Politics
ಕೂಲಿ ಕಾರ್ಮಿಕರಿಗೆ ಲಸಿಕೆಯನ್ನು ನೀಡಬೇಕು ಮತ್ತು ಮೊದಲ ಆದ್ಯತೆ ನೀಡಬೇಕು : ಬಿವಿಎಸ್ ಮನವಿ
ರಾಮನಗರ : ಇಂದು ಭಾರತೀಯ ವಿದ್ಯಾರ್ಥಿ ಸಂಘ(BVS)ರಾಮನಗರ ಜಿಲ್ಲೆ ವತಿಯಿಂದ ರಾಮನಗರದ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ Covid 19 ಲಸಿಕೆಯನ್ನು ನೀಡಬೇಕೆಂದು ಮತ್ತು ಇವರಿಗೆ ಮೊದಲ ಆದ್ಯತೆ ನೀಡಬೇಕೆಂದು. ಮಾನ್ಯ (ADC)ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ. ವೆಂಕಟೇಶ್.ಎಸ್ ಜಿಲ್ಲಾದ್ಯಕ್ಷರು . ಜಿಲ್ಲಾ ದಲಿತ ಸಂಘಟನೆಯ ಅದ್ಯಕ್ಷರಾದ ಶಿವಕುಮಾರಸ್ವಾಮಿ ರವರು ಮತ್ತು BVS ನ ಪೊಷಕರಾದ ಹರೀಶ್ ರವರು ಉಪಸ್ಥಿತಿತರಿದ್ದರು.
Politics
ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ
ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಭೆ
ಬೆಂಗಳೂರು : ಮುಂಗಾರು ಮಳೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ಸಭೆ ಜರುಗಿತು.
ಉಪಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ. ರಮಣರೆಡ್ಡಿ, ಬಿ.ಬಿ.ಎಂ.ಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Politics
ಲಾಕ್‌ಡೌನ್‌ನಲ್ಲಿ ಕೆಲವು ವಿನಾಯಿತಿಗಳನ್ನು ಘೋಷಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು : ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಸರ್ಕಾರ ಇಂದಿನಿಂದ ಜಾರಿಗೆ ಬರುವಂತೆ ಲಾಕ್‌ಡೌನ್‌ನಲ್ಲಿ ಕೆಲವು ವಿನಾಯಿತಿಗಳನ್ನು ಘೋಷಣೆ ಮಾಡಿದೆ.
ಬುಧವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಫ್ತು ಆಧರಿತ ಉದ್ಯಮಗಳ ಪ್ರಾರಂಭಕ್ಕೆ ಇಂದಿನಿಂದಲೇ ಅನುಮತಿ ನೀಡಲಾಗಿದೆ.
ಕೃಷಿ ಉತ್ಪನ್ನಗಳು, ಟ್ರ್ಯಾಕ್ಟರ್ ಉತ್ಪಾದನೆ, ಸಿದ್ಧ ಉಡುಪುಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು, ಆಟೋಮೊಬೈಲ್ ಉತ್ಪಾದಿಸುವ ಕೈಗಾರಿಕೆಗಳಿಗೆ ಅವಕಾಶವನ್ನು ನೀಡಲಾಗಿದೆ.
Politics
ಚಿಕ್ಕಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ : ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಶಿಡ್ಲಘಟ್ಟ : ಚಿಕ್ಕಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಎನ್ ವಿಜಯ್ (ಚಿಕನ್ ವಿಜಯ್) ಅವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಮುದಾಸಿರ್ ದಾವೂದ್ ಅವರು ನೇಮಕ ಮಾಡಿರುವ ಆದೇಶ ಪ್ರಮಾಣ ಪತ್ರವನ್ನು ಶಾಸಕ ವಿ ಮುನಿಯಪ್ಪ ಅವರು ನೀಡಿ ಅಭಿನಂದಿಸಿದರು.
ಬದಲಾಗುತ್ತಿರುವ ಸಮಾಜದಲ್ಲಿ ರಾಜಕೀಯ ಕ್ಷೇತ್ರಕ್ಕೆ ಯುವಕರು ಸ್ವಯಂಪ್ರೇರಿತರಾಗಿ ಕೆಲಸ ಮಾಡಲು ಜವಾಬ್ದಾರಿಯುತವಾಗಿ ಪಕ್ಷ ಸಂಘಟನೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ಸಮಾಜದ ಪರಿವರ್ತನೆಗೆ ಮುಂದಾಗಬೇಕಾಗಿದೆ.
ಈಗಿನ ಯುವ ಸಮುದಾಯ ಇತಿಹಾಸವನ್ನು ಮರಿಯುತ್ತಿದ್ದು ನಮ್ಮ ದೇಶ ಸ್ವತಂತ್ರ ಪೂರ್ವದಲ್ಲಿ ಯಾವ ಗತಿ ಪರಿಸ್ಥಿತಿಗಳನ್ನು ಎದುರಿಸಿದ್ದೇವೆ ಎಂಬುದನ್ನು ಸಂಪೂರ್ಣವಾಗಿ ಹಿರಿಯರು ಕಿರಿಯರು ಮರೆಯುತ್ತಿದ್ದಾರೆ. ಈಗಿನ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ವದಂತಿಗಳನ್ನು ಹೆಚ್ಚು ನಂಬುವಂತಹ ಮನಸ್ಥಿತಿ ಬೆಳೆಯುತ್ತಿದೆ ಇದೊಂದು ವಿಪರ್ಯಾಸವಾಗಿದೆ. ವಾಸ್ತವ ಪರಿಸ್ಥಿತಿಯನ್ನು ಜನಸಾಮಾನ್ಯರಿಗೆ ತಿಳಿಸಲು ಯುವಸಮುದಾಯ ಮುಂದಾಗಬೇಕಾಗಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಯುವಕರಿಗೆ ಹೆಚ್ಚು ಅವಕಾಶಗಳು ದೊರೆಯುತ್ತಿದ್ದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಯುವ ಸಂಘಟನೆ ಕಟ್ಟಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸಬೇಕು ಎಂದು ನೂತನವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಚಿಕನ್ ವಿಜಯ್ ಅವರಿಗೆ ಶುಭ ಕೋರಿ ಪಕ್ಷ ಸಂಘಟನೆಗೆ ಸಲಹೆ ನೀಡಿದರು
ಈ ಸಂದರ್ಭದಲ್ಲಿ ಚಿಲಕಲನೇರ್ಪು ಹೋಬಳಿಯ ಕಾಂಗ್ರೆಸ್ ಮುಖಂಡರಾದ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಸಾದ್ , ಅನಂಪಲ್ಲಿ ಕೃಷ್ಣಾರೆಡ್ಡಿ , ವಾಲ್ಮೀಕಿ ಸಂಘಟನೆಯ ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಮತ್ತೂರು ವೆಂಕಟೇಶ್, ನಡುಂಪಲ್ಲಿ ಶ್ರೀನಿವಾಸ್ , ದೊಡ್ಡದಾಸರಹಳ್ಳಿ ದೇವರಾಜ್ , ಕಾಂಗ್ರೆಸ್ ಮುಖಂಡರು ಸೇರಿದಂತೆ ಮುಂತಾದವರು ಹಾಜರಿದ್ದರು.
ವರದಿ : ಕೆ.ಮಂಜುನಾಥ್.ಶಿಡ್ಲಘಟ್ಟ
-
Politics2 weeks ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics2 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
ಸುದ್ದಿ4 weeks ago
ಸಿಎಂ ತವರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಪೋಟ, 10 ಕ್ಕೂ ಹೆಚ್ಚು ಕಾರ್ಮಿಕರು ಬಲಿ
-
ಸುದ್ದಿ4 weeks ago
ನರೇಗಾ ಯೋಜನೆಯಲ್ಲಿ ಕಾಮಗಾರಿಗಳಿಗೆ ಯಂತ್ರಗಳ ಬಳಕೆ