Connect with us
Ad Widget

ಕ್ರೀಡೆ

ಪಂಜಾಬ್ ಕಿಂಗ್ಸ್ ವಿರುದ್ಧವೂ ಗೆಲುವಿನ ನಿರೀಕ್ಷೆಯಲ್ಲಿರುವ ರಾಯಲ್ಸ್ ಚಾಲೆಂಜರ್ಸ್

Published

on

ಬೆಂಗಳೂರು : ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ಸ್ ಚಾಲೆಂಜರ್ಸ್ ತಂಡ ಇಂದು ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಾಟವನ್ನು ನಡೆಸಲಿದ್ದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿರುವ ವಿರಾಟ್ ಕೊಹ್ಲಿ ಬಳಗ ಸೋಲಿನ ಮೇಲೆ ಸೋಲು ಕಾಣುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧವೂ ಗೆಲುವಿನ ನಿರೀಕ್ಷೆಯಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯಕ್ಕೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯವನ್ನು ವಹಿಸಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಕ್ರೀಡೆ

6 ಸಾವಿರ ರನ್ ಸರದಾರ ವಿರಾಟ್ ಕೊಹ್ಲಿ

Published

on

ಮುಬೈ : ಐಪಿಎಲ್ ನಲ್ಲಿ 6000 ರನ್ ಕಲೆಹಾಕಿದ ಮೊದಲ ಆಟಗಾರ ಎಂಬ ಹಿರಿಮೆಗೆ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. 5,448 ರನ್ ಗಳಿಸಿರುವ ಚೆನ್ನೈ ತಂಡದ ಸುರೇಶ್ ರೈನಾ ದ್ವಿತೀಯ ಸ್ಥಾನದಲ್ಲಿದ್ದಾರೆ. ಗುರುವಾರ ಮುಂಬೈನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧ ಔಟಾಗದೆ 72 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ಅವರು ನೂತನ ಮೇಲುಗೈ ಸ್ಥಾಪಿಸಿದ್ದಾರೆ.

Continue Reading

ಕ್ರೀಡೆ

ಅಪರೂಪದ ದಾಖಲೆ ಬರೆದ ರಾಯಲ್ ಚಾಲೆಂಜರ್ಸ್ ತಂಡ

Published

on

ಚೆನ್ನೈ: ಭಾನುವಾರ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬೆಂಗಳೂರು ತಂಡ 38 ರನ್‌ ಜಯ ಗಳಿಸಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿ ವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ವಿರಾಟ್ ಕೊಹ್ಲಿ ಪಡೆ ಈ ಸೀಸನ್‌ನ ಮೂರನೇ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್‌ಸಿಬಿ ಅಪರೂಪದ ದಾಖಲೆಗಳಿಗೂ ಕಾರಣವಾಗಿದೆ.

ಐಪಿಎಲ್‌ ಇತಿಹಾಸದಲ್ಲೇ ಆರ್‌ಸಿಬಿ ತಂಡ ಟೂರ್ನಿಯ ಆರಂಭದಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯಿಲ್ಲ. ಆದರೆ ಈ ಬಾರಿ ಆರ್‌ಸಿಬಿ ಟೂರ್ನಿ ಆರಂಭದಲ್ಲೇ ಆಡಿದ ಮೂರೂ ಪಂದ್ಯಗಳನ್ನು ಗೆದ್ದು ಗೆಲುವಿನ ಹುಮ್ಮಸ್ಸಿನಲ್ಲಿದೆ. ಆರ್‌ಸಿಬಿ ಈ ಆಟ ನೋಡಿದರೆ ಈ ಸೀಸನ್‌ನಲ್ಲಿ ಬೆಂಗಳೂರು ಕಪ್‌ ಗೆದ್ದರೂ ಅಚ್ಚರಿಯಿಲ್ಲ.

Continue Reading

ಕ್ರೀಡೆ

ಡೆಲ್ಲಿ ಕ್ಯಾಪಿಟಲ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಕಾದಾಟ

Published

on

ಮುಂಬೈ: ಐಪಿಎಲ್ ಪಂದ್ಯಾವಳಿಯ 14ನೇ ಸೀಸನ್‌ನ ಎರಡನೇ ಪಂದ್ಯವು ಇಲ್ಲಿನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ನಡೆಯಲಿದ್ದು, ಡೆಲ್ಲಿ ಕ್ಯಾಪಿಟಲ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೆಣಸಲಿದೆ.

ಡ್ಯಾಡಿಸ್ ಆರ್ಮಿ ಎಂದೇ ಕರೆಯಲ್ಪಡುತ್ತಿರುವ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ ತಂಡವು ಕಳೆದ ಋತುವಿನಲ್ಲಿ ಆರಬ್‌ರಾಷ್ಟ್ರದಲ್ಲಿ ನಡೆದ ಪಂದ್ಯಾವಳಿಯಲ್ಲಿ ಇಡೀ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದು ಬಿಟ್ಟರೆ ಉಳಿದಂತೆ ತಂಡದ ಪ್ರದರ್ಶನ ಮಾತ್ರ ಉತ್ತಮವಾಗಿದೆ.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್