Connect with us
Ad Widget

ಮನರಂಜನೆ

ನಟ ದರ್ಶನ್ ಮನವಿಗೆ ಸ್ಪಂದಿಸಿದ ಪ್ರಾಣಿ ಪ್ರಿಯರು

Published

on

ಮೈಸೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರಾಜ್ಯದ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ನಟ ದರ್ಶನ್‌ ನೀಡಿದ್ದ ಕರೆಗೆ ಪ್ರಾಣಿ ಪ್ರಿಯರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.

ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್‌ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್‌, ಕೋವಿಡ್‌ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.

ಕರ್ನಾಟಕದಲ್ಲಿ 9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್‌ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.

ಮೈಸೂರು ಮೃಗಾಲಯಕ್ಕೆ ಪ್ರಾಣಿಗಳಿಗೆ ಆಹಾರ ನೀಡಲು ಮತ್ತು ಅವುಗಳ ನಿರ್ವಹಣೆಗಾಗಿ ವರ್ಷಕ್ಕೆ ಸುಮಾರು 4.5 ಕೋಟಿ ರೂ.ಹಣ ಬೇಕಾಗಿದೆ. ಪ್ರಾಣಿಗಳ ದತ್ತು ಪಡೆಯುವುದರಿಂದ ಹೊರೆ ತಗ್ಗಿಸುತ್ತದೆ. ಮಾನವರು ತಮ್ಮ ಕಷ್ಟಗಳನ್ನು ವ್ಯಕ್ತಪಡಿಸಬಹುದು ಮತ್ತು ಹೆಚ್ಚಿನ ಹಣ ಅಥವಾ ಆಹಾರವನ್ನು ಕೇಳಬಹುದು. ಪ್ರಾಣಿಗಳು ತಮ್ಮ ಹಸಿವನ್ನು ಯಾವ ರೀತಿಯಲ್ಲಿ ವ್ಯಕ್ತಪಡಿಸುತ್ತವೆ? ಮಾನವರಾದ ನಾವು ಅವುಗಳಿಗೆ ಪರಿಹಾರ ನೀಡಬೇಕು ಎಂದು ದರ್ಶನ್ ಹೇಳಿದ್ದರು.

ಪ್ರಾಣಿಗಳ ದತ್ತು ವಿಷಯದಲ್ಲಿ ವೀಡಿಯೊ ನೋಡಿದ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರುತ್ತಿದೆ.

ಸಹಾಯ ಮಾಡಲು ಮುಂದೆ ಬಂದ ಜನರಿಗೆ ದರ್ಶನ್ ಕೃತಜ್ಞತೆ ತಿಳಿಸಿದ್ದಾರೆ. ಒಂದಾನೊಂದು ಕಾಲದಲ್ಲಿ ಹುಲಿ ಮತ್ತು ಜಿರಾಫೆ ಜೀವಿಸಿದ್ದವು ಎಂದು ನಾವು ಹೇಳುವ ಕಾಲ ಬರಲಾರದು ಎಂದು ನಾನು ಬಾವಿಸುತ್ತೇನೆ, ಈ ಸಂಕಷ್ಟ ಕಾಲದಲ್ಲಿ ನಾವು ಪರಸ್ಪರರಿಗೆ ಜೊತೆಯಾಗಿ ನೆರವಿಗೆ ನಿಲ್ಲೋಣ, ಹಾಗೂ ಪ್ರಾಣಿ ಸಂಕುಲವನ್ನು ರಕ್ಷಿಸೋಣ ಎಂದು ದರ್ಶನ್ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ರಾಯಭಾರಿ ನಟ ದರ್ಶನ್ ಅವರಿಂದ ಪ್ರೇರೇಪಿತರಾದ ಪ್ರಾಣಿಪ್ರಿಯರು ಮೂರುದಿನದಿಂದ ಸುಮಾರು 40 ಲಕ್ಷ ರೂಪಾಯಿಗಳನ್ನು ವಿವಿಧ ಮೃಗಾಲಯಗಳಿಗೆ ದೇಣಿಗೆ ನೀಡಿದ್ದಾರೆ.
50 ರೂಪಾಯಿಯಿಂದ 1 ಲಕ್ಷ ರೂಪಾಯಿವರೆಗೆ ಸಾರ್ವಜನಿಕರು ದೇಣಿಗೆ ನೀಡಿದ್ದಾರೆ.
ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಅವರು ದರ್ಶನ್ ಅವರ ಸೇವೆಯನ್ನು ಪ್ರಶಂಸಿಸಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಮನರಂಜನೆ

ಚಂದನವನದ ಹಿರಿಯ ಪೋಷಕ ನಟಿ ಬಿ. ಜಯಾ ವಿಧಿವಶ

Published

on

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.

ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ. ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.

Continue Reading

ಮನರಂಜನೆ

ಬುದ್ಧಿಮಾಂದ್ಯ ಶಾಲೆಯ ಮಕ್ಕಳಿಗೆ ನೆರವಾಗುವ ಮೂಲಕ ಹೃದಯವಂತಿಕೆ ಮೆರೆದ ಕಿಚ್ಚ

Published

on

ಬೆಂಗಳೂರು: ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಕಿಚ್ಚ ಸುದೀಪ್ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ.

ಇದೀಗ ಇವರು ತಮ್ಮ ಹುಡುಗರ ಮೂಲಕ ಗುಂಡ್ಲುಪೇಟೆಯ ಬುದ್ಧಿಮಾಂದ್ಯ ಶಾಲೆಯ ಮಕ್ಕಳಿಗೆ ನೆರವಾಗುವ ಮೂಲಕ ಹೃದಯವಂತಿಕೆ ಮೆರೆದಿದ್ದಾರೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಹಿರಿಯ ಕಲಾವಿದರಿಗೆ ಕಿಟ್ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದ ಸುದೀಪ್, ಶಾಲಾ ಶಿಕ್ಷಕರಿಗೂ ನೆರವಾಗಿದ್ದರು. ಇದೀಗ ಸಂಕಷ್ಟದಲ್ಲಿರುವ ಮಕ್ಕಳಿಗೆ ತಮ್ಮ ಕೈಲಾದ ನೆರವು ನೀಡಿದ್ದಾರೆ.

Continue Reading

ಮನರಂಜನೆ

ಬೋಲ್ಡ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರಿಯಾ ವಾರಿಯರ್​

Published

on

2018ರಲ್ಲಿ ಪುಟ್ಟ ವಿಡಿಯೋ ಕ್ಲಿಪ್​ನಿಂದಾಗಿ ರಾತ್ರೋರಾತ್ರಿ ಸ್ಟಾರ್​ ಆದ ಹುಡುಗಿ ಈ ಪ್ರಿಯಾ ಪ್ರಕಾಶ್​ ವಾರಿಯರ್​ (Priya Prakash Varrier).

ಆ ಒಂದು ವೈರಲ್​ ವಿಡಿಯೋದಲ್ಲಿ ಕೇವಲ ಒಂದೇ ಒಂದು ಕಣ್ಸನ್ನೆಯಿಂದ ಈ ಹುಡುಗಿ ಸಿಕ್ಕಾಪಟ್ಟೆ ಫೇಮಸ್​ ಆಗಿದ್ದರು. ಈಗ ಇದೇ ಪ್ರಿಯಾವಾರಿಯರ್ ಸಖತ್​ ಬೋಲ್ಡ್​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪ್ರಿಯಾ ವಾರಿಯರ್​ ಇದೇ ಮೊದಲ ಸಲ ಇಷ್ಟು ಬೋಲ್ಡ್​ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೇ ಮೊದಲ ಸಲ ಟಾಪ್​ಲೆಸ್​ ಫೋಟೋ ವನ್ನು ಪ್ರಿಯಾ ಹಂಚಿಕೊಂಡಿದ್ದಾರೆ.

ಪ್ರಿಯಾ ಅವರ ಈ ಬೋಲ್ಡ್​ ಹಾಗೂ ಹಾಟ್​ ಫೋಟೋಗಳು ವೈರಲ್​ ಆಗುತ್ತಿದ್ದಂತೆ ಅಭಿಮಾನಿಗಳು ಸಿಕ್ಕಾಪಟ್ಟೆ ಕಮೆಂಟ್​ ಮಾಡುತ್ತಿದ್ದಾರೆ.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್