Politics
ಸರ್ಕಾರಿ ಆಸ್ಪತ್ರೆಗೆ 10 ಆಮ್ಲಜನಕ ಸಿಲಿಂಡರ್ ಹಸ್ತಾಂತರ
ಶಿಡ್ಲಘಟ್ಟ: ನಗರದಲ್ಲಿ ಸೋಮವಾರ ಸರ್ಕಾರಿ ಆಸ್ಪತ್ರೆಗೆ 10 ಆಮ್ಲಜನಕ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡಿ ಕಾಂಗ್ರೆಸ್ ಮುಖಂಡ, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ಮಾತನಾಡಿದರು
ಆಮ್ಲಜನಕ ಈಗ ಅಮೃತ ಸಮಾನವಾಗಿದೆ. ನಮ್ಮ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಯಾರೊಬ್ಬರೂ ಆಮ್ಲಜನಕದ ಕೊರತೆಯಿಂದ ಪ್ರಾಣ ಕಳೆದುಕೊಳ್ಳಬಾರದು ಎಂದು. ಈಗ ಹತ್ತು ಆಮ್ಲಜನಕ ಸಿಲಿಂಡರ್ ಗಳನ್ನು ಸರ್ಕಾರಿ ಆಸ್ಪತ್ರೆಗೆ ನೀಡುತ್ತಿದ್ದು, ಮುಂದಿನವಾರ ಇನ್ನೂ ಹತ್ತು ಸಿಲಿಂಡರ್ ಗಳನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಸರ್ಕಾರ, ವೈದ್ಯಕೀಯ ಸಿಬ್ಬಂದಿ, ತಾಲ್ಲೂಕು ಆಡಳಿತ ಕೋವಿಡ್ ವಿರುದ್ಧ ಹಗಲಿರುಳು ಹೋರಾಟ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳಾದ ನಾವು ಇಂತಹ ಸಂದರ್ಭಗಳಲ್ಲಿ ಜನರಿಗೆ ಸಾಧ್ಯವಾದಷ್ಟು ನೆರವಾಗಬೇಕಾದ್ದುನಮ್ಮ ಧರ್ಮ. ಸರ್ಕಾರಿ ಆಸ್ಪತ್ರೆಗೆ ಮತ್ತು ರೋಗಿಗಳಿಗೆ ಬೇಕಾದ ಔಷಧ, ಆಹಾರ, ಆಮ್ಲಜನಕ ಒದಗಿಸಲು ಸಂಪೂರ್ಣ ಸಹಕಾರ ನೀಡುತ್ತೇನೆ. ಪಾಸಿಟಿವ್ ಆದವರು ವೈದ್ಯರ ಮಾರ್ಗದರ್ಶನ ಪಡೆದು ಧೈರ್ಯದಿಂದ ಎದುರಿಸಿ. ಸರ್ಕಾರ ನೀಡುತ್ತಿರುವ ಕೋವಿಡ್ ಲಸಿಕೆಯ ಬಗ್ಗೆ ತಜ್ಞರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ಕೊರೊನಾ ವಿರುದ್ಧ ಹೋರಾಡಲು ಸಜ್ಜಾಗಬೇಕು ಎಂದರು.
ತಹಶೀಲ್ದಾರ್ ರಾಜೀವ್ ಮಾತನಾಡಿ, ಕೊರೊನಾ ವಿರುದ್ಧದ ಹೋರಾಟದಲ್ಲಿ ಎಲ್ಲರ ಸಹಕಾರ ಅಗತ್ಯ. ಜನಪ್ರತಿನಿಧಿಗಳು ಈ ರೀತಿಯಲ್ಲಿ ತಾಲ್ಲೂಕು ಆಡಳಿತ ಮತ್ತು ಸರ್ಕಾರಿ ಆಸ್ಪತ್ರೆಗೆ ಸಹಕಾರ ನೆರವು ನೀಡಿದಲ್ಲಿ ಕೋವಿಡ್ ರೋಗವನ್ನು ಸಶಕ್ಷಮವಾಗಿ ಎದುರಿಸಬಹುದು ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ ಮಾತನಾಡಿ, ನಮ್ಮಲ್ಲಿ 40 ಕೋವಿಡ್ ಹಾಸಿಗೆಗಳಿದ್ದು ಎಲ್ಲಾ ಭರ್ತಿಯಾಗಿವೆ. 34 ಆಮ್ಲಜನಕ ಸಿಲಿಂಡರ್ ಗಳಿವೆ. ಪ್ರತಿದಿನ 25 ಸಿಲಿಂಡರ್ ಗಳ ಅಗತ್ಯವಿದೆ. ಖಾಲಿಯಾದಾಗ ತುಂಬಿಸಿ ತರಲು ತಡವಾಗುತ್ತಿತ್ತು. ಈಗ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಅವರು 10 ಸಿಲಿಂಡರ್ ನೀಡಿರುವುದು ನಮಗೆ ತುಂಬಾ ಅನುಕೂಲಕರವಾಗಿದೆ. ಇನ್ನೂ 10 ಸಿಲಿಂಡರ್ ನೀಡುವುದಾಗಿ ಹೇಳಿದ್ದಾರೆ ಎಂದರು.
ನಗರ ಆರೋಗ್ಯಧಿಕಾರಿ ಡಾ.ವಾಣಿ, ನಗರ ಸಭೆ ಸದಸ್ಯ ಶಬೀರ್, ಎಸ್ ಎನ್ ಕ್ರಿಯಾ ಟ್ರಸ್ಟ್ ನ ಸದಸ್ಯರಾದ ಆನೂರು ದೇವರಾಜು, ಆನಂದ್, ಸುಮೀರ್, ಇತ್ತಿಯಾಸ್ ಪಾಷ್, ಮಹ್ಮಬುಬ್ ಪಾಷ್, ಜಮೀರ್, ಚಾಂದ್ ಪಾಷ್, ಅಫ್ಸರ್ ಮುಂತಾದವರು ಹಾಜರಿದ್ದರು
ವರದಿ : ಕೆ.ಮಂಜುನಾಥ್.ಶಿಡ್ಲಘಟ್ಟ
Politics
ಮಸ್ಕಿಯಲ್ಲಿ ರಾಜಕೀಯ ದ್ವೇಷದ ಕಿಚ್ಚು : ಹಲವರಿಗೆ ಗಾಯ ಹಾಗೂ ಪ್ರಕರಣ ದಾಖಲು
ಮಸ್ಕಿ :- ಕ್ಷೇತ್ರದಲ್ಲಿ ಸೋಲು ಗೆಲುವಿನ ಕಾವು ಕಾಂಗ್ರೆಸ್ ಮತ್ತು ಬಿಜೆಪಿಯ ಕಾರ್ಯಕರ್ತರ ಜಗಳ.
ಮಸ್ಕಿ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಡು ಕಂಡಿರುವ ಪ್ರಕರಣ ದಾಖಲಾಗಿದೆ.
ಜಗಳದ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತ ಗಾಯಗೊಂಡಿದ್ದು ಮಸ್ಕಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು. ಕ್ಷೇತ್ರದ ನೂತನ ಶಾಸಕರಾದಂತಹ ಆರ್ ಬಸನಗೌಡ ತುರುವಿಹಾಳ ಬಂದು ಭೇಟಿ ನೀಡಿದರು.
ಜಗಳವಾದ ನಂತರ ಮಸ್ಕಿ ಪೊಲೀಸ್ ಠಾಣೆಯ ಮುಂದೆ 300 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ನಿಂತು ಪ್ರತಿಭಟನೆ ನಡೆಸಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್ ಬಸನಗೌಡ ತುರುವಿಹಾಳ ಗೆದ್ದ ತಕ್ಷಣ , ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ವರದಿ : ದುರ್ಗೇಶ್ ಭೋವಿ ಮಸ್ಕಿ
Politics
ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದಂತೆ ಮಾತುಕತೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಸಂಜೆ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಕ್ಸಿಜನ್ ತಯಾರಕ ಕಂಪೆನಿಗಳ ಮುಖ್ಯಸ್ಥರೊಂದಿಗೆ ಕೋವಿಡ್ ನಿರ್ವಹಣೆಗೆ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Politics
ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಸೋಲು
ಚೆನ್ನೈ : ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅವರು ತಮಿಳುನಾಡು ಚುನಾವಣೆಯಲ್ಲಿ ಸೋಲಿಗೆ ಸಿಲುಕಿದ್ದಾರೆ.
ಅಲ್ಲಿಯ ಅರವಕುರುಚ್ಚಿಯಿಂದ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ, ಅವರು ನಿರಾಸೆ ಅನುಭವಿಸಿದ್ದಾರೆ. ಈ ಕ್ಷೇತ್ರದಲ್ಲಿ ಡಿಎಂಕೆಯ ಎಲಾ ಇಳಂಗೊ ಅವರು ಜಯಗಳಿಸಿದ್ದಾರೆ. ಎಲಾ ಇಳಂಗೊ ಅವರು 34,832 ಮತಗಳನ್ನು ಪಡೆದಿದ್ದರೆ, ಅಣ್ಣಾಮಲೈ 29,596 ಮತ ಗಳಿಸಿ ಸೋಲು ಒಪ್ಪಿಕೊಂಡಿದ್ದಾರೆ.
-
Politics3 weeks ago
ಇಂಡಿ ತಾಲೂಕಿನ ಗಾಣಿಗ ನೌಕರರ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾರ್ಯಕಾರಣಿ ಸಭೆ
-
ಸುದ್ದಿ3 weeks ago
ಬಾಬಾ ಸಾಹೇಬ್ ಅಂಬೇಡ್ಕರವರ 130ನೇ ಜನ್ಮ ದಿನಾಚರಣೆ
-
ಸುದ್ದಿ4 weeks ago
ಕುಬೇರರಿಗೆ ಎಟುಕುವಷ್ಟು ಸುಲಭವಾಗಿ ಕುರಿಗಾಹಿಗಳಿಗೆ ಸಿಗುತ್ತದೆಯೇ ಈ ಸರ್ಕಾರದ ಸೌಲಭ್ಯ?
-
Politics3 weeks ago
ಸಿಂದಗಿಯಲ್ಲಿ ರಾಜ್ಯ ಮಟ್ಟದ ಸಿಂಗಿಂಗ್ ಕಾಂಪಿಟೇಶನ್ ಚಾಲನೆ