ಸುದ್ದಿ
ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಚರಂಡಿಯಲ್ಲಿ ನೀರು ಮುಂದಕ್ಕೆ ಹೋಗದೆ ನಿಂತು ದುರ್ವಾಸನೆ : ಸ್ಥಳೀಯರ ಆಕ್ರೋಶ
ಮಸ್ಕಿ :- ತಾಲೂಕಿನ ರಾಜ್ಯ ಹೆದ್ದಾರಿ ಪಕ್ಕದಲ್ಲಿರುವ ಚರಂಡಿಗೆ ಮಳೆಯಿಂದಾಗಿ ಬಿದ್ದಿರುವ ನೀರು ಕಟ್ಟಿಕೊಂಡಿದ್ದು ನೀರು ಮುಂದಕ್ಕೆ ಸಾಗದೆ ಕೊಳೆತು ದುರ್ವಾಸನೆ ಹೊಡೆಯುತ್ತಿದ್ದು ಇದನ್ನು ಹಲವಾರು ತಿಂಗಳುಗಳಿಂದ ಯಾರು ಈ ಬಗ್ಗೆ ಅಧಿಕಾರಿಗಳು ಗಮನಹರಿಸಿಲ್ಲ.
ಈ ನೀರಿನಲ್ಲಿ ಕ್ರಿಮಿಕೀಟಗಳ ಆವಾಸಸ್ಥಾನವಾಗಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು.
ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತವಾದ ಕ್ರಮ ಕೈಗೊಂಡು ನೀರನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದು ಸ್ಥಳೀಯರು ಹಾಗೂ ಅಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ : ದುರ್ಗೇಶ್ ಭೋವಿ ಮಸ್ಕಿ
ಸುದ್ದಿ
ದಲಿತರಿಗೆ, ಆಟೋ-ಕ್ಯಾಬ್ ಚಾಲಕರು, ಬೀದಿ ಬದಿ ವ್ಯಾಪಾರಿಗಳಿಗೆ, ವಿಶೇಷ ಪ್ಯಾಕೇಜ್ ನೀಡಲು- ವೀರೇಶ್ ಒತ್ತಾಯ
ರಾಯಚೂರು ಮೇ.17 :- ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 24 ರವರೆಗೆ ಲಾಕ್‌ಡೌನ್ ಜಾರಿಗೊಳಿಸಿದ ಕಾರಣ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಡ ಮತ್ತು ದಿನಗೂಲಿ ಕಾರ್ಮಿಕರು, ಆಟೋ-ಕ್ಯಾಬ್ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಅನೇಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಹೀಗಾಗಿ ಬಡವರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ವೀರೇಶ್ ರವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇರಳ, ತಮಿಳುನಾಡು ಹಾಗೂ ದೆಹಲಿ ಸರ್ಕಾರಗಳು ಈಗಾಗಲೇ ಜನರಿಗೆ ವಿಶೇಷ ಪ್ಯಾಕೇಜ್ ಘೋಷಿಸಿವೆ.
ಆದರೆ, ಕರ್ನಾಟಕ ಸರ್ಕಾರ ಮಾತ್ರ ವಿಶೇಷ ಪ್ಯಾಕೇಜ್ ಘೋಷಣೆ ಮಾಡದೆ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಅವರ ಉಪಜೀವನ ನಡೆಯಬೇಕಾದರೆ ಬಹಳ ಕಷ್ಟವಾಗಿದೆ, ಆದ್ದರಿಂದ ಸರಕಾರ ಉಚಿತವಾಗಿ
15 ಕೆ.ಜಿ. ಅಕ್ಕಿ ಜೊತೆ ಅಗತ್ಯ ವಸ್ತುಗಳನ್ನು ತಕ್ಷಣ ಒದಗಿಸಿ ಅವರ ಜೀವ ಉಳಿಸಬೇಕು.
ದಲಿತರಿಗೆ ಹಾಗೂ ಇತರೆ ಬಡವರಿಗೆ ರೂ 10 ಸಾವಿರ ಪರಿಹಾರವನ್ನು ತಕ್ಷಣ ನೀಡಬೇಕು ಎಂದು ಸರಕಾರಕ್ಕೆ ಈ ಮೂಲಕ ಆಗ್ರಹಿಸಿದರು.
ಕೋವಿಡ್ -19 ದಲಿತ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಕೇರಳ ಮಾದರಿಯಲ್ಲಿ ಕೋವಿಡ್ ಲಸಿಕೆಯನ್ನು ದಲಿತರು ವಾಸಿಸುವ ಕಾಲೋನಿ ಪ್ರದೇಶಗಳಿಗೆ ತೆರಳಿ ಲಸಿಕೆ ಹಾಕುಬೇಕು ಎಂದರು.
ವರದಿ : ದುರ್ಗೇಶ್ ಭೋವಿ ಮಸ್ಕಿ
ಸುದ್ದಿ
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
ಮಂಡ್ಯ : ಮದ್ದೂರು ತಾಲೂಕು ಕೊಪ್ಪ ಹೋಬಳಿಯ ಹರಳಕೆರೆ ಗ್ರಾಮದಲ್ಲಿ ಇಂದು ಚಿರತೆಯು ಗ್ರಾಮವಾಸಿಯಾದ ಶೇಖರ್ ಎಂಬುವರ ಹಸುವನ್ನು ಬಲಿತೆಗೆದುಕೊಂಡಿದೆ. ಇದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಗ್ರಾಮದ ಮುಖಂಡರು ಇನ್ನು ಮುಂದೆ ಯಾವುದೇ ರೀತಿಯ ಕಹಿ ಘಟನೆಗಳು ನಡೆಯದ ರೀತಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಯನ್ನು ಬಂಧಿಸಬೇಕು ಎಂದರು.
ಸುದ್ದಿ
ಬಾಗೇಪಲ್ಲಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಇಲ್ಲ, ಹಸಿವಿನ ದವಡೆಗೆ ಸಿಲುಕಿದ ನಿರ್ಗತಿಕರು
ಬಾಗೇಪಲ್ಲಿ: ಲಾಕ್‌ಡೌನ್ ಸಂದರ್ಭದಲ್ಲಿ ನಿರ್ಗತಿಕರನ್ನು, ಭಿಕ್ಷುಕರನ್ನು ಗುರುತಿಸಿ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟ ಕೊಡಲು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಇಲ್ಲವಾಗಿದೆ.ಆದುದರಿಂದ ಇದುವರೆಗೂ ಪುರಸಭೆ ಅಧಿಕಾರಿಗಳು ನಿರ್ಗತಿಕರಿಗೆ ಆಹಾರ ವಿತರಣೆ ಮಾಡಿಲ್ಲ.
ಈ ಲಾಕ್ಡೌನ್ ನಿಂದಾಗಿ ಪಟ್ಟಣದ ಬಸ್ ನಿಲ್ದಾಣ, ಮುಖ್ಯರಸ್ತೆ ಅಂಗಡಿಗಳ ಹಾಗೂ ಮರಗಳ ಕೆಳಗೆ ನಿರ್ಗತಿಕರು, ಭಿಕ್ಷುಕರು, ವೃದ್ಧರು ಊಟ ಇಲ್ಲದೇ ಪರದಾಡುತ್ತಿದ್ದಾರೆ. ಊಟ ಇಲ್ಲದೇ ನಿಶಕ್ತರಾಗಿ, ಮರ, ಅಂಗಡಿಗಳ ಕೆಳಗೆ ಮಲಗುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳಿಂದ ಹಣ್ಣುಗಳನ್ನು ಬೇಡಿ ತಿನ್ನುತ್ತಿದ್ದಾರೆ.
ಪಟ್ಟಣದಲ್ಲಿ ಸುಮಾರು 30 ಮಂದಿ ನಿರ್ಗತಿಕರು, ಮಾನಸಿಕ ಅಸ್ವಸ್ಥರು, ಭಿಕ್ಷುಕರು, ವೃದ್ಧರು ಇದ್ದಾರೆ. ಇದುವರೆಗೂ ಪುರಸಭೆ ಅಧಿಕಾರಿಗಳು ಇಂತವರನ್ನು ಗುರುತಿಸಿಲ್ಲ. ಪಟ್ಟಿಯನ್ನೂ ಸಿದ್ಧಪಡಿಸಿಲ್ಲ. ಆಹಾರ ವಿತರಣೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಪಟ್ಟಣದ ಸಂತೇಮೈದಾನದಲ್ಲಿ ಇಂದಿರಾ ಕ್ಯಾಂಟೀನ್‌ನ ಕಟ್ಟಡ ಅರ್ಧ ಕಾಮಗಾರಿ ನಡೆದಿದೆ. ಪಟ್ಟಣಕ್ಕೆ ದೂರ ಇದೆ ಎಂದು ಕೆಲವರು ವಿರೋಧ ಮಾಡಿ, ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದಿರಾ ಕ್ಯಾಂಟೀನ್ ಮಾಡುವಂತೆ ಮನವಿ ಮಾಡಿದ್ದರು. ಇದರಿಂದ ಜಾಗದ ಗೊಂದಲದಿಂದ ಇಂದಿರಾ ಕ್ಯಾಂಟೀನ್ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಇದರಿಂದ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡವೇ ಇಲ್ಲವಾಗಿದೆ.
‘ಇಂದಿರಾ ಕ್ಯಾಂಟೀನ್‌ಗೆ ಕಟ್ಟಡ ಇಲ್ಲದೇ ಇರುವುದರಿಂದ, ನಿರ್ಗತಿಕರನ್ನು ಗುರುತಿಸಿ, ಇರುವ ಕಡೆಗೆ ಹೋಗಿ ಆಹಾರ ವಿತರಣೆ ಮಾಡಬಹುದಾಗಿತ್ತು. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಹಾರ ವಿತರಣೆ ಮಾಡಿಲ್ಲ’ ಎಂದು ಹಿರಿಯ ನಾಗರಿಕ ಆಂಜಿನಪ್ಪ ದೂರಿದರು.
‘ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಇಲ್ಲದೇ ಇರುವುದರಿಂದ ಆಹಾರ ಹಂಚಲು ಆಗಿಲ್ಲ. ಮುಂದಿನ ದಿನಗಳಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥ, ನಿರ್ಗತಿಕರನ್ನು, ವೃದ್ಧರನ್ನು, ಭಿಕ್ಷುಕರನ್ನು ಗುರುತಿಸಿ, ಪ್ರತಿದಿನ ಅವರು ಇರುವ ಕಡೆಗೆ ಪುರಸಭೆ ಸಿಬ್ಬಂದಿ ಹೋಗಿ ಮೂರು ಬಾರಿ ಆಹಾರ, ನೀರು ಹಂಚುತ್ತಾರೆ’ ಎಂದು ಪುರಸಭೆ ಪ್ರಭಾರ ಮುಖ್ಯಾಧಿಕಾರಿ ನಾಗರಾಜ್ ತಿಳಿಸಿದರು.
ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದಾಗ ಬಡವರು ಹಸಿವಿನಿಂದ ಬಳಲಬಾರದು ಎಂದು ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ರೂಪಿಸಿ ಜಾರಿ ಮಾಡಿದರು. ಆದರೆ ವರ್ಷಗಳೇ ಉರುಳಿದರು, ಸರ್ಕಾರಗಳೇ ಬದಲಾದರೂ ಬಾಗೇಪಲ್ಲಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲಾಗಿಲ್ಲ. ಬಡವರ,ನಿರ್ಗತಿಕರ ಪರವಾದ ಯೋಜನೆಗಳಿಗೆ ಶಾಸಕರ, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ ಏತಕ್ಕೆ ಎಂದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.
-
Politics3 hours ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
Politics2 weeks ago
ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ
-
ಸುದ್ದಿ1 day ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
-
ಸುದ್ದಿ1 week ago
ಸಿಎಂ ತವರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಪೋಟ, 10 ಕ್ಕೂ ಹೆಚ್ಚು ಕಾರ್ಮಿಕರು ಬಲಿ