ಮಾಹಿತಿ
ಮುಂದಿನ ಮೂರು ದಿನ ಭಾರೀ ಮಳೆ : ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮಾನ್ಸೂನ್ ಜೂನ್ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಮಾಹಿತಿ
ಹಾಲ್ ಟಿಕೆಟ್ ತಿದ್ದುಪಡಿ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆಯಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ತಿದ್ದುಪಡಿಗಳಿದ್ದಲ್ಲಿ ಮೇ. 20 ರೊಳಗೆ ಮನವಿ ಸಲ್ಲಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
ಎಸ್ ಎಟಿಎಸ್ ಪೋರ್ಟಲ್ ಮೂಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕರಡು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಅದನ್ನು ಕೆಂಪು ಶಾಯಿಯಿಂದ ಗುರುತು ಮಾಡಿ ಹಾಗೂ ತಿದ್ದುಪಡಿಗೆ ತಮ್ಮ ಕಾಲೇಜು ಪ್ರಾಂಶುಪಾಲರ ಮೊಹರು ಹಾಕಿ ದೃಢೀಕರಿಸಿ ಇ-ಮೇಲ್ 2puatcorrection [email protected] ವಿಳಾಸಕ್ಕೆ ಸಲ್ಲಿಸಬೇಕು.
ಮಾಹಿತಿ
ದ್ವಿತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಕೋವಿಡ್ ಸೋಂಕಿನ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ತೇರ್ಗಡೆ:
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.
ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ:
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.
ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯಗಳು ಹಾಗೂ 17,470 ಖಾಸಗಿ ಅಭ್ಯಗಳು ಸೇರಿ 68,6708 ಅಭ್ಯಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.
ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು
ಮಾಹಿತಿ
ರಕ್ತದಾನ, ಔಷಧಗಳು ಸೇರಿದಂತೆ ಹಲವು ತುರ್ತು ಸೇವೆಗಳಿಗಾಗಿ ಸಂಪರ್ಕಿಸಿ
ಬಾಗೇಪಲ್ಲಿ: ಇಡೀ ದೇಶವನ್ನೆ ಆತಂಕಕ್ಕೆ ದೂಡಿರುವ ಕೊರೋನಾ ಸೋಂಕಿನ ಎರಡನೇ ಅಲೆಯು, ರೂಪಾಂತರ ಕೋವೊಡ್ ವೈರಸ್ ದಾಳಿಯನ್ನು ತಡೆಯುವಲ್ಲಿ ಸರ್ಕಾರಗಳೂ ಅಸಹಾಯಕತೆ ತೋರುತ್ತಿವೆ. ಇಂತಹ ಕೊರೋನಾ ಕಷ್ಟಕಾಲದಲ್ಲಿ ಬಡವರಿಗೆ ನೆರವಾಗಲು ಭಾರತದ ಪ್ರಜಾಸತ್ತಾತ್ಮಕ ಯುವ ಫೆಡರೇಶನ್ ನ ತಾಲ್ಲೂಕು ಘಟಕ ಸಹಾಯಕ್ಕೆ ಬರುತ್ತಿದೆ. ರಕ್ತದಾನ, ಔಷಧಗಳು ಸೇರಿದಂತೆ ಹಲವು ತುರ್ತು ಸೇವೆಗಳನ್ನು ಒದಗಿಸಲು ಸಂಘಟನೆಯು ಸಿದ್ದವಾಗಿದ್ದು, ನೆರವು ಬೇಕಾದವರು 9449102933, 9945914151 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಬಹುದೆಂದ ಪ್ರಕಟಣೆ ಕೋರಿದೆ.
ಡಿವೈಎಫ್ಐ ನ ಜಿಲ್ಲಾ ಸಂಚಾಲಕರಾದ ಡಾ.ಅನಿಲ್ ಕುಮಾರ್ ಆವುಲಪ್ಪ ಹಾಗೂ ತಾಲ್ಲೂಕು ಸಂಚಾಲಕರಾದ ವೈ.ಎನ್ ಹರೀಶ್ ರವರು ಈ ಕುರಿತು ಮಾಹಿತಿ ನೀಡಿದ್ದು, ಕೊರೋನಾ ಸೋಂಕಿನ ಬಗ್ಗೆ ಆತಂಕಗೊಳ್ಳದೆ ತಪ್ಪದೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಎಂದಿದ್ದಾರೆ.
-
Politics1 week ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics2 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
Politics4 weeks ago
ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ
-
ಸುದ್ದಿ3 weeks ago
ಸಿಎಂ ತವರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಪೋಟ, 10 ಕ್ಕೂ ಹೆಚ್ಚು ಕಾರ್ಮಿಕರು ಬಲಿ