Connect with us
Ad Widget

ಮಾಹಿತಿ

ದ್ವಿತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ

Published

on

ಬೆಂಗಳೂರು : ಕೋವಿಡ್ ಸೋಂಕಿನ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ತೇರ್ಗಡೆ:

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ:

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.

ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯಗಳು ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.

ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು

Continue Reading
Advertisement
Click to comment

Leave a Reply

Your email address will not be published. Required fields are marked *

ಮಾಹಿತಿ

ರಕ್ತದಾನ, ಔಷಧಗಳು ಸೇರಿದಂತೆ ಹಲವು ತುರ್ತು ಸೇವೆಗಳಿಗಾಗಿ ಸಂಪರ್ಕಿಸಿ

Published

on

ಬಾಗೇಪಲ್ಲಿ: ಇಡೀ ದೇಶವನ್ನೆ ಆತಂಕಕ್ಕೆ ದೂಡಿರುವ ಕೊರೋನಾ ಸೋಂಕಿನ ಎರಡನೇ ಅಲೆಯು, ರೂಪಾಂತರ ಕೋವೊಡ್ ವೈರಸ್ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳೂ ಅಸಹಾಯಕತೆ ತೋರುತ್ತಿವೆ. ಇಂತಹ ಕೊರೋನಾ ಕಷ್ಟಕಾಲದಲ್ಲಿ ಬಡವರಿಗೆ ನೆರವಾಗಲು ಭಾರತದ ಪ್ರಜಾಸತ್ತಾತ್ಮಕ ಯುವ ಫೆಡರೇಶನ್ ನ ತಾಲ್ಲೂಕು ಘಟಕ ಸಹಾಯಕ್ಕೆ ಬರುತ್ತಿದೆ. ರಕ್ತದಾನ, ಔಷಧಗಳು ಸೇರಿದಂತೆ ಹಲವು ತುರ್ತು ಸೇವೆಗಳನ್ನು ಒದಗಿಸಲು ಸಂಘಟನೆಯು ಸಿದ್ದವಾಗಿದ್ದು, ನೆರವು ಬೇಕಾದವರು 9449102933, 9945914151 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಬಹುದೆಂದ ಪ್ರಕಟಣೆ ಕೋರಿದೆ.

ಡಿವೈಎಫ್ಐ ನ ಜಿಲ್ಲಾ ಸಂಚಾಲಕರಾದ ಡಾ.ಅನಿಲ್ ಕುಮಾರ್ ಆವುಲಪ್ಪ ಹಾಗೂ ತಾಲ್ಲೂಕು ಸಂಚಾಲಕರಾದ ವೈ.ಎನ್ ಹರೀಶ್ ರವರು ಈ ಕುರಿತು ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನ ಬಗ್ಗೆ ಆತಂಕಗೊಳ್ಳದೆ ತಪ್ಪದೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಎಂದಿದ್ದಾರೆ.

Continue Reading

ಮಾಹಿತಿ

ಭೂ ಮಾಪಕರ ದಿನ ಆಚರಣೆ

Published

on

ಶಿಡ್ಲಘಟ್ಟ : ನಗರದ ತಾಲ್ಲೂಕು ಕಚೇರಿಯಲ್ಲಿರುವ ಭೂಮಾಪಕರ ಶಾಖೆಯಲ್ಲಿ ಭೂ ಮಾಪಕರ ದಿನವನ್ನು ಆಚರಿಸಲಾಯಿತು

ಕಾರ್ಯಕ್ರಮದಲ್ಲಿ ಭಾಗಿಯಾದ ಭೂ ಮಾಪಕರ ಶಾಖೆಯ ಸೂಪರ್ ವೈಸರ್ ಸೋಮಶೇಖರಪ್ಪ ಅವರು ಮಾತನಾಡಿ, ಭಾರತದಲ್ಲಿ ಪ್ರಥಮ ಬಾರಿಗೆ ಆಧುನಿಕ ಉಪಕರಣಗಳನ್ನು ಬಳಸಿ ವೈಜ್ಞಾನಿಕ ರೀತಿಯಲ್ಲಿ ಕರ್ನಲ್ ವಿಲಿಯಂ ಲ್ಯಾಂಬ್ ಟನ್ ಎಂಬ ಸೇನಾಧಿಕಾರಿಯ ನೇತೃತ್ವದಲ್ಲಿ 1802 ರಲ್ಲಿ ಭೂ ಸರ್ವೆ ಕಾರ್ಯ ನಡೆಯಿತು. ಅದರ ಜ್ಞಾಪಕಾರ್ಥವಾಗಿ ಪ್ರತಿ ವರ್ಷವೂ ಏಪ್ರಿಲ್‌ನಲ್ಲಿ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ವೈಜ್ಞಾನಿಕ ಪದ್ಧತಿಯಲ್ಲಿ ಪ್ರಾರಂಭಿಸಿದ ರಾಷ್ಟ್ರೀಯ ಭೂಮಾಪನಕ್ಕೆ ಎರಡು ಶತಮಾನಗಳ ಇತಿಹಾಸವಿದೆ. ಹಲವು ಸಮಸ್ಯೆಗಳ ನಡುವೆಯೂ ಭೂಮಾಪಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ದಿನಾಚರಣೆಯಲ್ಲಿ ಭೂಮಾಪಕರುಗಳಾದ ನಾಗಭೂಷಣರೆಡ್ಡಿ, ಗುರುಸ್ವಾಮಿ, ರವೀಂದ್ರ, ಆದರ್ಶ, ಲಕ್ಷ್ಮೀ ನರಸಿಂಹಯ್ಯ, ಸತೀಶ್, ರಾಜಮ್ಮ, ನಂದಿನಿ, ಗುರುಪ್ರಸಾದ್ ಮುಂತಾದವರು ಹಾಜರಿದ್ದರು

ವರದಿ: ಕೆ.ಮಂಜುನಾಥ್ ಶಿಡ್ಲಘಟ್ಟ

Continue Reading

ಮಾಹಿತಿ

ಸಾಹಿತಿ ಶಶಿಕಾಂತ್ ರಾವ್ ಗೆ ‘ನುಡಿಸಿರಿ’ ಪ್ರಶಸ್ತಿ.

Published

on

ಪೀಣ್ಯ ದಾಸರಹಳ್ಳಿ: ಸ್ನೇಹಜೀವಿ ಗೆಳೆಯರ ಬಳಗ ಹಾಗೂ ಕ.ಸಾ.ಪ. ಬೆಂಗಳೂರು ನಗರ ಜಿಲ್ಲೆ ಉಪಾಧ್ಯಕ್ಷ ಶಶಿಕಾಂತ್ ರಾವ್ ಅವರು ಸಾಹಿತ್ಯ, ಸಾಂಸ್ಕೃತಿಕ ಸಂಘಟನೆ, ಸಮಾಜಸೇವೆ ಸಲ್ಲಿಸಿರುವ ಗಣನೀಯ ಸೇವಾ ಸಾಧನೆಗಾಗಿ 2021 ನೇ ಸಾಲಿನ ರಾಜ್ಯಮಟ್ಟದ ‘ನುಡಿಸಿರಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಾಶನದ ಚಂದ್ರಶೇಖರ್ ಮಾಡಲಗೇರಿ ತಿಳಿಸಿದ್ದಾರೆ. ಹುಬ್ಬಳ್ಳಿಯ ಚೇತನ ಪ್ರಕಾಶನದಿಂದ ಮಾ.20 ಮತ್ತು 21 ರಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನಕ ಭವನದಲ್ಲಿ ನಡೆಯಲಿರುವ ‘ಧಾರವಾಡ ನುಡಿ ಸಡಗರ’ ದಲ್ಲಿ ಸಾಹಿತಿ,ಸಮಾಜ ಸೇವಕ- ಸಂಘಟಕರಾದ ಶಶಿಕಾಂತ್ ರಾವ್ ಅವರಿಗೆ ಖ್ಯಾತ ಚಿತ್ರನಟ ಮುಖ್ಯಮಂತ್ರಿ ಚಂದ್ರು ಅವರು ‘ನುಡಿಸಿರಿ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್