ಕ್ರೀಡೆ
ಐಪಿಎಲ್ 14ನೇ ಆವೃತ್ತಿಯ 2ನೇ ಭಾಗ : ಬಿಸಿಸಿಐ ವಿಶೇಷ ಮಹಾಸಭೆ
ಮುಂಬೈ: ಬಿಸಿಸಿಐನ ವಿಶೇಷ ಮಹಾಸಭೆ (ಎಸ್ಜಿಎಂ) ಇಂದು ನಡೆಯಲಿದ್ದು, ಐಪಿಎಲ್ 14ನೇ ಆವೃತ್ತಿಯ 2ನೇ ಭಾಗ ಮತ್ತು ಟಿ20 ವಿಶ್ವಕಪ್ ಟೂರ್ನಿಯ ಆತಿಥ್ಯದ ಬಗ್ಗೆ ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆ ಇದೆ. ಜತೆಗೆ ರಣಜಿ ಕ್ರಿಕೆಟಿಗರಿಗೆ ಪರಿಹಾರ ನೀಡುವುದನ್ನು ಸೇರಿದಂತೆ ದೇಶೀಯ ಕ್ರಿಕೆಟ್ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ಸೆಪ್ಟೆಂಬರ್ 15ರಿಂದ ಅಕ್ಟೋಬರ್ 15ರ ನಡುವೆ ಐಪಿಎಲ್ ಟೂನಿರ್ಯ ಮುಂದುವರಿದ ಭಾಗವನ್ನು ಆಯೋಜಿಸಲು ಬಿಸಿಸಿಐ ಈಗಾಗಲೆ ಯೋಜನೆ ರೂಪಿಸಿದ್ದು, ಇದಕ್ಕಾಗಿ 3 ವಾರಗಳ ವೇಳಾಪಟ್ಟಿಯನ್ನೂ ಅಂತಿಮಗೊಳಿಸುವ ನಿರೀಕ್ಷೆ ಇದೆ. ಕರೊನಾ ವೈರಸ್ ಹಾವಳಿಯ ನಡುವೆ ಟಿ20 ವಿಶ್ವಕಪ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲು ಬಿಸಿಸಿಐ ಒಲವು ತೋರಿದ್ದು, ಜೂನ್ 1ರಂದು ನಡೆಯಲಿರುವ ಐಸಿಸಿ ಸಭೆಯಲ್ಲಿ ಈ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆಯಲಿವೆ.
ಕ್ರೀಡೆ
ಕೋಚ್ ನಿಧನಕ್ಕೆ ಕಂಬನಿ ಮಿಡಿದ ಕಬ್ಬಡ್ಡಿ ಕ್ರೀಡಾಪಟು ಬಾಲಾಜಿ
ಬಾಗೇಪಲ್ಲಿ: ಮಾಜಿ ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟು ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಗೋಪಾಲಪ್ಪ ಎಂಬ ಸಾಮಾನ್ಯ ಕುಟುಂಬದಿಂದ ಬಂದು ಕಬ್ಬಡ್ಡಿ ಕ್ರೀಡೆಯಲ್ಲಿ ದೇಶವನ್ನು ಹಲವು ಸಲ ಪ್ರತಿನಿಧಿಸಿದ್ದರು. ಪ್ರೋ ಕಬ್ಬಡ್ಡಿ ಸೀಸನ್-೨ ರಲ್ಲಿ ಮುಂಬೈ ತಂಡ ಚಾಂಪಿಯನ್ ಆದಾಗ ತಂಡದಲ್ಲಿ ಆಡಿದ್ದರು.
ಕರ್ನಾಟಕದ ಕಬ್ಬಡ್ಡಿ ಉತ್ತಮ ರೈಡರ್ ಆಗಿದ್ದರು. ಅವರು ಇಂದು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಕುಟುಂಬಸ್ಥರು, ಅಭಿಮಾನಿಗಳಲ್ಲಿ ಮತ್ತು ಶಿಷ್ಯರಲ್ಲಿ ಅತೀವ ದುಃಖ ತಂದಿದೆ. ನನಗೆ ಮುಖ್ಯ ಕೋಚ್ ಆಗಿದ್ದ ಗೋಪಾಲಪ್ಪರವರ ಸಾವು ನಂಬಲಾಗುತ್ತಿಲ್ಲ. ಉತ್ತಮ ರೈಡರ್ ಹಾಗೂ ನನ್ನಂತಹ ಅದೆಷ್ಟೋ ಕಬ್ಬಡ್ಡಿ ಪ್ರತಿಬನೆಗಳನ್ನು ಸೃಷ್ಟಿಸಿದ್ದಾರೆ ಎಂದು ಬಾಗೇಪಲ್ಲಿಯ ಕಬ್ಬಡ್ಡಿ ಕ್ರೀಡಾ ಪಟು ಬಾಲಾಜಿ ಸಂತಾಪ ಸೂಚಿಸಿದರು.
ಕ್ರೀಡೆ
ಭಾರತೀಯ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಜೀವನಾಧಾರಿತ ಚಿತ್ರದಲ್ಲಿ ಖ್ಯಾತ ನಟಿ ತಾಪ್ಸಿ ಪನ್ನು
ಬಾಲಿವುಡ್‌ನ ಖ್ಯಾತ ನಟಿ ತಾಪ್ಸಿ ಪನ್ನು ಭಾರತೀಯ ಮಹಿಳಾ ಕ್ರಿಕೆಟರ್ ಮಿಥಾಲಿ ರಾಜ್ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಎಂದರೆ ಈ ಬಯೋಪಿಕ್‌ಗೆ ಕನ್ನಡ ಖ್ಯಾತ ನಟ ಜೆಕೆ ಎಂಟ್ರಿ ಕೊಟ್ಟಿದ್ದಾರೆ.
ಶಬಾಷ್ ಮಿಥು ಹೆಸರಿನಲ್ಲಿ ಸೆಟ್ಟೇರಿರುವ ಚಿತ್ರದಲ್ಲಿ ತಾಪ್ಸಿ ಪನ್ನು ಮಿಥಾಲಿ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕನ್ನಡದ ನಟ ಜೆಕೆ ನಟಿಸುತ್ತಿರುವ ಮಾಹಿತಿ ಬಹಿರಂಗವಾಗಿದೆ.
ಕೊರೊನಾ
ಕೊರೊನಾ ಭೀತಿ : ಐಪಿಎಲ್ ಟೂರ್ನಿ ರದ್ದು
ನವದೆಹಲಿ : ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಯನ್ನು ರದ್ದುಗೊಳಿಸಲಾಗಿದೆ.
ಕೋಲ್ಕತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಹಲವು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ದಿಢೀರನೆ ರದ್ದುಗೊಳಿಸಿದೆ.
ಕೆಕೆಆರ್ ತಂಡದ ಸಂದೀಪ್ ವಾರಿಯರ್ ಮತ್ತು ವರುಣ್ ಚಕ್ರವರ್ತಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ರದ್ದುಗೊಳಿಸಲಾಗಿತ್ತು.
ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮಂಗಳವಾರ ನಡೆಯಬೇಕಿದ್ದ ಪಂದ್ಯ ಅನುಮಾನ ಇತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹ ಅವರಲ್ಲೂ ಕೊರೊನಾ ದೃಢಪಟ್ಟಿತ್ತು.
ಹಲವು ತಂಡಗಳ ಆಟಗಾರರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದ್ದು, ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸುವುದಾಗಿ ತಿಳಿಸಿದೆ.
-
Politics1 week ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics2 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
Politics4 weeks ago
ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ
-
ಸುದ್ದಿ3 weeks ago
ಸಿಎಂ ತವರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಪೋಟ, 10 ಕ್ಕೂ ಹೆಚ್ಚು ಕಾರ್ಮಿಕರು ಬಲಿ