ಮನರಂಜನೆ
ನಟ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಪಿತೂರಿ
ನಟ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಪಿತೂರಿ : ಸರ್ಕಾರಿ ಮುದ್ರೆ ದುರ್ಬಳಕೆ ಬಗ್ಗೆ ದ್ರಾವಿಡ ಆರ್ಮಿಯಿಂದ ದೂರು
ಬೆಂಗಳೂರು: ಸರ್ಕಾರಿ ಮುದ್ರೆಯನ್ನು ದುರ್ಬಳಕೆ ಮಾಡಿಕೊಂಡು ಸಮುದಾಯವೊಂದರ ಹೆಸರನ್ನು ಬಳಸಿಕೊಂಡು ಆದಿನಗಳ ಖ್ಯಾತಿಯ ನಟ ಹೋರಾಟಗಾರ ಚೇತನ್ ಅಹಿಂಸಾ ಅವರ ವಿರುದ್ಧ ದುರುದ್ದೇಶಪೂರಿತ ಕೇಸ್ ದಾಖಲಿಸಿರುವುದರ ವಿರುದ್ಧ ರಾಜ್ಯಾದ್ಯಂತ ಸಾರ್ವಜನಿಕರು ಅಭಿಮಾನಿಗಳು ವಿವಿಧ ಸಂಘಸಂಸ್ಥೆಗಳು ಆಕ್ರೋಶಗೊಂಡಿವೆ.
ಈ ವಿಚಾರವಾಗಿ ದ್ರಾವಿಡ ಆರ್ಮಿ ಮುಖಂಡ ಸಂಪತ್ ಸುಬ್ಬಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ಇ – ಮೇಲ್ ಮೂಲಕ ದೂರು ನೀಡಿದ್ದು, ದೂರುದಾರರು ಸರ್ಕಾರಿ ಮುದ್ರೆ ದುರುಪಯೋಗ ಪಡಿಸಿಕೊಂಡಿದ್ದು, ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ದೂರು ನೀಡಿದ್ದಾರೆ.
ಕನ್ನಡದ ಖ್ಯಾತ ನಟ ಚೇತನ್ ಅಹಿಂಸಾ ಅವರು ರಾಜ್ಯಾದ್ಯಂತ ಕೊರೊನಾ ಸೋಂಕಿತರು, ಕೊರೊನಾ ವಾರಿಯರ್ಸ್, ಲಾಕ್ ಡೌನ್ ಸಂತ್ರಸ್ತರಿಗೆ ಜೀವನಾಗತ್ಯ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆಯನ್ನು ಮಾಡಿದ ನಟರೊಬ್ಬರ ಬಗ್ಗೆ ಚೇತನ್ ರವರು ಟೀಕೆ ಮಾಡಿದ್ದರು. ಸಮಾನತೆಯನ್ನು ಬಯಸುವ, ಸಂವಿಧಾನದಲ್ಲಿ ನಂಬಿಕೆ ಇರುವ ಭಾರತದ ಯಾವ ನಾಗರಿಕನೂ ಕೊರೊನಾ ಸಂತ್ರಸ್ತರಲ್ಲೂ ಬ್ರಾಹ್ಮಣರನ್ನು ಪ್ರತ್ಯೇಕಿಸುವುದನ್ನು ಒಪ್ಪಲಾರರು. ಅಂತೆಯೇ ನಟ ಚೇತನ್ ಕೂಡಾ ಅದನ್ನು ಖಂಡಿಸಿ ಮಾತನಾಡುವ ಜೊತೆಗೆ ಬ್ರಾಹ್ಮಣ್ಯದ ಅಪಾಯಗಳನ್ನು ಜನರಿಗೆ ಮನವರಿಕೆ ಮಾಡಿದ್ದರು.
ಅದಕ್ಕಾಗಿ ಚೇತನ್ ಅವರು ದೇಶದ ಮಹಾನ್ ಚೇತನಗಳಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಚಿಂತಕ ಪೆರಿಯಾರ್ ಮಾತುಗಳನ್ನು ಉಲ್ಲೇಖಿಸಿದ್ದರು. “ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು” ಎಂದು ಅಂಬೇಡ್ಕರ್ ಹೇಳಿದ್ದನ್ನೇ ಅಂಬೇಡ್ಕರ್ ಹೆಸರಿನಲ್ಲಿಯೇ ಚೇತನ್ ಬರೆದಿದ್ದರು. ಮುಂದುವರೆದು “ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ” ಎಂದು ಪೆರಿಯಾರ್ ಹೇಳಿದ್ದನ್ನು ಉಲ್ಲೇಖಿಸಿದ್ದರು.
ದ್ರಾವಿಡ ಭೀಮ್ ಆರ್ಮಿ ರಾಜ್ಯಾಧ್ಯಕ್ಷರು ನೀಡಿರುವ ದೂರಿನಲ್ಲಿ ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದು, ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ.
ಬ್ರಾಹ್ಮಣ ಅಭಿವೃದ್ದಿ ಮಂಡಳಿಯು ಬ್ರಾಹ್ಮಣರ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾಗಿರುವ ಸರ್ಕಾರಿ ಸಂಸ್ಥೆಯಾಗಿದೆ. ಬಡ, ಹಿಂದುಳಿದ ಬ್ರಾಹ್ಮಣರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವುದು ಮತ್ತು ಜಾರಿ ಮಾಡುವುದಷ್ಟೇ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಕೆಲಸವಾಗಿರುತ್ತದೆ. ಬಡ, ಹಿಂದುಳಿದ ಬ್ರಾಹ್ಮಣರ ಅಭಿವೃದ್ದಿಯ ನಿಟ್ಟಿನಲ್ಲಿ ಕೆಲಸ ಮಾಡದ ಮಂಡಳಿ ಅಧ್ಯಕ್ಷರು, ಸರ್ಕಾರಿ ದಾಖಲೆ, ಮುದ್ರೆ, ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ಹೆಸರನ್ನು ದುರುಪಯೋಗಪಡಿಸಿಕೊಂಡು ನಟ ಚೇತನ್ ವಿರುದ್ದ ದೂರು ನೀಡುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದಾರೆ.
ಆದ್ದರಿಂದ ಬಸವ ಅನುಯಾಯಿ ಆಗಿರುವ ಶರಣ ಚೇತನ್ ಅಹಿಂಸಾ ವಿರುದ್ದ ಸರ್ಕಾರಿ ದಾಖಲೆಯನ್ನು ದುರುಪಯೋಗಪಡಿಸಿಕೊಂಡು ಬ್ರಾಹ್ಮಣರನ್ನು ಎತ್ತಿಕಟ್ಟುವ, ಸಮುದಾಯಗಳ ಮಧ್ಯೆ ಅಶಾಂತಿ ಸೃಷ್ಟಿಸುವ ಮತ್ತು ಸರ್ಕಾರಿ ಲಾಂಛನ ದುರುಪಯೋಗ ಪಡಿಸಿಕೊಂಡಿರುವ ಹೆಚ್ ಎಸ್ ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.
ಮನರಂಜನೆ
ನಟ ದರ್ಶನ್ ಮನವಿಗೆ ಸ್ಪಂದಿಸಿದ ಪ್ರಾಣಿ ಪ್ರಿಯರು
ಮೈಸೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರಾಜ್ಯದ ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ನಟ ದರ್ಶನ್ ನೀಡಿದ್ದ ಕರೆಗೆ ಪ್ರಾಣಿ ಪ್ರಿಯರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
ಅರಣ್ಯ ಇಲಾಖೆ ರಾಯಭಾರಿಯಾಗಿರುವ ನಟ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಈಗಾಗಲೇ ಮೈಸೂರು ಮೃಗಾಲಯದಲ್ಲಿ ಹಲವು ಪ್ರಾಣಿಗಳನ್ನು ದತ್ತು ಪಡೆದಿರುವ ದರ್ಶನ್, ಕೋವಿಡ್‌ನ ಈ ಸಂಕಷ್ಟದ ಸಂದರ್ಭದಲ್ಲಿ ಜನರೂ ತಮ್ಮ ಹತ್ತಿರದ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳನ್ನು ದತ್ತುಪಡೆಯಲು ಕರೆ ನೀಡಿದ್ದರು.
ಕರ್ನಾಟಕದಲ್ಲಿ 9 ಮೃಗಾಲಯಗಳಿದ್ದು, ಇವುಗಳಲ್ಲಿ 5 ಸಾವಿರ ಪ್ರಾಣಿಗಳಿವೆ. ಇವುಗಳನ್ನು ನೋಡಲು ದೇಶದಾದ್ಯಂತದಿಂದ ಜನರು ಬರುತ್ತಿದ್ದರು. ಅವರು ಪಡೆಯುತ್ತಿದ್ದ ಟಿಕೆಟ್‌ನಿಂದ ಸಂಗ್ರಹವಾಗುತ್ತಿದ್ದ ಹಣದಿಂದ ಈ ಪ್ರಾಣಿಗಳಿಗೆ ಆಹಾರ, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ವೇತನ ನೀಡಲಾಗುತ್ತಿತ್ತು. ಕೋವಿಡ್‌ನಿಂದಾಗಿ ಕಳೆದ ಒಂದೂವರೆ ವರ್ಷದಿಂದ ಈ ಮೃಗಾಲಯಗಳು ಸಂಕಷ್ಟದಲ್ಲಿವೆ’ ಎಂದಿದ್ದರು.
ಮೈಸೂರು ಮೃಗಾಲಯಕ್ಕೆ ಪ್ರಾಣಿಗಳಿಗೆ ಆಹಾರ ನೀಡಲು ಮತ್ತು ಅವುಗಳ ನಿರ್ವಹಣೆಗಾಗಿ ವರ್ಷಕ್ಕೆ ಸುಮಾರು 4.5 ಕೋಟಿ ರೂ.ಹಣ ಬೇಕಾಗಿದೆ. ಪ್ರಾಣಿಗಳ ದತ್ತು ಪಡೆಯುವುದರಿಂದ ಹೊರೆ ತಗ್ಗಿಸುತ್ತದೆ. ಮಾನವರು ತಮ್ಮ ಕಷ್ಟಗಳನ್ನು ವ್ಯಕ್ತಪಡಿಸಬಹುದು ಮತ್ತು ಹೆಚ್ಚಿನ ಹಣ ಅಥವಾ ಆಹಾರವನ್ನು ಕೇಳಬಹುದು. ಪ್ರಾಣಿಗಳು ತಮ್ಮ ಹಸಿವನ್ನು ಯಾವ ರೀತಿಯಲ್ಲಿ ವ್ಯಕ್ತಪಡಿಸುತ್ತವೆ? ಮಾನವರಾದ ನಾವು ಅವುಗಳಿಗೆ ಪರಿಹಾರ ನೀಡಬೇಕು ಎಂದು ದರ್ಶನ್ ಹೇಳಿದ್ದರು.
ಪ್ರಾಣಿಗಳ ದತ್ತು ವಿಷಯದಲ್ಲಿ ವೀಡಿಯೊ ನೋಡಿದ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರುತ್ತಿದೆ.
ಸಹಾಯ ಮಾಡಲು ಮುಂದೆ ಬಂದ ಜನರಿಗೆ ದರ್ಶನ್ ಕೃತಜ್ಞತೆ ತಿಳಿಸಿದ್ದಾರೆ. ಒಂದಾನೊಂದು ಕಾಲದಲ್ಲಿ ಹುಲಿ ಮತ್ತು ಜಿರಾಫೆ ಜೀವಿಸಿದ್ದವು ಎಂದು ನಾವು ಹೇಳುವ ಕಾಲ ಬರಲಾರದು ಎಂದು ನಾನು ಬಾವಿಸುತ್ತೇನೆ, ಈ ಸಂಕಷ್ಟ ಕಾಲದಲ್ಲಿ ನಾವು ಪರಸ್ಪರರಿಗೆ ಜೊತೆಯಾಗಿ ನೆರವಿಗೆ ನಿಲ್ಲೋಣ, ಹಾಗೂ ಪ್ರಾಣಿ ಸಂಕುಲವನ್ನು ರಕ್ಷಿಸೋಣ ಎಂದು ದರ್ಶನ್ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ರಾಯಭಾರಿ ನಟ ದರ್ಶನ್ ಅವರಿಂದ ಪ್ರೇರೇಪಿತರಾದ ಪ್ರಾಣಿಪ್ರಿಯರು ಮೂರುದಿನದಿಂದ ಸುಮಾರು 40 ಲಕ್ಷ ರೂಪಾಯಿಗಳನ್ನು ವಿವಿಧ ಮೃಗಾಲಯಗಳಿಗೆ ದೇಣಿಗೆ ನೀಡಿದ್ದಾರೆ.
50 ರೂಪಾಯಿಯಿಂದ 1 ಲಕ್ಷ ರೂಪಾಯಿವರೆಗೆ ಸಾರ್ವಜನಿಕರು ದೇಣಿಗೆ ನೀಡಿದ್ದಾರೆ.
ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಅವರು ದರ್ಶನ್ ಅವರ ಸೇವೆಯನ್ನು ಪ್ರಶಂಸಿಸಿದ್ದಾರೆ.
ಮನರಂಜನೆ
ಚಂದನವನದ ಹಿರಿಯ ಪೋಷಕ ನಟಿ ಬಿ. ಜಯಾ ವಿಧಿವಶ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ಪೋಷಕ ನಟಿ ಬಿ. ಜಯಾ ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.
ರಂಗಭೂಮಿ ಹಿನ್ನೆಲೆಯಿಂದ ಬಂದಿದ್ದ ಬಿ. ಜಯಾ ಸಿನಿಮಾ ಜೊತೆಗೆ ಹಲವಾರು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ. ವರ ನಟ ಡಾ. ರಾಜಕುಮಾರ್ ಅವರ ಹೆಚ್ಚಿನ ಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ. ಅನೇಕ ದಿಗ್ಗಜರ ಚಿತ್ರಗಳಲ್ಲಿ ಅಭಿನಯಿಸಿದ ಜಯಾ ಅವರು ನಿಧನದ ಹಿನ್ನಲೆಯಲ್ಲಿ ಸ್ಯಾಂಡಲ್ವುಡ್ ಕಂಬನಿ ಮಿಡಿದಿದೆ.
ಮನರಂಜನೆ
ಬುದ್ಧಿಮಾಂದ್ಯ ಶಾಲೆಯ ಮಕ್ಕಳಿಗೆ ನೆರವಾಗುವ ಮೂಲಕ ಹೃದಯವಂತಿಕೆ ಮೆರೆದ ಕಿಚ್ಚ
ಬೆಂಗಳೂರು: ತಮ್ಮ ಚ್ಯಾರಿಟೇಬಲ್ ಟ್ರಸ್ಟ್ ಮೂಲಕ ಕಿಚ್ಚ ಸುದೀಪ್ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಎಲ್ಲರಿಗೂ ಗೊತ್ತೇ ಇದೆ.
ಇದೀಗ ಇವರು ತಮ್ಮ ಹುಡುಗರ ಮೂಲಕ ಗುಂಡ್ಲುಪೇಟೆಯ ಬುದ್ಧಿಮಾಂದ್ಯ ಶಾಲೆಯ ಮಕ್ಕಳಿಗೆ ನೆರವಾಗುವ ಮೂಲಕ ಹೃದಯವಂತಿಕೆ ಮೆರೆದಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಹಿರಿಯ ಕಲಾವಿದರಿಗೆ ಕಿಟ್ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದ ಸುದೀಪ್, ಶಾಲಾ ಶಿಕ್ಷಕರಿಗೂ ನೆರವಾಗಿದ್ದರು. ಇದೀಗ ಸಂಕಷ್ಟದಲ್ಲಿರುವ ಮಕ್ಕಳಿಗೆ ತಮ್ಮ ಕೈಲಾದ ನೆರವು ನೀಡಿದ್ದಾರೆ.
-
Politics3 weeks ago
ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕ ಎನ್. ಎಚ್.ಶಿವಶಂಕರ್ ರೆಡ್ಡಿ
-
Politics3 weeks ago
ನಾಯಕರುಗಳು ಜನರ ಜೀವನದ ಜೊತೆ ಹುಡುಗಾಟ ಆಡುತ್ತಿದ್ದಾರೆ : ಮಾಜಿ ನಗರಸಭೆ ಸದಸ್ಯ ಪಿ. ಯಲ್ಲಪ್ಪ ಆರೋಪ
-
ಸುದ್ದಿ3 weeks ago
ಹರಳಕೆರೆ ಗ್ರಾಮದಲ್ಲಿ ಹಸುವನ್ನು ಬಲಿತೆಗೆದುಕೊಂಡ ಚಿರತೆ : ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
-
ಕೊರೊನಾ3 weeks ago
ವಿದುರಾಶ್ವತ್ಥದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ವಿತರಣೆ