Connect with us
Ad Widget

ಕ್ರೀಡೆ

ಕೋಚ್ ನಿಧನಕ್ಕೆ ಕಂಬನಿ‌ ಮಿಡಿದ ಕಬ್ಬಡ್ಡಿ ಕ್ರೀಡಾಪಟು ಬಾಲಾಜಿ

Published

on

ಬಾಗೇಪಲ್ಲಿ: ಮಾಜಿ ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಗೋಪಾಲಪ್ಪ ಎಂಬ ಸಾಮಾನ್ಯ ಕುಟುಂಬದಿಂದ ಬಂದು ಕಬ್ಬಡ್ಡಿ ಕ್ರೀಡೆಯಲ್ಲಿ ದೇಶವನ್ನು ಹಲವು ಸಲ ಪ್ರತಿನಿಧಿಸಿದ್ದರು. ಪ್ರೋ ಕಬ್ಬಡ್ಡಿ ಸೀಸನ್-೨ ರಲ್ಲಿ ಮುಂಬೈ ತಂಡ ಚಾಂಪಿಯನ್ ಆದಾಗ ತಂಡದಲ್ಲಿ ಆಡಿದ್ದರು.

ಕರ್ನಾಟಕದ ಕಬ್ಬಡ್ಡಿ ಉತ್ತಮ ರೈಡರ್ ಆಗಿದ್ದರು. ಅವರು ಇಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಕುಟುಂಬಸ್ಥರು, ಅಭಿಮಾನಿಗಳಲ್ಲಿ ಮತ್ತು ಶಿಷ್ಯರಲ್ಲಿ ಅತೀವ ದುಃಖ ತಂದಿದೆ.‌ ನನಗೆ ಮುಖ್ಯ ಕೋಚ್ ಆಗಿದ್ದ ಗೋಪಾಲಪ್ಪರವರ ಸಾವು ನಂಬಲಾಗುತ್ತಿಲ್ಲ. ಉತ್ತಮ ರೈಡರ್ ಹಾಗೂ ನನ್ನಂತಹ ಅದೆಷ್ಟೋ ಕಬ್ಬಡ್ಡಿ ಪ್ರತಿಬನೆಗಳನ್ನು ಸೃಷ್ಟಿಸಿದ್ದಾರೆ ಎಂದು ಬಾಗೇಪಲ್ಲಿಯ ಕಬ್ಬಡ್ಡಿ ಕ್ರೀಡಾ ಪಟು ಬಾಲಾಜಿ ಸಂತಾಪ ಸೂಚಿಸಿದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಕ್ರೀಡೆ

ಭಾರತೀಯ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಜೀವನಾಧಾರಿತ ಚಿತ್ರದಲ್ಲಿ ಖ್ಯಾತ ನಟಿ ತಾಪ್ಸಿ ಪನ್ನು

Published

on

ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಭಾರತೀಯ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಎಂದರೆ ಈ ಬಯೋಪಿಕ್‌ಗೆ ಕನ್ನಡ ಖ್ಯಾತ ನಟ ಜೆಕೆ ಎಂಟ್ರಿ ಕೊಟ್ಟಿದ್ದಾರೆ.

ಶಬಾಷ್ ಮಿಥು ಹೆಸರಿನಲ್ಲಿ ಸೆಟ್ಟೇರಿರುವ ಚಿತ್ರದಲ್ಲಿ ತಾಪ್ಸಿ ಪನ್ನು ಮಿಥಾಲಿ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕನ್ನಡದ ನಟ ಜೆಕೆ ನಟಿಸುತ್ತಿರುವ ಮಾಹಿತಿ ಬಹಿರಂಗವಾಗಿದೆ.

Continue Reading

ಕೊರೊನಾ

ಕೊರೊನಾ ಭೀತಿ : ಐಪಿಎಲ್ ಟೂರ್ನಿ ರದ್ದು

Published

on

ನವದೆಹಲಿ : ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಯನ್ನು ರದ್ದುಗೊಳಿಸಲಾಗಿದೆ.

ಕೋಲ್ಕತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಹಲವು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ದಿಢೀರನೆ ರದ್ದುಗೊಳಿಸಿದೆ.

ಕೆಕೆಆರ್ ತಂಡದ ಸಂದೀಪ್ ವಾರಿಯರ್ ಮತ್ತು ವರುಣ್ ಚಕ್ರವರ್ತಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ರದ್ದುಗೊಳಿಸಲಾಗಿತ್ತು.
ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮಂಗಳವಾರ ನಡೆಯಬೇಕಿದ್ದ ಪಂದ್ಯ ಅನುಮಾನ ಇತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹ ಅವರಲ್ಲೂ ಕೊರೊನಾ ದೃಢಪಟ್ಟಿತ್ತು.

ಹಲವು ತಂಡಗಳ ಆಟಗಾರರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದ್ದು, ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸುವುದಾಗಿ ತಿಳಿಸಿದೆ.

Continue Reading

ಕ್ರೀಡೆ

ಇಂದು ನಡೆಯಬೇಕಾಗಿದ್ದ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ರದ್ದು

Published

on

ನವದೆಹಲಿ: ಅತಿ ಎಚ್ಚರಿಕೆ ಮತ್ತು ಕಡ್ಡಾಯ ಕೋವಿಡ್ ನಿರ್ಬಂಧಗಳ ಪಾಲನೆಯ ಹೊರತಾಗಿಯೂ ಮಾರಕ ಕೊರೋನಾ ವೈರಸ್ ಐಪಿಎಲ್ ಆಟಗಾರರ ಬಯೋಬಬಲ್ ಬ್ರೇಕ್ ಮಾಡಿದ್ದು, ಕೋಲ್ಕತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರು ಸೋಂಕಿಗೆ ತುತ್ತಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕೆಕೆಆರ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಒಕ್ಕರಿಸಿದ್ದು, ಇದು ಇಂದಿನ ಪಂದ್ಯದ ಮೇಲೆ ಕರಿನೆರಳು ಬೀಳುವಂತೆ ಮಾಡಿದೆ. ಮೂಲಗಳ ಪ್ರಕಾರ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಲ್ಲಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಇಬ್ಬರು ಆಟಗಾರರ ಪೈಕಿ ಬಯೋ ಬಬಲ್​ನಲ್ಲಿ ಇರುವ ಓರ್ವ ಕ್ರಿಕೆಟ್ ಆಟಗಾರನಿಗೆ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದ್ದು, ಇದು ಇತರೆ ಆಟಗಾರರಿಗೂ ಸೋಂಕಿನ ಭೀತಿ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಇಂದು ಅಂದರೆ ಮೇ 3 ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ನಡುವೆ ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಇಂದಿನ ಐಪಿಎಲ್ ಪಂದ್ಯವನ್ನು ಮುಂದೂಡಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಬಿಸಿಸಿಐ ಈ ಸಂಬಂಧ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್