ರಾಜ್ಯ
ಉತ್ತಮ ಮುಂಗಾರು ಮಳೆ, ಗರಿಗೆದರಿದ ಕೃಷಿ ಚಟುವಟಿಕೆಗಳು
ಬಾಗೇಪಲ್ಲಿ: ತಾಲ್ಲೂಕಿನಾದ್ಯಂತ ಸತತ ಐದು ವರ್ಷಗಳಿಂದ ಅನಾವೃಷ್ಟಿಯಿಂದ ರೈತಾಪಿ ಜನರು ಅಕ್ಷರಶಃ ನಲುಗಿ ಹೋಗಿತ್ತು. ಕಳೆದ ಕೆಲ ದಿನಗಳಿಂದ ಮಳೆ ಬೀಳುತ್ತಲಿದ್ದು
ಮುಂಗಾರು ಪೂರ್ವದಲ್ಲೇ ಮಳೆ ಚುರುಕುಗೊಂಡಿದೆ. ಹೊಸ ಭರವಸೆಯೊಂದಿಗೆ ರೈತರು ಮತ್ತೆ ಜಮೀನುಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಮುಂಗಾರು ಬಿತ್ತನೆಗೆ ಸಜ್ಜುಗೊಳ್ಳುತ್ತಿದ್ದಾರೆ.
ಈ ನಡುವೆ ಆವರಿಸಿರುವ ಕೊರೊನಾ ಆತಂಕದ ಮಧ್ಯೆಯೇ ರೈತರು ಕೃಷಿ ಚಟುಕವಟಿಕೆಗಳಿಗೆ ಸಿದ್ಧತೆ ನಡೆಸಿದ್ದಾರೆ. ಅಲ್ಲದೇ, ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನವೇ ತಾಲೂಕಿನಲ್ಲಿ ಮಳೆ ಚುರುಕೊಂಡಿದ್ದು, ಕೃಷಿಕರಲ್ಲಿ ಹೊಸ ಚೈತನ್ಯ ಮೂಡಿಸಿದೆ.
ತಾಲ್ಲೂಕು ಮುಂಗಾರಿಗೆ ಆಗಬಹುದಾದ ಬಿತ್ತನೆ ಪ್ರಮಾಣಕ್ಕೆ ತಕ್ಕಂತೆ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಶೇಂಗಾ, ಸೂರ್ಯಕಾಂತಿ, ಹೈಬ್ರಿಡ್ ಜೋಳ, ಮುಸುಕಿನ ಜೋಳ, ಸಜ್ಜೆ, ಹೆಸರು, ತೊಗರಿ, ಇನ್ನೂ ಮುಂತಾದ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ.
ತಾಲ್ಲೂಕಿನ ಮುಂದಿನ ಮಳೆ ಪ್ರಮಾಣ ಹಾಗೂ ರೈತರ ಬೇಡಿಕೆಗೆ ಅನುಗುಣವಾಗಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಮತ್ತಷ್ಟು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿಕೊಳ್ಳಲಾಗುವುದು ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು. ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳಬೇಕೆಂದು ಬಾಗೇಪಲ್ಲಿ ತಾಲ್ಲೂಕು ಕೃಷಿ ನಿರ್ದೇಶಕರಾದ ಕೆ.ಸಿ.ಮಂಜುನಾಥ ಮನವಿ ಮಾಡಿದ್ದಾರೆ.
ರೈತ ಸಂಪರ್ಕ ಕೇಂದ್ರಗಳು ರೈತರ ಅನುಕೂಲಕ್ಕಾಗಿ ತಾಲೂಕಿನಾದ್ಯಂತ 6 ಕಡೆ ರೈತ ಸಂಪರ್ಕ ವಿತರಣಾ ಕೇಂದ್ರಗಳನ್ನು ವ್ಯವಸ್ಥೆ ಮಾಡಲಾಗಿದೆ ಬಾಗೇಪಲ್ಲಿ ಪಟ್ಟಣದ ಬಾಗೇಪಲ್ಲಿ ಕಸಬಾ, ಗೂಳೂರು, ಪಾತಪಾಳ್ಯ, ಮಿಟ್ಟೇಮರಿ, ಚೇಳೂರು ಚಾಕವೇಲು ಗ್ರಾಮದಲ್ಲಿ ಬಿತ್ತನೆ ಬೀಜಗಳ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಕೃಷಿ ನಿರ್ದೇಶಕರಾದ ಕೆ.ಸಿ.ಮಂಜುನಾಥ ತಿಳಿಸಿದ್ದಾರೆ.
ಆದರೂ ಕೆಲ ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಯಾಗಿ ಬಿತ್ತನೆ ಬೀಜ ವಿತರಣೆಯಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.
ಮಾಹಿತಿ
ರಾಜ್ಯದಾದ್ಯಂತ ಜುಲೈ 1 ರಿಂದ ಶಾಲೆಗಳು ಆರಂಭ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ.
ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಹೇಳಿದ್ದಾರೆ. ಬಹುತೇಕ ಶಾಲಾ-ಕಾಲೇಜುಗಳು ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ಇಲಾಖೆ ಅಧಿಕೃತವಾಗಿ ಎಂದಿನಿಂದ ಶೈಕ್ಷಣಿಕ ವರ್ಷ ಆರಂಭಿಸಲಾಗುತ್ತದೆ ಎಂಬ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಜೂ.15ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ.
ರಾಜ್ಯ
ಸಿಬಿಎಸ್ ಇ 10 ನೇ ತರಗತಿ ಫಲಿತಾಂಶ ಮುಂದೂಡಿಕೆ
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಇ 10 ನೇ ತರಗತಿ ಫಲಿತಾಂಶ ಮುಂದೂಡಿಕೆ ಮಾಡಲಾಗಿದೆ.
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ನೇ ತರಗತಿ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ಈಗಾಗಲೇ ಪರೀಕ್ಷೆಯನ್ನು ರದ್ದು ಮಾಡಿರುವ ಸಿಬಿಎಸ್ ಇ ಶಾಲೆಗಳಿಗೆ ವಿದ್ಯಾರ್ಥಿಗಳು ಹಿಂದಿನ ಪರೀಕ್ಷೆಗಳಲ್ಲಿ ಮತ್ತು ಇತರ ಅಭ್ಯಾಸ ಪುಸ್ತಕಗಳಲ್ಲಿ ನೀಡಲಾಗಿರುವ ಅಂಕಗಳನ್ನು ಪರಿಶೀಲನೆ ನಡೆಸಿ, ಸಲ್ಲಿಸಲು ಹೆಚ್ಚಿನ ಸಮಯ ಬೇಕಾದ ಹಿನ್ನೆಲೆಯಲ್ಲಿ ಫಲಿತಾಂಶ ದಿನಾಂಕವನ್ನು ಮುಂದೂಡಿದೆ.
ರಾಜ್ಯ
ಮಸ್ಕಿ ತಾಲೂಕಿನಾದ್ಯಂತ ಮಳೆಯಾಗಿದ್ದು : ರಸ್ತೆಯಲ್ಲಿ ಮೇಲೆ ನೀರು ನಿಂತಿದ್ದು, ಜನತೆಗೆ ತೊಂದರೆ
ಮಸ್ಕಿ :- ಮಸ್ಕಿ ತಾಲೂಕಿನ ವಿವಿಧೆಡೆ ಶನಿವಾರ ಸಂಜೆಯ ವೇಳೆಯಲ್ಲಿ ಕೆಲ ಕಾಲ ಸುರಿದ ಭಾರಿ ಮಳೆಯಿಂದ ನಗರದ ಅನೇಕ ಬಡಾವಣೆಗಳಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು ಫಜೀತಿಗೊಳಗಾದರು.
ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆಗಳ ಇಕ್ಕೆಲದಲ್ಲಿ ಮಳೆ ನೀರಿಗೆ (ಕಾಂಕ್ರಿಟ್ ಬಾಕ್ಸ್ ಚರಂಡಿ) ನಿರ್ಮಿಸಲಾಗಿದೆಯಾದರೂ, ಇದರ ನಿರ್ವಹಣೆ ಇಲ್ಲದಿರುವುದು ಈ ರೀತಿಯ ಸಮಸ್ಯೆಗೆ ಕಾರಣವಾಗಿದ್ದು, ಪ್ರತಿ ಮಳೆಗಾಲದಲ್ಲೂ ಈ ಸಮಸ್ಯೆ ಪುನರಾವರ್ತಿತವಾಗುತ್ತಿದೆ.
ಚರಂಡಿಯಲ್ಲಿ ಮಣ್ಣು ಹಾಗೂ ಕಸ ತುಂಬಿರುವುದರಿಂದ ಅನೇಕ ಕಡೆಗಳಲ್ಲಿ ಚರಂಡಿಗೆ ನೀರು ಹೋಗದೆ, ರಸ್ತೆಯಲ್ಲೇ ಹರಿಯಿತು.
ಕೆಲವೆಡೆ ಚರಂಡಿಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ನೀರು ಚರಂಡಿಯಲ್ಲಿ ಮುಂದಕ್ಕೆ ಹರಿಯಲಾಗದೆ ಅಲ್ಲೇ ನಿಲ್ಲುವಂತಾಯಿತು.
ಕೆಲವೆಡೆ ಚರಂಡಿ ಮೇಲೆ ಸ್ಲಾಬ್ ಜೋಡಿಸಿದ್ದು, ಅವುಗಳನ್ನು ತೆಗೆದು ಸ್ವಚ್ಛಗೊಳಿಸದಿರುವುದರಿಂದ ನೀರು ನಿಲ್ಲುವ ಈ ಸಮಸ್ಯೆ ಉದ್ಭವಿಸಿತು.
ನಗರದ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಇದರ ನಿರ್ವಹಣೆಯು ರಾಷ್ಟ್ರೀಯ ಹೆದ್ದಾರಿ ಇಲಾಖೆಯದ್ದಾಗಿದ್ದರೂ ಇಲ್ಲೂ ಸಹ ಮಳೆ ನೀರಿನ ಚರಂಡಿ ನಿರರ್ಥಕವಾಗಿದ್ದು, ಮಳೆ ಬಂದಾಗ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯಲ್ಲೇ ಹರಿಯುವುದನ್ನು ಹಾಗೂ ಕೆಲವೆಡೆ ಸರ್ವಿಸ್ ರಸ್ತೆಯಲ್ಲೇ ನೀರು ಹಳ್ಳದಂತೆ ನಿಲ್ಲುವುದನ್ನು ಜನರು ಉಲ್ಲೇಖಿಸುತ್ತಿದ್ದಾರೆ.
ಬಾಕ್ಸ್ ಚರಂಡಿ ನಿರ್ಮಾಣ ಮಾಡುವುದೇ ಒಂದು ದಂಧೆಯಂತಾಗಿದೆ. ಇದಕ್ಕಾಗಿ ಮಸ್ಕಿ ನಗರ ಪುರಸಭೆಯು ಕೋಟ್ಯಂತರ ರೂ. ವೆಚ್ಚ ಮಾಡಿದೆ. ಆದರೆ ಎಲ್ಲೂ ಸಹ ಇದು ವೈಜ್ಞಾನಿಕವಾಗಿ ನಿರ್ಮಾಣಗೊಂಡಿಲ್ಲ.
ಮಳೆ ಬಂದಾಗ ಮಳೆಯ ನೀರು ಸರಾಗವಾಗಿ ಮುಂದಕ್ಕೆ ಹರಿದು ಹೋಗುವಂತೆ ಸಂಪರ್ಕ ಜಾಲ ಇಲ್ಲವೇ ಇಲ್ಲ. ರಸ್ತೆಯ ಮೇಲೆ ಬಿದ್ದ ಮಳೆ ನೀರು ತಕ್ಷಣವೇ ಅಕ್ಕಪಕ್ಕದ ಚರಂಡಿಗೆ ಹರಿದುಬರುವಂತೆ ವೈಜ್ಞಾನಿಕವಾಗಿ ಚರಂಡಿಗಳನ್ನು ನಿರ್ಮಿಸಿಲ್ಲ.
ಮನಬಂದಂತೆ ನಿರ್ಮಿಸಿ ಬಿಲ್ ಮಾಡಿಕೊಳ್ಳಲಾಗಿದ್ದು ನೆಪಕ್ಕಷ್ಟೇ ಚರಂಡಿ ಇರುತ್ತದೆ ಎಂದು ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ವರದಿ : ದುರ್ಗೇಶ್ ಭೋವಿ ಮಸ್ಕಿ
-
Politics2 weeks ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics3 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
ಸುದ್ದಿ3 weeks ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
-
ಕೊರೊನಾ2 weeks ago
ವಿದುರಾಶ್ವತ್ಥದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ವಿತರಣೆ