Politics
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
ಗೌರಿಬಿದನೂರು : ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಲು ಜಿಲ್ಲಾ ಮತ್ತು ತಾಲ್ಲೂಕು ಆಡಳಿತಗಳು ಕಠಿಣ ಕ್ರಮ ಕೈಗೊಂಡಿದ್ದು ಸೋಂಕಿತರಿಗೆ ಬೇಕಾದ ಎಲ್ಲಾ ರೀತಿಯ ಆರೋಗ್ಯ ಸೌಕರ್ಯಗಳನ್ನು ಒದಗಿಸಲು ಮುಂದಾಗಿದೆ. ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿ ಟಾಸ್ಕ್ ಫೋರ್ಸ್ ಬಹಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದೆ. ಆದರೂ ಕೂಡ ಇಂತಹ ಕಠಿಣ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಎನ್.ಎಚ್. ಶಿವಶಂಕರ್ ರೆಡ್ಡಿ ರವರು ಗೌರಿಬಿದನೂರು ತಾಲೂಕು ದೊಡ್ಡ ಕುರುಗೋಡು ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವ ವಿದುರಾಕಾಲೋನಿ, ಕುಡಮಲಕುಂಟೆ ಗ್ರಾಮದ ಕೆಲವು ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯದ ಬಗ್ಗೆ ವಿಚಾರಿಸಿ, ಅವರಿಗೆ ಧೈರ್ಯವನ್ನು ತುಂಬಿ, ಆರೋಗ್ಯ ಇಲಾಖೆಯ ಸೌಲಭ್ಯಗಳ ಬಗ್ಗೆ ವಿಚಾರಣೆಮಾಡಿ ಕರೋನಾಗೆ ಸಂಬಂಧಿಸಿದಂತೆ ಕೆಲವು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ದರಿಸುವುದು, ಸ್ಯಾನಿಟೈಸರ್ ಮಾಡುವುದು ,ಸಾಮಾಜಿಕ ಅಂತರ ಪಾಲಿಸುವುದು, ಸ್ವಚ್ಛತೆ ಹಾಗೂ ಬೇರೆಯವರ ಜೊತೆ ಒಡನಾಟ ದ ಬಗ್ಗೆ ಇತ್ಯಾದಿ ವಿಚಾರಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಎಂ . ಮನುಜಾ, ತಹಸಿಲ್ದಾರ್ ಎಚ್. ಶ್ರೀನಿವಾಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿರಾಜು, ತಾಲೂಕು ಆರೋಗ್ಯಧಿಕಾರಿ ಓ .ರತ್ನಮ್ಮ, ಪಿಡಿಒ ಚಂದ್ರಶೇಖರ್ ಕಾರಟಗಿ ,ರಾಜಸ್ವ ನಿರೀಕ್ಷಕರಾದ ರವಿಕುಮಾರ್,ಕಂದಾಯ ಅಧಿಕಾರಿ ಲೋಕೇಶ್ ಮುಖಂಡರಾದ ಎಚ್. ಎನ್. ಪ್ರಕಾಶ್ ರೆಡ್ಡಿ ,ಅಶ್ವತಪ್ಪ, ಕಾರ್ತಿಕ್, ಇತರರು ಹಾಜರಿದ್ದರು.
Politics
ಜೂನ್ 7ರ ವರೆಗೆ ರಾಜ್ಯದಾದ್ಯಂತ ಕಠಿಣ ನಿರ್ಬಂಧ
ಬೆಂಗಳೂರು : ‘ತಜ್ಞರ ಅಭಿಪ್ರಾಯ ಪರಿಗಣಿಸಿ, ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಇಂದು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ರವರು ತಿಳಿಸಿದರು.
‘ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಿ ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ ಎಂದರು.
Politics
ಕೇಂದ್ರ ರಸಗೊಬ್ಬರ ಇಲಾಖೆಯಿಂದ ರೈತರಿಗೆ ಶುಭ ಸಂದೇಶ
ಬೆಂಗಳೂರು – ಮುಂಗಾರು ಹಂಗಾಮಿಗಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1211 ರೂಪಾಯಿಗೆ (ಶೇಕಡಾ 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಇಂದು ಅಧಿಕೃತ ಆದೇಶ ಹೊರಡಿಸಿದೆ.
ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ ಗುರುವಾರ ಹೊರಡಿಸಿದ ಪರಿಷ್ಕೃತ ಆದೇಶದ ಪ್ರಕಾರ ರಸಗೊಬ್ಬರದಲ್ಲಿ ಬಳಕೆಯಾಗುವ ಪ್ರತಿ ಟನ್ ನೈಟ್ರೋಜನ್ (Nitrogen – N)ಗೆ 18,789 ರೂ, ಫೊಸ್ಫೇಟ್ (Phosphate – P)ಗೆ 45,323 ರೂ, ಪೊಟಾಷ್ (Potash – K) 10,116 ರೂ ಮತ್ತು ಸಲ್ಫರ್ (Sulphur – S)ಗೆ 2374 ರೂ ಸಬ್ಸಿಡಿ ದೊರೆಯಲಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ (ಎನ್.ಬಿ.ಎಸ್.) ಯೋಜನೆಯಡಿ 22 ನಮೂನೆ ಗೊಬ್ಬರಗಳಿದ್ದು ಈ ಪಟ್ಟಿಗೆ ಹೊಸದಾಗಿ ಎನ್’ಪಿಕೆ 8-21-21 ಮತ್ತು ಎನ್’ಪಿಕೆ 9-24-24 ನಮೂನೆ ರಸಗೊಬ್ಬರಗಳನ್ನು ಸೇರಿಸಲಾಗಿದೆ. ಪರಿಷ್ಕೃತ ಸಬ್ಸಿಡಿ ದರ ಮುಂಗಾರು ಹಂಗಾಮಿನವರೆಗೆ (ಅಕ್ಪೋಬರ್ 31, 2021) ಜಾರಿಯಲ್ಲಿರಲಿದೆ.
Politics
ಕುಷ್ಟಗಿ ಯುವಕರ ಅನ್ನದಾನ ಸೇವೆಗೆ ಪೊಲೀಸರು ಸಾಥ್: ಪ್ರತಿದಿನ 300 ಜನರಿಗೆ ಆಹಾರ ವಿರತಣೆ
ಕುಷ್ಟಗಿ : ಲಾಕ್ಡೌನ್ ಪರಿಸ್ಥಿತಿ ಅವಲೋಕಿಸಿದ 20 ಜನ ಯುವಕರ ತಂಡ ನಿತ್ಯ 300 ಜನಕ್ಕೂ ಹೆಚ್ಚು ಜನಕ್ಕೆ ಊಟ ನೀಡುತ್ತಿದ್ದಾರೆ. ಫೋಟೋ ತೆಗೆಸಿಕೊಳ್ಳಲೆಂದೇ ಸೇವೆ ಮಾಡುವ ಜನರ ಮಧ್ಯೆ ಸದ್ದಿಲ್ಲದೆ ಹಸಿದ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿರುವ ಯುವಕರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ.
ಲಾಕಡೌನ್ ಸಂಕಷ್ಟ ಪರಿಸ್ಥಿತಿಯಲ್ಲಿ ನಗರದ ಸಮಾನ ಮನಸ್ಕ ಯುವಕರ ತಂಡ ಹಾಗೂ ಪೊಲೀಸರು ಜೊತೆಗೂಡಿ ನಿರ್ಗತಿಕರು, ಮಾನಸಿಕ ಅಸ್ವಸ್ಥರಿಗೆ ಪ್ರತಿದಿನ ಅನ್ನದಾನ ಮಾಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನಿರ್ಗತಿಕರು, ಮಾನಸಿಕ ಅಸ್ವಸ್ಥರು ಲಾಕ್ಡೌನ್ನಿಂದ ಆಹಾರ ಸಿಗದೆ ಕಂಗಾಲಾಗಿದ್ದಾರೆ. ಪರಿಸ್ಥಿತಿ ಅವಲೋಕಿಸಿದ 20 ಜನ ಯುವಕರ ತಂಡ ನಿತ್ಯ 300 ಜನಕ್ಕೂ ಹೆಚ್ಚು ಜನಕ್ಕೆ ಊಟ ನೀಡುತ್ತಿದ್ದಾರೆ. ಫೋಟೋ ತೆಗೆಸಿಕೊಳ್ಳಲೆಂದೇ ಸೇವೆ ಮಾಡುವ ಜನರ ಮಧ್ಯ ಸದ್ದಿಲ್ಲದೆ ಹಸಿದ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಿರುವ ಯುವಕರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ.
-
Politics4 days ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
Politics3 weeks ago
ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ
-
ಸುದ್ದಿ5 days ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
-
ಸುದ್ದಿ2 weeks ago
ಸಿಎಂ ತವರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಪೋಟ, 10 ಕ್ಕೂ ಹೆಚ್ಚು ಕಾರ್ಮಿಕರು ಬಲಿ