ಮಾಹಿತಿ
ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್
ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ : ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ
ಬೆಂಗಳೂರು : ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ, ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ ಮಾಡಿದೆ. ಆಗಸ್ಟ್ 28, 29ರಂದು ನಡೆಸಲು ನಿರ್ಧರಿಸಿದೆ.
ಈ ಕುರಿತಂತೆ ಇಂದು ಸಿಇಟಿ ವಿಚಾರವಾಗಿ ನಡೆದಂತ ಸಭೆಯ ನಂತ್ರ, ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಸಿಇಟಿ ಸಭೆ ವಿಚಾರದಲ್ಲಿ ಸಭೆಯನ್ನು ಕರೆಯಲಾಗಿತ್ತು.
ಈ ಸಭೆಯಲ್ಲಿ ವಿವಿಧ ಅಧಿಕಾರಿಗಳು, ತಜ್ಞರು ಭಾಗವಹಿಸಿದ್ದರು. ಸಚಿವ ಸುರೇಶ್ ಕುಮಾರ್ ಸಲಹೆಯನ್ನು ನೀಡಿ, ದ್ವಿತೀಯ ಪಿಯು ಅಂಕಗಳನ್ನು ಈ ಬಾರಿ ಪರಿಗಣಿಸದಂತೆ ಮನವಿ ಮಾಡಿದ್ದರು. ಸಿಇಟಿ ಆಧಾರದ ಮೇಲೆ RANK ನೀಡುವ ಕಾರ್ಯ ನಡೆಯಬೇಕು ಎಂಬುದಾಗಿ ತಿಳಿಸಿದ್ದರು. ಈ ವಿಚಾರವಾಗಿ ವಿಸೃತವಾಗಿ ಚರ್ಚೆ ಮಾಡಿ, ಸಂಬಂಧ ಪಟ್ಟ ಎಲ್ಲಾ ಕೌನ್ಸಿಲ್ ಗಳಿಗೆ ಪತ್ರವನ್ನು ಬರೆದು, ಈ ಬಗ್ಗೆ ರಿಲ್ಯಾಕ್ಸೇಷನ್ ಕೊಡುವಂತೆ ಕೋರಲಾಗುತ್ತದೆ ಎಂದರು
ಮಾಹಿತಿ
ರಾಜ್ಯದಾದ್ಯಂತ ಜುಲೈ 1 ರಿಂದ ಶಾಲೆಗಳು ಆರಂಭ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ.
ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಹೇಳಿದ್ದಾರೆ. ಬಹುತೇಕ ಶಾಲಾ-ಕಾಲೇಜುಗಳು ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ಇಲಾಖೆ ಅಧಿಕೃತವಾಗಿ ಎಂದಿನಿಂದ ಶೈಕ್ಷಣಿಕ ವರ್ಷ ಆರಂಭಿಸಲಾಗುತ್ತದೆ ಎಂಬ ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಜೂ.15ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ.
ಮಾಹಿತಿ
ಮುಂದಿನ ಮೂರು ದಿನ ಭಾರೀ ಮಳೆ : ಕರಾವಳಿಯಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮಾನ್ಸೂನ್ ಜೂನ್ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಮಾಹಿತಿ
ಹಾಲ್ ಟಿಕೆಟ್ ತಿದ್ದುಪಡಿ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವಿದ್ಯಾರ್ಥಿಗಳ ಕರಡು ಪ್ರವೇಶ ಪತ್ರಗಳನ್ನು ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆಯಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ತಿದ್ದುಪಡಿಗಳಿದ್ದಲ್ಲಿ ಮೇ. 20 ರೊಳಗೆ ಮನವಿ ಸಲ್ಲಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.
ಎಸ್ ಎಟಿಎಸ್ ಪೋರ್ಟಲ್ ಮೂಲಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕರಡು ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಿ ತಿದ್ದುಪಡಿಗಳಿದ್ದರೆ ಅದನ್ನು ಕೆಂಪು ಶಾಯಿಯಿಂದ ಗುರುತು ಮಾಡಿ ಹಾಗೂ ತಿದ್ದುಪಡಿಗೆ ತಮ್ಮ ಕಾಲೇಜು ಪ್ರಾಂಶುಪಾಲರ ಮೊಹರು ಹಾಕಿ ದೃಢೀಕರಿಸಿ ಇ-ಮೇಲ್ 2puatcorrection [email protected] ವಿಳಾಸಕ್ಕೆ ಸಲ್ಲಿಸಬೇಕು.
-
Politics2 weeks ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics3 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
ಸುದ್ದಿ3 weeks ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
-
ಕೊರೊನಾ3 weeks ago
ವಿದುರಾಶ್ವತ್ಥದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ವಿತರಣೆ