದ ಪೌಲ್ ರಿಟರ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಬಹಳ ಕಾಲದಿಂದ ಅವರು ಬ್ರೇನ್ ಟ್ಯೂಮರ್ನಿಂದ ಬಳಲುತ್ತಿದ್ದರು. ಕಡೆಗೂ ಚಿಕಿತ್ಸೆ ಫಲಕಾರಿಯಾಗದೇ ಏ.5ರ ರಾತ್ರಿ ನಿಧನರಾದರು ಎಂದು ಪೌಲ್ ರಿಟರ್ ಪರ ವಕ್ತಾರರು ತಿಳಿಸಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.
1992ರಿಂದ ಸಿನಿಮಾದಲ್ಲಿ ನಟನೆ ಆರಂಭಿಸಿದ ಪೌಲ್ ರಿಟರ್ ಅವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲೂ ಅಭಿನಯಿಸಿದ್ದರು. ಹಾಲಿವುಡ್ನ ಜನಪ್ರಿಯ ‘ಹ್ಯಾರಿ ಪಾಟರ್’ ಸಿನಿಮಾದಲ್ಲಿ ಅವರು ಗಮನಾರ್ಹ ಅಭಿನಯ ನೀಡಿದ್ದರು. ಬ್ರಿಟಿಷ್ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಫೇಮಸ್ ಆಗಿದ್ದ ಪೌಲ್ ರಿಟರ್ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
-
Politics2 weeks ago
ಇಂಡಿ ತಾಲೂಕಿನ ಗಾಣಿಗ ನೌಕರರ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾರ್ಯಕಾರಣಿ ಸಭೆ
-
ಸುದ್ದಿ4 weeks ago
ಎಪ್ರಿಲ್ 1ನ್ನು ಮೂಖ೯ರ ದಿನವೆಂದು ಆಚರಿಸುವ ಬದಲು ಅರವಟ್ಟಿಗೆ ದಿನ ಎಂದು ಆಚರಣೆ
-
ಸುದ್ದಿ2 weeks ago
ಬಾಬಾ ಸಾಹೇಬ್ ಅಂಬೇಡ್ಕರವರ 130ನೇ ಜನ್ಮ ದಿನಾಚರಣೆ
-
ಸುದ್ದಿ3 weeks ago
ಕುಬೇರರಿಗೆ ಎಟುಕುವಷ್ಟು ಸುಲಭವಾಗಿ ಕುರಿಗಾಹಿಗಳಿಗೆ ಸಿಗುತ್ತದೆಯೇ ಈ ಸರ್ಕಾರದ ಸೌಲಭ್ಯ?